ಹಾಸನ: ‘ಆಪರೇಷನ್ ಸಿಂಧೂರ್’ ಕಾರ್ಯಾಚರಣೆ ವೇಳೆ ದೇಶಕ್ಕಾಗಿ ಹುತಾತ್ಮರಾದ ವೀರ ಯೋಧರಿಗೆ ಕದಂಬ ಸೈನ್ಯ ಕನ್ನಡ ಸಂಘಟನೆ ಸದಸ್ಯರು ಜಿಲ್ಲಾಧಿಕಾರಿ ಕಚೇರಿ ಎದುರು ಪುಷ್ಪಾರ್ಚನೆ ಮೂಲಕ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸಿದರು.

ಈ ವೇಳೆ ಸಂಘದ ರಾಜ್ಯ ಘಟಕದ ಅಧ್ಯಕ್ಷ ಬೇಕ್ರಿ ರಮೇಶ್ ಮಾತನಾಡಿ, ‘ಪಹಲ್ಗಾಮ್ ದಾಳಿಗೆ ಪ್ರತೀಕಾರವಾಗಿ, ಭಾರತೀಯ ಸೇನೆಯು ‘ಆಪರೇಷನ್ ಸಿಂಧೂರ’ವನ್ನು ಆರಂಭಿಸಿ ಪಾಕಿಸ್ತಾನದೊಳಗೆ ದಾಳಿ ನಡೆಸಿ ಭಯೋತ್ಪಾದಕ ಶಿಬಿರಗಳನ್ನು ಗುರಿಯಾಗಿಸಿಕೊಂಡು ನಾಶಪಡಿಸಲಾಗಿದೆ’ ಎಂದರು.

‘ಈ ದಾಳಿಯಲ್ಲಿ ನೂರಾರು ಭಯೋತ್ಪಾದಕರನ್ನು ನಿರ್ಮೂಲನೆ ಮಾಡುವ ಮೂಲಕ ಭಯೋತ್ಪಾದನೆಯನ್ನು ಸಹಿಸಲಾಗುವುದಿಲ್ಲ ಎಂಬ ದಿಟ್ಟ ಸಂದೇಶವನ್ನು ಜಗತ್ತಿಗೆ ರವಾನಿಸಿದೆ. ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರವು ಪ್ರತೀಕಾರ ಮೂಲಕ ಮುಗ್ಧ ಹಿಂದೂಗಳ ರಕ್ತದ ಪ್ರತಿ ಹನಿಗೂ ನ್ಯಾಯ ಒದಗಿಸಿದೆ’ ಎಂದರು.

‘ಕೇಂದ್ರ ಸರ್ಕಾರ ಯಾವುದೇ ರಾಷ್ಟ್ರ ಮಧ್ಯಸ್ಥಿಕೆ ವಹಿಸಿದರೆ ಕದನ ವಿರಾಮ ಘೋಷಣೆ ಮಾಡಬಾರದು. ಕದನ ವಿರಾಮ ಮಾಡಿದ್ದಕ್ಕೆ ಭಾರತದ ಗಡಿ ಭಾಗದ ಜಮ್ಮು ಕಾಶ್ಮೀರ ರಾಜಸ್ಥಾನ ಮತ್ತು ಗುಜರಾತ್ ಮೇಲೆ ಕ್ಷಿಪಣಿ ದಾಳಿ ಮಾಡಿದ್ದಾರೆ. ಪಾಕಿಸ್ತಾನ ಕದನ ವಿರಾಮ ಉಲ್ಲಂಘನೆ ಮಾಡಿದ್ದು ಯಾವುದೇ ಕಾರಣಕ್ಕೂ ಆಪರೇಷನ್ ಸಿಂಧೂರವನ್ನು ನಿಲ್ಲಿಸುವುದಿಲ್ಲ ಎಂದು ಎಚ್ಚರಿಕೆ ನೀಡಬೇಕು’ ಎಂ ಹೇಳಿದರು.

‘ಪಾಕಿಸ್ತಾನ ಕಳೆದು 50 ವರ್ಷಗಳಿಂದ ಭಯೋತ್ಪಾದಕರಿಗೆ ಆಶ್ರಯ ನೀಡುತ್ತಲೇ ಬಂದಿದೆ. ಸಾವಿರಾರು ಅಮಾಯಕ ಜನರ ಮೇಲೆ ದಾಳಿ ನಡೆಯುತ್ತಲಿದೆ. ಭಯೋತ್ಪಾದಕರನ್ನು ಬುಡ ಸಮೇತ ತೆಗೆದು ಹಾಕಲು ದೇಶದ ಸೈನಿಕರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಆದೇಶ ನೀಡಬೇಕು’ ಎಂದು ಮನವಿ ಮಾಡಿದರು.

‘ನಮಗಾಗಿ ನಮ್ಮ ದೇಶಕ್ಕಾಗಿ ಪ್ರಾಣ ತ್ಯಾಗ ಮಾಡಿದ ವೀರ ಯೋಧರಿಗೆ ಪ್ರತಿ ಮನೆ ಮನೆಯಲ್ಲಿ ಶ್ರದ್ಧಾಂಜಲಿ ಸಲ್ಲಿಸುವ ಮೂಲಕ ಅವರ ಆತ್ಮಕ್ಕೆ ಗೌರವ ಪೂರಕವಾಗಿ ಕೃತಜ್ಞತೆ ಸಲ್ಲಿಸುವುದು ಭಾರತ ದೇಶದ ಎಲ್ಲಾ ಪ್ರಜೆಗಳ ಕರ್ತವ್ಯ ಎಂದರು.

ಇದೇ ಸಂದರ್ಭದಲ್ಲಿ ಸಂಘದ ಜಿಲ್ಲಾ ಉಪಾಧ್ಯಕ್ಷ ಯಾಕೂಬ್ ಖಾನ್ ಗೊರೂರು, ಸಕಲೇಶಪುರ ತಾಲ್ಲೂಕು ಘಟಕದ ಅಧ್ಯಕ್ಷ ವಿಶ್ವಾಸ್ ಬಿ. ಗೌಡ, ಹಿರಿಯ ಸಾಹಿತಿ ಅನಂತರಾಜ್, ಹೋರಾಟಗಾರರಾದ ಪ್ರಕಾಶ್, ರಾಮು ಚಿಕ್ಕೆಗೌಡನದೊಡ್ಡಿ, ಮಂಡ್ಯ ಜಿಲ್ಲೆ ಸಂಚಾಲಕ ಸಲ್ಮಾನ್ ಪ್ರಮುಖರು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.