ಓದುವ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕರೆ

7
ಕಸಾಪ ಜಿಲ್ಲಾ ಘಟಕದ ಅಧ್ಯಕ್ಷ ಮಂಜೇಗೌಡ

ಓದುವ ಸಾಮರ್ಥ್ಯ ಹೆಚ್ಚಿಸಿಕೊಳ್ಳಲು ಕರೆ

Published:
Updated:
Deccan Herald

ಹಾಸನ : ಸ್ಪರ್ಧಾ ಜಗತ್ತಿನಲ್ಲಿ ವಿದ್ಯಾರ್ಥಿಗಳು ಭವಿಷ್ಯ ರೂಪಿಸಿಕೊಳ್ಳಲು ಶಿಕ್ಷಣ ಸಹಕಾರಿಯಾಗಲಿದೆ ಎಂದು ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾ ಘಟಕದ ಅಧ್ಯಕ್ಷ ನಾಯಕರಹಳ್ಳಿ ಮಂಜೇಗೌಡ ಅಭಿಪ್ರಾಯಪಟ್ಟರು.

ನಗರದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನಲ್ಲಿ ಕನ್ನಡ ವಿಭಾಗ ಹಾಗೂ ಕನ್ನಡ ಪುಸ್ತಕ ಪ್ರಾಧಿಕಾರದ ಆಶ್ರಯದಲ್ಲಿ ಜಾಣೆ-ಜಾಣೆಯರ ಬಳಗದ ವತಿಯಿಂದ ನಡೆದ ‘ನಾ ಮೆಚ್ಚಿದ ಕೃತಿ’-ಅಭಿಪ್ರಾಯ ಮಂಡನೆ ಕುರಿತು ಅಂತರ ಕಾಲೇಜು ಸ್ಪರ್ಧೆ ಉದ್ಘಾಟಿಸಿ ಮಾತನಾಡಿದರು.

ನಿರಂತರ ಕಲಿಕೆ, ಕಠಿಣ ಪರಿಶ್ರಮ ಹಾಗೂ ನಿರ್ದಿಷ್ಟ ಗುರಿ ಹೊಂದಿ ಜೀವನದಲ್ಲಿ ಏನಾದರೂ ಸಾಧಿಸಿ ಸಮಾಜದಲ್ಲಿ ಉನ್ನತ ಸ್ಥಾನ ಪಡೆಯಲು ಸಾಧ್ಯ. ಹಿಂದೆ ವಿದ್ಯಾರ್ಥಿಗಳಿಗೆ ಮಾರ್ಗದರ್ಶಕರು ಕಡಿಮೆ ಇದ್ದರು. ಆದರೆ, ಪ್ರಸ್ತುತ ತಂತ್ರಜ್ಞಾನ ಸಾಕಷ್ಟು ಬೆಳೆದಿದ್ದು, ಮಾರ್ಗದರ್ಶಕರ ಕೊರತೆ ಇಲ್ಲ. ಉಪನ್ಯಾಸಕರ ಮಾರ್ಗದರ್ಶನ ಪಡೆದು ಬದುಕು ಕಟ್ಟಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಸೆಮಿಸ್ಟರ್ ಪದ್ಧತಿಯಿಂದ ವಿದ್ಯಾರ್ಥಿಗಳ ಮೇಲಿನ ಹೊಣೆಗಾರಿಕೆ ಕಡಿಮೆಯಾಗುತ್ತಿದ್ದು, ಓದುವ ಸಾಮರ್ಥ್ಯವೂ ಕಡಿಮೆಯಾಗುತ್ತಿದೆ. ನಿರಂತರ ಅಧ್ಯಯನದಲ್ಲಿ ತೊಡಗಿಕೊಂಡು ಜ್ಞಾನ ಹೆಚ್ಚಿಸಿಕೊಳ್ಳಬೇಕು ಎಂದು ಕರೆ ನೀಡಿದರು.

ಕಾಲೇಜಿನ ಪ್ರಾಂಶುಪಾಲ ಕೆ.ಟಿ.ಕೃಷ್ಣೇಗೌಡ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಪುಸ್ತಕ ಓದುವ ಪ್ರವೃತ್ತಿ ಮರೆಯಾಗುತ್ತಿದ್ದು, ಇದರಿಂದ ಜ್ಞಾನದ ಕೊರತೆ ಉಂಟಾಗಲಿದೆ. ಪುಸ್ತಕಗಳನ್ನು ಓದುವುದರಿಂದ ಭಾಷಾ ಪಾಂಡಿತ್ಯ ಕೂಡ ಹೆಚ್ಚಾಗಲಿದೆ ಎಂದು ಕಿವಿಮಾತು ಹೇಳಿದರು.

ಸ್ಪರ್ಧೆಯಲ್ಲಿ ಹೊಳೆನರಸೀಪುರದ ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕಿ ಪಿ.ಭಾರತಿದೇವಿ, ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ಬಿ.ಎಚ್.ರಾಮೇಗೌಡ ಮತ್ತು ಜಾವಗಲ್ ನ ಮಹಿಳಾ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ಸಹಾಯಕ ಪ್ರಾಧ್ಯಾಪಕ ವೈ.ಎಚ್.ಮಹೇಶ್ ತೀರ್ಪುಗಾರರಾಗಿ ಭಾಗವಹಿಸಿದ್ದರು.

ಸರ್ಕಾರಿ ಗೃಹ ವಿಜ್ಞಾನ ಕಾಲೇಜಿನ ಕನ್ನಡ ವಿಭಾಗದ ಪ್ರಾಧ್ಯಾಪಕ ಹಾಗೂ ಜಾಣ-ಜಾಣೆಯರ ಬಳಗದ ಸಂಚಾಲಕ ಎನ್.ಸಿ.ರವಿ, ಬಳಗದ ಎಚ್.ಆರ್.ಜ್ಯೋತಿ, ಕಾಲೇಜಿನ ಉಪನ್ಯಾಸಕರು ಹಾಗೂ ವಿದ್ಯಾರ್ಥಿಗಳು ಇದ್ದರು.

Tags: 

ಬರಹ ಇಷ್ಟವಾಯಿತೆ?

 • 0

  Happy
 • 0

  Amused
 • 0

  Sad
 • 0

  Frustrated
 • 0

  Angry

Comments:

0 comments

Write the first review for this !