ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಪರಿಹಾರ ನೀಡಿ, ರಸ್ತೆ ಕಾಮಗಾರಿ ನಡೆಸಲು ರೈತರ ಆಗ್ರಹ

ರಾಷ್ಟ್ರೀಯ ಹೆದ್ದಾರಿ–373ಕ್ಕೆ ಜಮೀನು
Last Updated 13 ಜುಲೈ 2020, 13:36 IST
ಅಕ್ಷರ ಗಾತ್ರ

ಹಾಸನ: ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗೆ ಭೂಮಿ ನೀಡಿರುವ ರೈತರಿಗೆ ಮೊದಲು ಪರಿಹಾರ ನೀಡಿ ನಂತರ ರಸ್ತೆ ಕೆಲಸ ನಡೆಸುವಂತೆ ಆಗ್ರಹಿಸಿ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಜಿಲ್ಲಾ ಘಟಕದ ವತಿಯಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ಹಾಸನದಿಂದ ಹೊಳೆನರಸೀಪುರ ಮಾರ್ಗವಾಗಿ ಹಾದು ಹೋಗುವ ಬೇಲೂರು -ಬಿಳಿಕೆರೆ ರಾಷ್ಟ್ರೀಯ ಹೆದ್ದಾರಿ-373ರ ಅಭಿವೃದ್ಧಿಗಾಗಿ ರೈತರ ಜಮೀನನ್ನು ಸ್ವಾಧೀನ ಪಡಿಸಿಕೊಳ್ಳಲಾಗಿದೆ. ರಾಷ್ಟ್ರೀಯ ಹೆದ್ದಾರಿ ಎಂಜಿನಿಯರ್‌ ಬಲವಂತವಾಗಿ ಸಹಿ ಮಾಡುವಂತೆ ಒತ್ತಾಯಿಸಿದ್ದಾರೆ. ಪರಿಹಾರ ನೀಡದೆ ದಬ್ಬಾಳಿಕೆ ಮಾಡಿ ಕಾಮಗಾರಿ ನಡೆಸುತ್ತಿದ್ದಾರೆ ಎಂದು ಪ್ರತಿಭಟನಾಕಾರರು ಆರೋಪಿಸಿದರು.

ಹೊಳೆನರಸೀಪುರ ತಾಲ್ಲೂಕಿನ ಎಳ್ಳೇಶಪುರ ಗ್ರಾಮದ ವೈ.ಆರ್‌. ಶಿವಾನಂದ, ವೈ.ಎಸ್‌. ನಂದೀಶ್‌, ವೈ.ಬಿ. ಕುಮಾರಸ್ವಾಮಿ, ಮಹೇಶ್‌, ಪುಟ್ಟನಿಂಗೇಗೌಡ, ಸೋಮಶೇಖರ, ಕಳೇಗೌಡ, ಪುಟ್ಟಶೆಟ್ಟಿ, ನಂಜುಡಶೆಟ್ಟಿ, ಚಿಕ್ಕೇಗೌಡ ಹಾಗೂ ಇತರರು ರಸ್ತೆಗಾಗಿ ಜಮೀನು ಕಳೆದುಕೊಂಡಿದ್ದಾರೆ. ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಈ ಬಗ್ಗೆ ಗಮನ ಹರಿಸಿ, ರೈತರಿಗೆ ಸೂಕ್ತ ಪರಿಹಾರ ನೀಡಬೇಕು ಎಂದು ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.

ರೈತ ಸಂಘದ ಉಪಾಧ್ಯಕ್ಷ ಆನೆಕೆರೆ ರವಿ, ಜಿಲ್ಲಾ ಘಟಕದ ಅಧ್ಯಕ್ಷ ಮೆಹಬೂಬ್‌ ಪಾಷಾ (ಬಾಬು), ಮುಖಂಡರಾದ ಮಹಮದ್‌ ಸಾದಿಕ್‌, ಲತಾ, ದಾಸರಕೊಪ್ಪಲು ರಾಜಣ್ಣ, ಬಸ್ತಿಹಳ್ಳಿ ಗೌರಿ, ರಂಗಮ್ಮ, ಲೋಕೇಶ್‌, ಕವಿತಾ, ಕುಮಾರಸ್ವಾಮಿ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT