ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೇ 82 ಮಕ್ಕಳಷ್ಟೇ ಶಾಲೆಗೆ ಹಾಜರು

ಉಳಿದ ತರಗತಿ ಆರಂಭಿಸಲು ಶಿಕ್ಷಣ ಇಲಾಖೆ ಸಿದ್ಧತೆ  
Last Updated 24 ಸೆಪ್ಟೆಂಬರ್ 2021, 16:59 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಪ್ರಮಾಣ ಕಡಿಮೆ ಆದ ಬಳಿಕ 6ರಿಂದ 8ನೇ ತರಗತಿ
ಆರಂಭವಾಗಿಇಪ್ಪತ್ತುದಿನ ಕಳೆದರೂ ಎಲ್ಲಾ ಮಕ್ಕಳು ಶಾಲೆಗೆ ಹಾಜರಾಗುತ್ತಿಲ್ಲ.

ಸಾರ್ವಜನಿಕ ಶಿಕ್ಷಣ ಇಲಾಖೆ ಮಾಹಿತಿ ಪ್ರಕಾರ, ಸರ್ಕಾರಿ ಮತ್ತು ಖಾಸಗಿ ಶಾಲೆ ಸೇರಿ ಶೇ 82 ರಷ್ಟು ಮಕ್ಕಳು ತರಗತಿಗೆ ಹಾಜರಾಗುತ್ತಿದ್ದಾರೆ. ಸೆ.6 ರಿಂದ 6–8ನೇ ತರಗತಿಯ ಸುಮಾರು 64,230ಮಕ್ಕಳಿಗೆ ಭೌತಿಕ ತರಗತಿ ಆರಂಭಿಸಲಾಗಿದೆ.

‘ಶಾಲೆ ಆರಂಭವಾದ ದಿನದಿಂದ ಈವರೆಗೆ ಜಿಲ್ಲೆಯ ಯಾವುದೇ ಶಾಲೆಯಲ್ಲೂ ಸೋಂಕಿನ ಪ್ರಕರಣಕಂಡು ಬಂದಿಲ್ಲ. ಅದಕ್ಕಾಗಿ ಜಿಲ್ಲಾಡಳಿತ ಎಲ್ಲಾ ರೀತಿಯ ಮುಂಜಾಗ್ರತಾ ಕ್ರಮ ಕೈಗೊಂಡಿದೆ. ಮಕ್ಕಳು ಹಾಗೂ ಪೋಷಕರಲ್ಲಿ ಇರುವ ಕೊರೊನಾ ಭಯ ಇನ್ನೂ ಹೋಗಿಲ್ಲ. ಮನೆಯಲ್ಲೇ ಉಳಿದಿರುವ ವಿದ್ಯಾರ್ಥಿಗಳಿಗೆ ಆನ್‌ಲೈನ್ ಶಿಕ್ಷಣ ಪದ್ಧತಿ ಮುಂದುವರಿಸಲಾಗಿದೆ’ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಕೆ.ಎಸ್.ಪ್ರಕಾಶ್ ತಿಳಿಸಿದರು.

ಹಲವು ತಿಂಗಳ ನಂತರ ಇನ್ನೂ ಆರಂಭವಾಗದೇ ಇರುವ 1 ರಿಂದ 1ನೇ ತರಗತಿ ಆರಂಭಕ್ಕೆ ಇಲಾಖೆ ಎಲ್ಲಾ ರೀತಿಯಲ್ಲಿ ಸಿದ್ಧತೆ ಮಾಡಿಕೊಂಡಿದೆ.ಜಿಲ್ಲೆಯಲ್ಲಿ ಸರ್ಕಾರಿ ಮತ್ತು ಖಾಸಗಿ ಅನುದಾನಿತ ಸೇರಿ 1308 ಪ್ರಾಥಮಿಕ ಶಾಲೆಗಳಿದ್ದು, ಒಟ್ಟಾರೆ 1,04,253 ವಿದ್ಯಾರ್ಥಿಗಳಿದ್ದಾರೆ. ತರಗತಿಗಳ ಆರಂಭಕ್ಕೆ ಶಿಕ್ಷಣ ಇಲಾಖೆ ಅಗತ್ಯ ಮುನ್ನೆಚ್ಚರಿಕೆ ಜೊತೆಗೆ ಪೂರಕವಾದ ವ್ಯವಸ್ಥೆ ಮಾಡಿಕೊಂಡಿದೆ.

ಬಹುತೇಕ ಶಿಕ್ಷಕರು ಎರಡೂ ಡೋಸ್ ಕೊರೊನಾ ಲಸಿಕೆ ಪಡೆದುಕೊಂಡಿದ್ದಾರೆ. ಜೊತೆಗೆ ಶಾಲಾ ಕೊಠಡಿ, ಆವರಣದ ಸ್ವಚ್ಚಗೊಳಿಸಲಾಗಿದೆ. ಸರ್ಕಾರದಿಂದ ಅನುಮತಿ ಸಿಕ್ಕ ತಕ್ಷಣ ತರಗತಿ ಆರಂಭಿಸಲು ಇಲಾಖೆ ಸಿದ್ದತೆ ಮಾಡಿಕೊಂಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT