ಸೋಮವಾರ, ಮೇ 23, 2022
24 °C

ಹಾಸನ: ಮತಾಂತರಗೊಂಡಿದ್ದ ವೃದ್ಧೆಯ ಅಂತ್ಯಕ್ರಿಯೆಗೆ ವಿರೋಧ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹೆತ್ತೂರು (ಹಾಸನ ಜಿಲ್ಲೆ): ಮತಾಂತರಗೊಂಡಿದ್ದ ವೃದ್ಧೆಯೊಬ್ಬರ ಅಂತ್ಯಕ್ರಿಯೆಯನ್ನು, ಪರಿಶಿಷ್ಟ ಜಾತಿಯವರಿಗೆ ಮೀಸಲಾದ ಸ್ಮಶಾನದಲ್ಲಿ ನಡೆಸಲು ಹೋಬಳಿಯ ವಳ್ಳಲಹಳ್ಳಿ ಗ್ರಾ.ಪಂ ವ್ಯಾಪ್ತಿಯ ಹಿರಿಯೂರು ಗ್ರಾಮಸ್ಥರು ವಿರೋಧ ವ್ಯಕ್ತಪಡಿಸಿದ್ದಾರೆ.

ಗ್ರಾಮದ ಪುಟ್ಟಮ್ಮ ಎಂಬುವವರು ಅನಾರೋಗ್ಯದಿಂದ ಸೋಮವಾರ ಮೃತಪಟ್ಟಿದ್ದರು. ಇವರ ಅಂತ್ಯಕ್ರಿಯೆಗಾಗಿ, ಸ್ಮಶಾನದಲ್ಲಿ ಸಿದ್ಧತೆ ನಡೆದಿತ್ತು. ಆಗ, ಗ್ರಾಮಸ್ಥರು ಇದಕ್ಕೆ ವಿರೋಧ ವ್ಯಕ್ತಪಡಿಸಿದ್ದು, ‘ಹಿಂದೂ ಪದ್ಧತಿಯಂತೆ ಅಂತ್ಯಕ್ರಿಯೆ ಮಾಡುವುದಾದರೆ ಮಾತ್ರ ಇಲ್ಲಿ ಮಾಡಿ; ಇಲ್ಲದಿದ್ದಲ್ಲಿ ಬೇಡ’ ಎಂದು ತಾಕೀತು ಮಾಡಿದ್ದಾರೆ. ಇದರಿಂದ ಸ್ಥಳದಲ್ಲಿ ತುಸು ಹೊತ್ತು ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಗ್ರಾಮಾಂತರ ಠಾಣೆ ಪೊಲೀಸರು ಸ್ಥಳಕ್ಕೆ ಬಂದು, ಪರಿಸ್ಥಿತಿಯನ್ನು ತಿಳಿಗೊಳಿಸಿದರು.

ಕೊನೆಗೆ, ವೃದ್ಧೆಯ ಅಂತ್ಯಕ್ರಿಯೆಯನ್ನು ಅವರ ಕುಟುಂಬದವರು ಖಾಸಗಿ ಜಾಗದಲ್ಲಿ ನೆರವೇರಿಸಿದ್ದಾರೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.