ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಕ್ರಿಯ ಪ್ರಕರಣಗಳ ಸಂಖ್ಯೆ 716

Last Updated 6 ಏಪ್ರಿಲ್ 2021, 14:37 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಮಂಗಳವಾರ 104 ಕೊರೊನಾ ಪ್ರಕರಣ ದೃಢಪಟ್ಟಿದೆ. ಆ ಮೂಲಕ ಸಕ್ರಿಯ ಪ್ರಕರಣಗಳ
ಸಂಖ್ಯೆ 716ಕ್ಕೆ ಏರಿಕೆಯಾಗಿದೆ.

ಒಟ್ಟಾರೆ ಸೋಂಕಿತರ ಸಂಖ್ಯೆ 29,979ಕ್ಕೆ ಹೆಚ್ಚಳವಾಗಿದೆ. ಹೊಸದಾಗಿ 40 ಮಂದಿ ಸೇರಿದಂತೆ ಈವರೆಗೆ 28,787 ಮಂದಿ ಗುಣಮುಖರಾಗಿದ್ದಾರೆ. ತೀವ್ರ ನಿಗಾ ಘಟಕದಲ್ಲಿ 9 ಮಂದಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕೋವಿಡ್ ಕಾಯಿಲೆಗೆ ಇಲ್ಲಿಯವರೆಗೆ ಒಟ್ಟು 476 ಮಂದಿ ಮೃತಪಟ್ಟಿದ್ದಾರೆ.

ಹೊಸದಾಗಿ ಹಾಸನ ತಾಲ್ಲೂಕಿನಲ್ಲಿ 37, ಅರಸೀಕೆರೆ 8, ಚನ್ನರಾಯಪಟ್ಟಣ 21, ಬೇಲೂರು 14,
ಹೊಳೆನರಸೀಪುರ 15, ಆಲೂರು 1, ಸಕಲೇಶಪುರ 4 ಹಾಗೂ ಅರಕಲಗೂಡು ತಾಲ್ಲೂಕಿನಲ್ಲಿ 4 ಮಂದಿಗೆ
ಕೋವಿಡ್-19 ದೃಢ ಪಟ್ಟಿದೆ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಕೆ.ಎಂ. ಸತೀಶ್
ಕುಮಾರ್‌ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT