ಶನಿವಾರ, ಜನವರಿ 28, 2023
25 °C

ಕಾಂಗ್ರೆಸ್‌ ಅಧ್ಯಕ್ಷರ ನೇಮಕಕ್ಕೆ ಆಕ್ಷೇಪ: ಪ್ರತಿಭಟನೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕಾಂಗ್ರೆಸ್‌ ಜಿಲ್ಲಾ ಘಟಕದ ನೂತನ ಅಧ್ಯಕ್ಷ ಈ.ಎಚ್‌. ಲಕ್ಷ್ಮಣ್ ನೇಮಕವನ್ನು ವಿರೋಧಿಸಿ ಕಾಂಗ್ರೆಸ್‌ ಕಾರ್ಯಕರ್ತರು ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿ ಎದುರು ಗುರುವಾರ ಪ್ರತಿಭಟನೆ ನಡೆಸಿದರು.

ಎಂಟು ತಿಂಗಳ ಹಿಂದೆ ಬಿಜೆಪಿ ಬಿಟ್ಟು ಕಾಂಗ್ರೆಸ್ ಪಕ್ಷ ಸೇರಿದ್ದ ಲಕ್ಷ್ಮಣ್ ಅವರನ್ನು ನೇಮಕ ಮಾಡಿರುವುದು ಸರಿಯಲ್ಲ. ಮೂಲ ಕಾಂಗ್ರೆಸ್ಸಿಗರನ್ನು ಕಡೆಗಣಿಸಿ, ವಲಸೆ ಬಂದವರಿಗೆ ಜಿಲ್ಲಾ ಘಟಕದ ಅಧ್ಯಕ್ಷ ಸ್ಥಾನ ನೀಡಿರುವುದಕ್ಕೆ ಹೈಕಮಾಂಡ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. 

ಜಿಲ್ಲಾ ಘಟಕದ ಅಧ್ಯಕ್ಷರನ್ನು ಕೂಡಲೇ ಬದಲಾವಣೆ ಮಾಡಬೇಕು. ಪಕ್ಷ ಸಂಘಟನೆಗೆ ದುಡಿದವರನ್ನು ನೇಮಕ ಮಾಡಬೇಕು ಎಂದು ಒತ್ತಾಯಿಸಿದರು. 

ಕಾಂಗ್ರೆಸ್ ಜಿಲ್ಲಾ ಉಸ್ತುವಾರಿ ಧ್ರವನಾರಾಯಣ್, ದೂರವಾಣಿ ಕರೆ ಮೂಲಕ ‘ಕೆಲ ದಿನಗಳಲ್ಲಿ ಜಿಲ್ಲೆಗೆ ಭೇಟಿ ನೀಡಿ ನೇಮಕ ಕುರಿತು ಗೊಂದಲ ನಿವಾರಿಸುವುದಾಗಿ’ ಭರವಸೆ ನೀಡಿರು. ನಂತರ ಕಾರ್ಯಕರ್ತರು ಪ್ರತಿಭಟನೆ ಕೈಬಿಟ್ಟರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು