ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

2ನೇ ದಿನವೂ ಸೂಚ್ಯಂಕ ಏರಿಕೆ

Last Updated 25 ಮೇ 2018, 19:30 IST
ಅಕ್ಷರ ಗಾತ್ರ

ಮುಂಬೈ: ಇಂಧನ, ಲೋಹ, ಮೂಲಸೌಕರ್ಯ, ಆಟೊಮೊಬೈಲ್‌ ಮತ್ತು ಬ್ಯಾಂಕ್ ಷೇರುಗಳಲ್ಲಿನ ಖರೀದಿ ಆಸಕ್ತಿ ಫಲವಾಗಿ ಮುಂಬೈ ಷೇರುಪೇಟೆ ಸಂವೇದಿ ಸೂಚ್ಯಂಕವು ಸತತ ಎರಡನೇ ದಿನವೂ ಚೇತರಿಕೆ ಕಂಡಿದೆ.

261 ಅಂಶಗಳ ಹೆಚ್ಚಳದಿಂದ ಸಂವೇದಿ ಸೂಚ್ಯಂಕವು ಶುಕ್ರವಾರದ ವಹಿವಾಟಿನಲ್ಲಿ 34,924 ಅಂಶಗಳಲ್ಲಿ ದಿನದ ವಹಿವಾಟು ಕೊನೆಗೊಳಿಸಿತು.

ರಾಷ್ಟ್ರೀಯ ಷೇರುಪೇಟೆ (ಎನ್‌ಎಸ್‌ಇ) ‘ನಿಫ್ಟಿ’ 92 ಅಂಶಗಳ ಹೆಚ್ಚಳ ಕಂಡು 10,600ರ ಗಡಿ ದಾಟಿತು.

ಡಾಲರ್ ಎದುರಿನ ರೂಪಾಯಿ ವಿನಿಮಯ ದರವು ಗಮನಾರ್ಹ ಚೇತರಿಕೆ ಕಂಡಿರುವುದು ಮತ್ತು ದೇಶಿ ಸಾಂಸ್ಥಿಕ ಹೂಡಿಕೆದಾರರ ನಿರಂತರ ಖರೀದಿ ಬೆಂಬಲದ ಕಾರಣಕ್ಕೆ ಪೇಟೆಯಲ್ಲಿ ಉತ್ಸಾಹ ಕಂಡು ಬಂದಿದೆ ಎಂದು ದಲ್ಲಾಳಿಗಳು ತಿಳಿಸಿದ್ದಾರೆ.

**

ಹೂಡಿಕೆದಾರರ ಸಂಪತ್ತು ವೃದ್ಧಿ

ನವದೆಹಲಿ: ನರೇಂದ್ರ ಮೋದಿ ಸರ್ಕಾರದ ನಾಲ್ಕು ವರ್ಷಗಳ ಅವಧಿಯಲ್ಲಿ ಸಂವೇದಿ ಸೂಚ್ಯಂಕವು ಶೇ 41ರಷ್ಟು ಏರಿಕೆಯಾಗಿ ಹೂಡಿಕೆದಾರರ ಸಂಪತ್ತನ್ನು ₹ 72 ಲಕ್ಷ ಕೋಟಿಗಳಷ್ಟು ಹೆಚ್ಚಿಸಿದೆ. ಈ ಅವಧಿಯಲ್ಲಿ ಪೇಟೆಯ ಒಟ್ಟಾರೆ ಮಾರುಕಟ್ಟೆ ಮೌಲ್ಯವು ₹ 75 ಲಕ್ಷ ಕೋಟಿಗಳಿಂದ ₹ 147 ಲಕ್ಷ ಕೋಟಿಗಳಿಗೆ ತಲುಪಿದೆ.

2014ರ ಮೇ ತಿಂಗಳಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರ ಅಧಿಕಾರಕ್ಕೆ ಬಂದ ನಂತರದ ವರ್ಷಗಳಲ್ಲಿ ಸೂಚ್ಯಂಕವು 10,207 ಅಂಶಗಳಷ್ಟು ಏರಿಕೆ ಕಂಡಿದೆ. ಈ ವರ್ಷದ ಜೂನ್‌ 29ರಂದು ಸೂಚ್ಯಂಕವು 36,443.98 ಅಂಶಗಳಿಗೆ ಏರಿಕೆಯಾಗಿ ಸಾರ್ವಕಾಲಿಕ ದಾಖಲೆ ನಿರ್ಮಿಸಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT