ಶುಕ್ರವಾರ, 12 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಪೆನ್‌ಡ್ರೈವ್‌ ಪ್ರಕರಣ | ಶೀಘ್ರ ಒಳ್ಳೆ ಸುದ್ದಿ: ಬಿಜೆಪಿ ಮುಖಂಡ ದೇವರಾಜೇಗೌಡ

Published 2 ಜುಲೈ 2024, 16:16 IST
Last Updated 2 ಜುಲೈ 2024, 16:16 IST
ಅಕ್ಷರ ಗಾತ್ರ

ಹಾಸನ: ಪೆನ್‌ಡ್ರೈವ್ ವಿಚಾರದ ಬಗ್ಗೆ ಈಗ ತನಿಖೆ ಆಗುತ್ತಿದೆ. ತನಿಖೆ ಆಗುವ ವೇಳೆ ಏನೂ ಮಾತನಾಡುವುದು ಬೇಡ. ಎಸ್ಐಟಿಯಲ್ಲಿ ಒಳ್ಳೆಯ ಅಧಿಕಾರಿಗಳಿದ್ದಾರೆ. ತನಿಖೆ ಆಗಲಿದೆ. ಅತೀ ಶೀಘ್ರದಲ್ಲೇ ಒಳ್ಳೆಯ ಸುದ್ದಿ ಹೊರ ಬರುತ್ತದೆ’ ಎಂದು ವಕೀಲ ದೇವರಾಜೇಗೌಡ ಹೇಳಿದರು.

‘ಪೆನ್‌ಡ್ರೈವ್ ಪ್ರಕರಣಕ್ಕೆ ಸಂಬಂಧಿಸಿದ ತನಿಖೆಯನ್ನು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರ್ ಮಾಡುತ್ತಿಲ್ಲ. ಹಾಸನದಲ್ಲಿ ಒಳ್ಳೆಯ ಪೊಲೀಸರು ತನಿಖೆ ಮಾಡುತ್ತಿದ್ದಾರೆ. ತಾರ್ಕಿಕವಾಗಿ ಅಂತ್ಯವಾಗುತ್ತದೆ’ ಎಂದು ವಿಶ್ವಾಸ ವ್ಯಕ್ತಪಡಿಸಿದರು.

‘ಪೆನ್‌ಡ್ರೈವ್ ಪ್ರಕರಣದಲ್ಲಿ ಸಾಕ್ಷಿಯಾಗಿದ್ದೇನೆ. ಎಲ್ಲ ರೀತಿಯ ಸಹಕಾರ ಕೊಟ್ಟಿದ್ದೇನೆ. ತನಿಖೆ ಮುಗಿದ ಮೇಲೆ ಸತ್ಯಾಂಶ ಹೊರ ಬರುತ್ತದೆ. ಡಿ.ಕೆ. ಶಿವಕುಮಾರ್ ಜೊತೆ ಮಾತನಾಡಿರುವ ಆಡಿಯೊ ಬಗ್ಗೆ ಎಫ್‌ಎಸ್‌ಎಲ್‌ನಿಂದ ಸತ್ಯ ಹೊರಗೆ ಬರುತ್ತದೆ’ ಎಂದರು.

‘ನಾನು ಹೊರ ಬಂದರೆ ಸರ್ಕಾರ ಪತನ’ ಎಂದು ಜೈಲಿನಲ್ಲಿದ್ದಾಗ ಹೇಳಿದ್ದ ಬಗ್ಗೆ ಉತ್ತರಿಸಿದ ಅವರು, ‘ಕಾದು ನೋಡಿ’ ಎಂದಷ್ಟೇ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT