ಶುಕ್ರವಾರ, ಮೇ 27, 2022
23 °C

ಹೊಳೆನರಸೀಪುರ: ಕೋವಿಡ್‌ನಿಂದ ಅಧಿಕಾರಿ ಸಾವು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೊಳೆನರಸೀಪುರ: ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆಯ ಗ್ರೇಡ್– 2 ಸಹಾಯಕ ನಿರ್ದೇಶಕ ಸಿ.ಟಿ. ಚಂದ್ರಶೇಖರ್ (47) ಕೋವಿಡ್‌ನಿಂದ ಭಾನುವಾರ ಮಧ್ಯಾಹ್ನ ನಿಧನರಾದರು.

ಗ್ರೇಡ್– 2 ಸಹಾಯಕ ನಿರ್ದೇಶಕರಾಗಿ ಮೇ 10ರಂದು ಅಧಿಕಾರ ಸ್ವೀಕರಿಸಿದ್ದ ಇವರಿಗೆ ಕೊರೊನಾ ಸೋಂಕು ತಗುಲಿತ್ತು. ಹೋಂ ಕ್ವಾರಂಟೈನ್‍ನಲ್ಲಿದ್ದ ಇವರಿಗೆ ಭಾನುವಾರ ಉಸಿರಾಟದ ತೊಂದರೆ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ಕರೆದುಕೊಂಡು ಹೋಗುವಾಗ ದಾರಿಯಲ್ಲೇ ಮೃತಪಟ್ಟಿದ್ದಾರೆ.

ಅವರಿಗೆ ತಾಯಿ, ಪತ್ನಿ, ಮೂವರು ಪುತ್ರಿಯರು, ಒಬ್ಬ ಪುತ್ರ ಇದ್ದಾರೆ. ಅಂತ್ಯಕ್ರಿಯೆ ಅರಕಲಗೂಡು ತಾಲ್ಲೂಕಿನ ಮಲ್ಲಿಪಟ್ಟಣ ಸಮೀಪದ ಚಿಕ್ಕಬಂಡಾರ ಗ್ರಾಮದಲ್ಲಿ ನಡೆಯಿತು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು