ಸರ್ಕಾರಿ ಶಾಲೆ ವಿಲೀನ– ಎಸ್ಐಒ ಆಕ್ಷೇಪ

7

ಸರ್ಕಾರಿ ಶಾಲೆ ವಿಲೀನ– ಎಸ್ಐಒ ಆಕ್ಷೇಪ

Published:
Updated:
Deccan Herald

ಹಾಸನ: ‘ರಾಜ್ಯ ಸರ್ಕಾರ ಒಂದು ಕಿ.ಮೀ. ವ್ಯಾಪ್ತಿಯ ಸರ್ಕಾರಿ ಶಾಲೆಗಳನ್ನು ವಿಲೀನ ಮಾಡಲು ಮುಂದಾಗಿರುವ ಕ್ರಮ ಹಿಂಪಡೆಯಬೇಕು’ ಎಂದು ಸ್ಟುಡೆಂಟ್‌ ಇಸ್ಲಾಮಿಕ್‌ ಆರ್ಗನೈಸೇಶನ್‌ ಆಫ್‌ ಇಂಡಿಯಾ (ಎಸ್‌ಐಒ) ಕಾರ್ಯದರ್ಶಿ ಜೀಶಾನ್ ಅಖಿಲ್ ಸಿದ್ಧಿಖಿ ಆಗ್ರಹಿಸಿದರು.

ಜೂನ್ 5 ರಂದು ರಾಜ್ಯದ 28,847 ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗಳ ವಿಲೀನಕ್ಕೆ ನಿರ್ಧರಿಸಲಾಗಿದೆ. ಇದಕ್ಕೆ ರಾಜ್ಯದ ಹಲವು ಶಿಕ್ಷಣ ತಜ್ಞರು, ವಿದ್ಯಾರ್ಥಿ ಸಂಘಟನೆಗಳು, ಸಂಘ ಸಂಸ್ಥೆಗಳು ತೀವ್ರ ವಿರೋಧ ವ್ಯಕ್ತಪಡಿಸಿದ್ದವು. ಆದರೂ ಸರ್ಕಾರ ಆದೇಶ ಹೊರಡಿಸಿರುವುದು ಆಘಾತಕಾರಿ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ವಿಷಾದಿಸಿದರು.

‘ಸಂವಿಧಾನದ ಆಶಯದಂತೆ ಶಿಕ್ಷಣ ವ್ಯವಸ್ಥೆ ರೂಪುಗೊಳ್ಳಬೇಕು. ಸರ್ವರಿಗೂ ಉಚಿತ ಹಾಗೂ ಗುಣಮಟ್ಟದ ಶಿಕ್ಷಣ ನೀಡುವುದು ಸರ್ಕಾರದ ಕರ್ತವ್ಯ. ಆದರೆ ಶಾಲೆಗಳ ಸಬಲೀಕರಣ ಮತ್ತು ಶಿಕ್ಷಣ ಗುಣಮಟ್ಟ ಕಾಪಾಡದೇ ವಾಮ ಮಾರ್ಗಕ್ಕೆ ಕೈ ಹಾಕಿರುವುದು ಖಂಡನೀಯ’ ಎಂದು ಆಕ್ರೋಶ ವ್ಯಕ್ತಪಡಿಸಿದರು.

‘ಸರ್ಕಾರ ನೀಡಿರುವ ಆದೇಶದಲ್ಲಿ ರಾಜ್ಯದ 1395 ಶಾಲೆಗಳ ವಿಲೀನದ ಹೆಸರಿನಲ್ಲಿ ಮುಚ್ಚಲು ಹೊರಟಿದೆ. ಜಿಲ್ಲೆಯಲ್ಲಿ 97ಕ್ಕೂ ಹೆಚ್ಚು ಶಾಲೆಗಳು ಮುಚ್ಚಲಿವೆ. ರಾಜ್ಯದ 261 ಶಾಲೆಗಳಲ್ಲಿ ದಾಖಲಾತಿ ಶೂನ್ಯವಾಗಿದೆ’ ಎಂದು ಹೇಳಿದರು.

ಸರ್ಕಾರಿ ಶಾಲೆಗಳ ವಿಲೀನ ಕ್ರಮ ಕೈಬಿಟ್ಟು, ಸರ್ಕಾರಿ ಶಾಲೆಗಳನ್ನು ಉಳಿಸುವ ನಿಟ್ಟಿನಲ್ಲಿ ಶಾಲೆಗಳಗೆ ಶಿಕ್ಷಕರನ್ನು ನೇಮಿಸಿ ಸೌಲಭ್ಯ ಒದಗಿಸಬೇಕು. ಇಲ್ಲ ಶಿಕ್ಷಣ ಸಚಿವರ ನಿವಾಸದ ಎದುರು ಪ್ರತಿಭಟಿಸಲಿದ್ದೇವೆ’ ಎಂದು ಎಚ್ಚರಿಸಿದರು.
ಎಸ್‌ಐಒ ಮುಖಂಡರಾದ ರಿಯಾಜ್ ಅಹ್ಮದ್, ಶುಹೇಬ್ ಫಝಲ್ ಇದ್ದರು.

ಬರಹ ಇಷ್ಟವಾಯಿತೆ?

  • 0

    Happy
  • 0

    Amused
  • 0

    Sad
  • 0

    Frustrated
  • 0

    Angry

Comments:

0 comments

Write the first review for this !