ಸೋಮವಾರ, ಆಗಸ್ಟ್ 8, 2022
21 °C

ಸಕಲೇಶಪುರ, ಬೇಲೂರು, ಆಲೂರಿನಲ್ಲಿ ಹೆಚ್ಚು ಮಳೆ: ಎಂಟು ಮನೆಗಳಿಗೆ ಭಾಗಶಃ ಹಾನಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹಾಸನ: ಜಿಲ್ಲೆಯಲ್ಲಿ ಈ ಬಾರಿ ವಾಡಿಕೆಗಿಂತ ಶೇಕಡಾ 19 ಹೆಚ್ಚು ಮಳೆಯಾಗಿದ್ದು, ಎಂಟು ಮನೆಗಳಿಗೆ ಭಾಗಶಃ ಹಾನಿಯಾಗಿದೆ ಎಂದು ಜಿಲ್ಲಾಧಿಕಾರಿ ಆರ್. ಗಿರೀಶ್ ತಿಳಿಸಿದರು.

ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ಜೂನ್ ತಿಂಗಳಲ್ಲಿ ವಾಡಿಕೆ ಮಳೆ 88.3 ಸೆಂ. ಮೀ ಮಳೆ ಪೈಕಿ 105.5 ಸೆಂ.ಮೀ ಮಳೆಯಾಗಿದೆ. ಶೇ 19 ರಷ್ಟು ಹೆಚ್ಚು ಮಳೆಯಾಗಿದೆ. ಆಲೂರು, ಬೇಲೂರು ಮತ್ತು ಸಕಲೇಶಪುರ ತಾಲ್ಲೂಕಿನಲ್ಲಿ ಉತ್ತಮ ಮಳೆಯಾಗಿದ್ದು, ಸಕಲೇಶಪುರ ತಾಲ್ಲೂಕಿನಲ್ಲಿ ವಾಡಿಕೆಗಿಂತ ಶೇಕಡಾ 89ರಷ್ಟು ಹೆಚ್ಚು ಮಳೆ
ಸುರಿದಿದೆ. ಜನ, ಜಾನುವಾರು ಪ್ರಾಣ ಹಾನಿಯಾಗಿಲ್ಲ. ಎಂಟು ಮನೆಗಳು ಭಾಗಶಃ ಕುಸಿದಿದ್ದು, ಪರಿಹಾರ ನೀಡಲಾಗುವುದು ಎಂದು ವಿವರಿಸಿದರು. 

ಸಕಲೇಶಪುರದ ಹಾನುಬಾಳು ಸಮೀಪದ ದೋನಹಳ್ಳಿ ಹಳ್ಳ ಸೇತುವೆ ಕುಸಿದಿದ್ದು , ಸೇತುವೆ ದುರಸ್ತಿಗೆ ₹50 ಲಕ್ಷ ವೆಚ್ಚದ ಅಂದಾಜು ಪಟ್ಟಿ ತಯಾರಿಸಿ ಪಂಚಾಯತ್ ರಾಜ್ ಇಲಾಖೆಗೆ ಪ್ರಸ್ತಾವನೆ ಸಲ್ಲಿಸಲಾಗಿದೆ. ಮಳೆ, ಗಾಳಿಯಿಂದಾಗಿ 135 ವಿದ್ಯುತ್ ಕಂಬಗಳು ಹಾನಿಗೊಳಗಾಗಿದ್ದು, ಬಹುತೇಕ ಎಲ್ಲಾ ಕಂಬಗಳ ದುರಸ್ತಿ ಮಾಡಲಾಗಿದೆ ಎಂದರು.

ಅಪಾಯಕಾರಿ ಗಿಡ, ಮರಗಳನ್ನು ತೆರವುಗೊಳಿಸುವಂತೆ ಸೆಸ್ಕ್‌ ಹಾಗೂ ಅರಣ್ಯ ಇಲಾಖೆಗೆ ಸೂಚನೆ ನೀಡಲಾಗಿದೆ. ಗ್ರಾಮೀಣ ಪ್ರದೇಶದಲ್ಲಿ ವಿದ್ಯುತ್‌ ಸರಬರಾಜಿನಲ್ಲಿ ಯಾವುದೇ ರೀತಿಯ ವ್ಯತ್ಯಯವಾಗದಂತೆ ಎಚ್ಚರ ವಹಿಸುವಂತೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.

ಪ್ರವಾಹದಿಂದ ಹಾನಿಗೊಳಗಾಗಿರುವ ಗ್ರಾಮಗಳನ್ನು ಈಗಾಗಲೇ ಗುರುತಿಸಲಾಗಿದ್ದು, ಅದರ ಸೂಕ್ತ ಪರಿಹಾರಕ್ಕೆ ಕ್ರಮ ಕೈಗೊಳ್ಳುವಂತೆ ಸೂಚನೆ ನೀಡಲಾಗಿದೆ. ಆಗಸ್ಟ್ ತಿಂಗಳ ಮೊದಲ ಹಾಗೂ ಎರಡನೇ ವಾರದಲ್ಲಿ ಹೆಚ್ಚು ಮಳೆಯಾಗುವುದರಿಂದ ಈಗಿನಿಂದಲೇ ಸೂಕ್ತ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ ಎಂದು ತಿಳಿಸಿದರು.

ಕೊರೊನಾ ಪಾಸಿಟಿವಿಟಿ ಶೇಕಡಾ 7 ರಷ್ಟು ಇದೆ. ರಾಜ್ಯ ಸರ್ಕಾರದ ಸೂಚನೆ ಮೇರೆಗೆ ನಿತ್ಯ 6500ಕ್ಕೂ ಹೆಚ್ಚು ಕೋವಿಡ್‌ ಪರೀಕ್ಷೆ ಮಡಲಾಗುತ್ತಿದೆ ಎಂದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು