ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ರ್‍ಯಾಲಿಗೆ ನಿರ್ಬಂಧ, ಬಸ್‌ ಸಂಚಾರ ಅಬಾಧಿತ

ವಾರಾಂತ್ಯ ಕರ್ಫ್ಯೂ ಜಿಲ್ಲೆಯಲ್ಲೂ ಕಟ್ಟುನಿಟ್ಟಿನ ಜಾರಿ: ಸಹಕರಿಸಲು ಜಿಲ್ಲಾಧಿಕಾರಿ ಮನವಿ
Last Updated 6 ಜನವರಿ 2022, 15:51 IST
ಅಕ್ಷರ ಗಾತ್ರ

ಹಾಸನ: ಕೊರೊನಾ ಸೋಂಕಿತರ ಸಂಖ್ಯೆ ಏರಿಕೆ ಆಗುತ್ತಿರುವ ಹಿನ್ನೆಲೆಯಲ್ಲಿ ಸರ್ಕಾರದ ಮಾರ್ಗಸೂಚಿ ಪ್ರಕಾರ ಜಿಲ್ಲೆಯಲ್ಲೂ ವಾರಾಂತ್ಯಕರ್ಫ್ಯೂವನ್ನು ಕಟ್ಟುನಿಟ್ಟಾಗಿಜಾರಿಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ಹೇಳಿದರು.

ಜ.19ರವರೆಗೆ ರಾತ್ರಿ 10ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಹಾಗೂ ಜ.7ರರಾತ್ರಿ 10ರಿಂದ ಜ.10ರ ಬೆಳಿಗ್ಗೆ 5ರವರೆಗೆ ವಾರಾಂತ್ಯ ಕರ್ಫ್ಯೂ ಜಾರಿಯಲ್ಲಿರಲಿದೆ. ಈಸಂದರ್ಭದಲ್ಲಿ ಸಾರ್ವಜನಿಕರು ಅನಗತ್ಯವಾಗಿ ಓಡಾಡುವುದನ್ನು ನಿಷೇಧಿಸಲಾಗಿದೆ. ಸಾರಿಗೆ ವ್ಯವಸ್ಥೆ ಎಂದಿನಂತೆ ಕಾರ್ಯ ನಿರ್ವಹಿಸಲಿದೆ ಎಂದು ಗುರುವಾರ ಸುದ್ದಿಗಾರರಿಗೆ ತಿಳಿಸಿದರು.

ಈ ಅವಧಿಯಲ್ಲಿ ರ್‍ಯಾಲಿ, ಧರಣಿ, ಪ್ರತಿಭಟನೆ ಹಾಗೂ ಮುಷ್ಕರ ನಡೆಸದಂತೆ ನಿಷೇಧಹೇರಲಾಗಿದ್ದು, ಪ್ರತಿಯೊಬ್ಬರೂ ಸಹಕಾರ ನೀಡಬೇಕು ಎಂದು ಮನವಿ ಮಾಡಿದರು.

ಮೋಜು, ಮಸ್ತಿ, ಮನರಂಜನಾ ಕಾರ್ಯಕ್ರಮಗಳ ಆಚರಣೆಗೆ ಅವಕಾಶವಿಲ್ಲ. ಮದುವೆಸಮಾರಂಭದಲ್ಲಿ ಒಳಾಂಗಣ 200 ಹಾಗೂ ಹೊರಗಡೆಯಾದರೆ 200 ಜನ ಮೀರಬಾರದು.ದೇವಸ್ಥಾನದಲ್ಲಿ ಸಾಮಾನ್ಯ ಪೂಜೆಗಷ್ಟೇ ಅವಕಾಶ ಕಲ್ಪಿಸಿದ್ದು, ವಿಶೇಷ ಪೂಜೆ,ಜಾತ್ರೆ, ಸಮಾರಂಭಗಳಿಗೆ ಅವಕಾಶವಿಲ್ಲ ಎಂದು ಹೇಳಿದರು.

ಅಗತ್ಯ ಸೇವೆಗಳು, ದೈನಂದಿನ ಬಳಕೆ ಸಾಮಗ್ರಿಗಳ ಖರೀದಿಗೆ ಅವಕಾಶಕಲ್ಪಿಸಿದ್ದು, ವಾರಾಂತ್ಯದಲ್ಲಿ ಸಂಪೂರ್ಣಕರ್ಫ್ಯೂ ಜಾರಿಯಲ್ಲಿರುತ್ತದೆ. ನಗರದ ಎಲ್ಲಾರೆಸ್ಟೋರೆಂಟ್‌ಗಳು, ಲಾಡ್ಜ್‌ಗಳು, ಹೋಟೆಲ್‌ಗಳಲ್ಲಿ ಶೇ 50ರಷ್ಟು ಮಂದಿಗೆ ಮಾತ್ರಅವಕಾಶ ಕಲ್ಪಿಸಲು ನಿರ್ದೇಶನ ನೀಡಲಾಗಿದೆ. ಚಿತ್ರಮಂದಿರಗಳಲ್ಲೂ ಪ್ರೇಕ್ಷಕರ ಸಂಖ್ಯೆ ಶೇ 50ಕ್ಕೆ ಅವಕಾಶ ನೀಡಲಾಗಿದೆ. ನಿಯಮ ಉಲ್ಲಂಘಿಸಿದರೆ ಶಿಸ್ತುಕ್ರಮ ಜರುಗಿಸಲಾಗುವುದು ಎಂದುಎಚ್ಚರಿಕೆ ನೀಡಿದರು.

ಜಿಲ್ಲೆಯಲ್ಲಿ ಶಾಲೆ, ಕಾಲೇಜುಗಳನ್ನು ಬಂದ್‌ ಮಾಡುವ ಬಗ್ಗೆ ಯಾವುದೇ ಮಾರ್ಗಸೂಚಿಬಂದಿಲ್ಲ. ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರ ಎಂದಿನಂತೆ ಇರಲಿದೆ. ಸರ್ಕಾರಿ ಕಚೇರಿಗಳುವಾರದಲ್ಲಿ 5 ದಿನ ಮಾತ್ರ ಕಾರ್ಯ ನಿರ್ವಹಿಸುವಂತೆ ಸೂಚನೆ ಬಂದಿದೆ. ಜಾತ್ರೆಗಳನ್ನುನಡೆಸುವಂತಿಲ್ಲ. ಹೋಟೆಲ್‌ ಮತ್ತು ರೆಸ್ಟೋರೆಂಟ್‌ಗಳಲ್ಲಿ ಪಾರ್ಸೆಲ್‌ಗೆ ಮಾತ್ರವೇ ಅವಕಾಶವಿದೆ ಎಂದು ಹೇಳಿದರು.

ಜಿಲ್ಲೆಯಲ್ಲಿ ವಾರದಿಂದ ಪಾಸಿಟಿವಿಟಿ ದರ ಶೇ 0.36ರಷ್ಟು ಇದ್ದು, ಪ್ರತಿದಿನ ಅಂದಾಜು3,500ಕ್ಕೂ ಅಧಿಕ ಸಂಖ್ಯೆಯಲ್ಲಿ ಆರ್‌ಟಿ–ಪಿಸಿಆರ್ ತಪಾಸಣೆ ನಡೆಸಲಾಗುತ್ತಿದೆ.ಮುಂದಿನ ದಿನಗಳಲ್ಲಿ 5 ಸಾವಿರ ಆರ್‌ಟಿ–ಪಿಸಿಆರ್‌ ಪರೀಕ್ಷೆ ನಡೆಸುವ ಗುರಿ ಇದೆಎಂದರು.

ಈಗಾಗಲೇ ಮೊದಲ ಡೋಸ್‌ ಕೋವಿಡ್‌ ಲಸಿಕೆಯನ್ನು ಶೇ 99ರಷ್ಟು ಹಾಗೂ ಎರಡನೇಡೋಸ್‌ ಶೇ 85ರಷ್ಟು ಮಂದಿಗೆ ನೀಡಲಾಗಿದೆ. ಜ.3ರಿಂದ 15–18 ವರ್ಷದಮಕ್ಕಳಿಗೆ ಕೋವಿಡ್ ಲಸಿಕೆ ನೀಡಲಾಗುತ್ತಿದ್ದು, ಈವರೆಗೆ ಜಿಲ್ಲೆಯಲ್ಲಿ ಶೇ 50ರಷ್ಟುಅಂದರೆ 36 ಸಾವಿರ ವಿದ್ಯಾರ್ಥಿಗಳಿಗೆ ಕೋವ್ಯಾಕ್ಸಿನ್ ಲಸಿಕೆ ನೀಡಲಾಗಿದೆ. ಹಾಸನ ರಾಜ್ಯದ ಮೊದಲ 5 ಜಿಲ್ಲೆಗಳ ಪಟ್ಟಿಯಲ್ಲಿ ಸ್ಥಾನ ಪಡೆದಿದೆ ಎಂದು ಡಿ.ಸಿ ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT