ಇಂಧನ ಬೆಲೆ ಏರಿಕೆಗೆ ವಿರೋಧ

ಹಾಸನ: ತೈಲ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್ ಕಾರ್ಯಕರ್ತರು ನಗರದ ವಿವಿಧೆಡೆ ಸಂಸದ ಡಿ.ಕೆ.ಸುರೇಶ್ ನೇತೃತ್ವದಲ್ಲಿ ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಡೈರಿ ವೃತ್ತ, ಕೆಂಚಾಂಬ ಪೆಟ್ರೋಲ್ ಬಂಕ್ ಮುಂಭಾಗ ನೂರಾರು ಕಾಂಗ್ರೆಸ್ ಕಾರ್ಯಕರ್ತರ ಬೈಕ್‌ಗಳಿಗೆ ಪೆಟ್ರೋಲ್ ಹಾಕಿಸಲಾಯಿತು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಾಜ್ಯ ಹಾಗೂ ಕೇಂದ್ರ ಬಿಜೆಪಿ ಸರ್ಕಾರ ತೈಲ ಬೆಲೆ ಏರಿಕೆ ಮಾಡಿ ಜನವಿರೋಧಿಯಾಗಿ ನಡೆದುಕೊಳ್ಳುತ್ತಿದೆ. ಇದೊಂದು ಪಿಕ್ ಪಾಕೇಟ್ ಮಾಡುವ ಸರ್ಕಾರವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಹಿರಿಯ ಮುಖಂಡ ಬಾಗೂರು ಮಂಜೇಗೌಡ ಮಾತನಾಡಿ, ಇಂಧನ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ತೊಂದರೆಯಾಗಿದೆ. ಮುಂದಿನ ದಿನಗಳಲ್ಲಿ ಜನರೇ ತಕ್ಕ ಪಾಠ ಕಲಿಸಲಿದ್ದಾರೆ ಎಂದು ಎಚ್ಚರಿಕೆ ನೀಡಿದರು.
ಪ್ರತಿಭಟನೆಯಲ್ಲಿ ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ್, ವಿಧಾನ ಪರಿಷತ್ ಸದಸ್ಯ ಎಂ.ಎ.ಗೋಪಾಲಸ್ವಾಮಿ, ಮುಖಂಡರಾದ ಹೆರುಗು ವಾಸುದೇವ್, ಹೆರಗು ಗಣೇಶ್, ದುದ್ದ ಬ್ಲಾಕ್ ಅಧ್ಯಕ್ಷ ವಿಶ್ವನಾಥ್ ಹೊಳೆನರಸೀಪುರ ಬ್ಲಾಕ್ ಅಧ್ಯಕ್ಷ ಹೊನ್ನಿಕೊಪ್ಪಲು ಮಂಜಣ್ಣ, ಚೇತನ್, ಮೆಳಗೋಡು ಗ್ರಾಮ ಪಂಚಾಯಿತಿ ಅಧ್ಯಕ್ಷ ಲೋಕೇಶ್, ಮುಖಂಡರಾದ ವಕೀಲರಾದ ಹರೀಶ್, ಬಾಂಬೆ ಸುರೇಶ್, ಮಡೆನೂರು ರಮೇಶ್, ದೊಡ್ಡಕರಡೆವು ಸೋನು, ಕಟ್ಟೇಪ್ರಕಾಶ್, ಕಬಳಿ
ರಾಮಚಂದ್ರ, ಗುರುಸ್ವಾಮಿ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.