ಮಂಗಳವಾರ, ಮೇ 17, 2022
29 °C
ಅಧಿಕಾರಿಗಳಿಗೆ ಡಿ.ಸಿ ಆರ್‌. ಗಿರೀಶ್‌ ಸೂಚನೆ

ಫೆ. 11ರ ಬಳಿಕ ವಿಂಗಡಿಸಿದ ಕಸ ಮಾತ್ರ ಸಂಗ್ರಹಿಸಿ’

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ‘ಒಣ ಮತ್ತು ಹಸಿ ಕಸವನ್ನು ಕಡ್ಡಾಯವಾಗಿ ವಿಂಗಡಿಸಿ ನೀಡುವಂತೆ ಸಾರ್ವಜನಿಕರಲ್ಲಿ ಅರಿವು ಮೂಡಿಸಲು ಫೆ. 10ರವರೆಗೆ ಅಭಿಯಾನದ ರೂಪದಲ್ಲಿ ಪ್ರಚಾರ ಮಾಡಲು ಕ್ರಮಕೈಗೊಳ್ಳಿ’ ಎಂದು ಸ್ಥಳೀಯ ಸಂಸ್ಥೆಯ ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಆರ್.ಗಿರೀಶ್ ಸೂಚನೆ ನೀಡಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣಲ್ಲಿ ಸೋಮವಾರ ಸ್ಥಳೀಯ ಸಂಸ್ಥೆಗಳ ಪ್ರಗತಿ ಪರಿಶೀಲನೆ ನಡೆಸಿದ ಅವರು, ‘ಫೆ. 11 ರಿಂದ ಕಡ್ಡಾಯವಾಗಿ ವಿಂಗಡಣೆ ಮಾಡಿದ ಕಸವನ್ನು ಮಾತ್ರ ಸಂಗ್ರಹಣೆ ಮಾಡಬೇಕು’ ಎಂದು ಅಧಿಕಾರಿಗಳಿಗೆ ತಿಳಿಸಿದರು.

14 ಮತ್ತು 15 ನೇ ಹಣಕಾಸಿನಲ್ಲಿ ಬಾಕಿ ಇರುವ ಕಾಮಗಾರಿಗಳನ್ನು 15 ದಿನಗಳಲ್ಲಿ ಕೆಲಸ ಪ್ರಾರಂಭಿಸಬೇಕು. ಜತೆಗೆ ಕಾಮಗಾರಿಯ ಗುಣಮಟ್ಟದ ಬಗ್ಗೆ ಗಮನ ಹರಿಸಬೇಕು ಎಂದು ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಎಸ್.ಇ.ಪಿ ಮತ್ತು ಟಿ.ಎಸ್.ಪಿ ಯೋಜನೆಯ ಅನುಷ್ಠಾನಕ್ಕೆ ನಿರ್ಲಕ್ಷ್ಯ ತೋರುವಂತಿಲ್ಲ. ಎಲ್ಲಾ ಮುಖ್ಯಾಧಿಕಾರಿಗಳು ಈ ಯೋಜನೆಯಡಿ ಅರ್ಹರಿಗೆ ಸವಲತ್ತನ್ನು ಒದಗಿಸಲು ಕ್ರಮ ಕೈಗೊಳ್ಳಬೇಕು ಎಂದರು.

ಸ್ಥಳೀಯ ಸಂಸ್ಥೆಗಳಲ್ಲಿ ಅಂಗವಿಕಲರಿಗೆ ನಿಗಧಿ ಪಡಿಸಿರುವ ಅನುದಾನವನ್ನು ನಗರ ಪ್ರದೇಶದಲ್ಲಿರುವ ಅಂಗವಿಕಲರಿಗೆ ಅಗತ್ಯ ಸಲಕರಣೆಗಳನ್ನು ನೀಡಲು ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದರು.

ಆಸ್ತಿ ತೆರಿಗೆ, ನೀರಿನ ಕರ ವಸೂಲಿ ಮತ್ತಿತರ ವಿಷಯಗಳ ಕುರಿತು ಪರಿಶೀಲಿಸಿ, ವಸೂಲಾತಿಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಆದೇಶಿಸಿದರು.

ಸಭೆಯಲ್ಲಿ ಉಪವಿಭಾಗಾಧಿಕಾರಿ ಹಾಗೂ ಜಿಲ್ಲಾ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕ ಬಿ.ಎ ಜಗದೀಶ್, ಹಾಸನ ನಗರಸಭೆ ಆಯುಕ್ತ ಕೃಷ್ಣಮೂರ್ತಿ, ಅರಸೀಕೆರೆ ನಗರಸಭೆ ಆಯುಕ್ತ ಕಾಂತರಾಜು, ಕಾರ್ಯಪಾಲಕ ಎಂಜಿನಿಯರ್ ಕೆ. ಶಿವಾನಂದ್, ಸಹಾಯಕ ಕಾರ್ಯಪಾಲಕ ಎಂಜಿನಿಯರ್ ಮಂಜುನಾಥ್ ಹಾಗೂ ಮತ್ತಿತರ ಅಧಿಕಾರಿಗಳು ಹಾಜರಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು