ಬುಧವಾರ, 19 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಪಾರ್ಟ್‌ಟೈಂ ಕೆಲಸ ಕೊಡಿಸುವುದಾಗಿ ಆಮಿಷ, ₹1.59 ಲಕ್ಷ ಗುಳುಂ

Published 19 ಆಗಸ್ಟ್ 2023, 6:15 IST
Last Updated 19 ಆಗಸ್ಟ್ 2023, 6:15 IST
ಅಕ್ಷರ ಗಾತ್ರ

ಹಾಸನ: ಅಪರಿಚಿತ ವ್ಯಕ್ತಿಯೊಬ್ಬ ಮೊಬೈಲ್‌ಗೆ ಸಂದೇಶ ಕಳುಹಿಸಿ, ಪಾರ್ಟ್‌ಟೈಂ ಕೆಲಸ ಕೊಡಿಸುವುದಾಗಿ ನಂಬಿಸಿ ₹1.59 ಲಕ್ಷ ವಂಚನೆ ಮಾಡಿದ್ದಾನೆ.

ಅಪರಿಚಿತ ವ್ಯಕ್ತಿಯು ಕರೆ ಮಾಡಿ, ಅರೆಕಾಲಿಕ ಉದ್ಯೋಗ ನೀಡುವುದಾಗಿ ಮೆಸೇಜ್ ಕಳುಹಿಸಿದ್ದ. ಕೆಲವು ಟಾಸ್ಕ್‌ಗಳನ್ನು ನೀಡಿದ್ದು, ಮೊದಲಿಗೆ ₹ 150 ಅನ್ನು ಖಾತೆಗೆ ಕಳುಹಿಸಿದ್ದ. ನೀವು ಹೆಚ್ಚು ಹಣವನ್ನು ಹೂಡಿಕೆ ಮಾಡಿ, ನಾವು ಕೊಡುವ ಟಾಸ್ಕ್‌ ಪೂರ್ಣಗೊಳಿಸಿದರೆ, ಹೆಚ್ಚು ಹಣ ಕೊಡುವುದಾಗಿ ನಂಬಿಸಿದ್ದ.

ಪೇಟಿಎಂ ಹಾಗೂ ಮೊಬೈಲ್ ಬ್ಯಾಂಕಿಗ್ ಮೂಲಕ ಒಟ್ಟು ₹ 1.59 ಲಕ್ಷ ಹಣವನ್ನು ವರ್ಗಾಯಿಸಿಕೊಂಡಿದ್ದಾನೆ. ಯಾವುದೇ ಕೆಲಸವನ್ನು ಮತ್ತು ಹಣವನ್ನು ಕೊಡದೇ ಇದ್ದುದರಿಂದ ಮೋಸ ಹೋಗಿರುವುದು ಗೊತ್ತಾಗಿದೆ. ಸೆನ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT