ನುಗ್ಗೇಹಳ್ಳಿ: ಮಹಿಳೆಯರು ಆರ್ಥಿಕವಾಗಿ ಬಲವರ್ಧನೆಗೊಳ್ಳಲು ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ನೆರವಾಗಿದೆ ಎಂದು ನುಗ್ಗೇಹಳ್ಳಿ ಪುರ ವರ್ಗ ಹಿರೇಮಠದ ಮಹೇಶ್ವರ ಶಿವಾಚಾರ್ಯ ಸ್ವಾಮೀಜಿ ಹೇಳಿದರು.

ಹೋಬಳಿಯ ವಿರುಪಾಕ್ಷಪುರ ಗ್ರಾಮದಲ್ಲಿ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಶ್ರವಣಬೆಳಗೊಳ ಯೋಜನಾ ಕಚೇರಿ ವತಿಯಿಂದ ಗ್ರಾಮದ ಲಕ್ಷ್ಮಮ್ಮ ಅವರಿಗೆ ವಾತ್ಸಲ್ಯ ಯೋಜನೆ ವತಿಯಿಂದ ನಿರ್ಮಾಣ ಮಾಡಲಾಗಿದ್ದ ಮನೆಯನ್ನು ಹಸ್ತಾಂತರಿಸಿ ಅವರು ಮಾತನಾಡಿದರು.

ಯೋಜನೆಯ ಜಿಲ್ಲಾ ನಿರ್ದೇಶಕ ಯೋಗೀಶ್ ಮಾತನಾಡಿ, ‘ಲಕ್ಷ್ಮಮ್ಮ ಅವರಿಗೆ ವಾತ್ಸಲ್ಯ ಮನೆ ಹಸ್ತಾಂತರ ಮಾಡಿರುವುದರ ಜೊತೆಗೆ ಪ್ರತಿ ತಿಂಗಳು ಮಾಸಾಶನ ನೀಡಲಾಗುತ್ತಿದೆ’ ಎಂದರು.

ಕಾರ್ಯಕ್ರಮದಲ್ಲಿ ಶ್ರವಣಬೆಳಗೊಳ ಯೋಜನಾ ಕಚೇರಿ ಯೋಜನಾಧಿಕಾರಿ ಕೆ. ಪುರಂದರ, ಮೇಲ್ವಿಚಾರಕರಾದ ಮಹದೇವ ಪ್ರಸಾದ್, ಜ್ಞಾನವಿಕಾಸ ಸಮನ್ವಯಾಧಿಕಾರಿ ಸರಸ್ವತಿ, ಗ್ರಾಮ ಪಂಚಾಯಿತಿ ಮಾಜಿ ಅದ್ಯಕ್ಷ ಮಂಜುನಾಥ್, ಜನಜಾಗೃತಿ ವಲಯಾಧ್ಯಕ್ಷ ಭಾರತೀಶ್, ಮೇಲ್ವಿಚಾರಕಿ ಲತಾ, ವಲಯದ ಸೇವಾಪ್ರತಿನಿಧಿಗಳು ಗ್ರಾಮಸ್ಥರು ಹಾಜರಿದ್ದರು.

ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ
260330-36-1085431437

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.