ಮಂಗಳವಾರ, 18 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸಕ್ಕೆ ಪ್ರಜ್ವಲ್ ಕರೆತಂದ SIT ತಂಡ

ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.
Published 8 ಜೂನ್ 2024, 9:37 IST
Last Updated 8 ಜೂನ್ 2024, 9:37 IST
ಅಕ್ಷರ ಗಾತ್ರ

ಹಾಸನ: ಅತ್ಯಾಚಾರ ಹಾಗೂ ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿ, ಮಾಜಿ ಸಂಸದ ಪ್ರಜ್ವಲ್‌ ರೇವಣ್ಣ ಅವರನ್ನು ಸ್ಥಳ ಮಹಜರ್‌ಗಾಗಿ ವಿಶೇಷ ತನಿಖಾ ತಂಡ ಹೊಳೆನರಸೀಪುರದ ಚೆನ್ನಾಂಬಿಕಾ ನಿವೇಶನಕ್ಕೆ ಶನಿವಾರ ಮಧ್ಯಾಹ್ನ ಕರೆತಂದಿದೆ.

ಮುಂಜಾಗ್ರತಾ ಕ್ರಮವಾಗಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ. ಕ್ಯೂಆರ್‌ಟಿ ವಾಹನದಲ್ಲಿ ಪ್ರಜ್ವಲ್‌ ರೇವಣ್ಣ ಅವರನ್ನು‌ ಕರೆತಂದ ಎಸ್‌ಐಟಿ ಅಧಿಕಾರಿಗಳು ಕ್ಯಾಮೆರಾಗಳಿಗೂ ಕಾಣದಂತೆ ಪ್ರಜ್ವಲ್‌ ರೇವಣ್ಣ ಅವರನ್ನು ವಾಹನದಲ್ಲಿಯೇ ನಿವಾಸಕ್ಕೆ ಕರೆದೊಯ್ದರು.

ಪ್ರಜ್ವಲ್ ಮೇಲಿನ ಪ್ರಕರಣಗಳ ಘಟನಾ ಸ್ಥಳಗಳ ಮಹಜರಿಗಾಗಿ ಎಸ್ಐಟಿ ಅವರನ್ನು ಜಿಲ್ಲೆಗೆ ಕರೆತಂದಿದ್ದು, ಮೊದಲು ಹೊಳೆನರಸೀಪುರದ ಚೆನ್ನಾಂಬಿಕಾ ನಿವಾಸದಲ್ಲಿ ಪ್ರಕ್ರಿಯೆ ನಡೆಯಲಿದೆ. ಹೀಗಾಗಿ ಹೆಚ್ಚುವರಿ‌ ಜಿಲ್ಲಾ ಪೊಲೀಸ್‌ ವರಿಷ್ಠಾಧಿಕಾರಿ ವೆಂಕಟೇಶ್ ನಾಯ್ಡು ನೇತೃತ್ವದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ.

ನಂತರ ಪ್ರಜ್ವಲ್‌ ಅವರನ್ನು‌ ಹಾಸನಕ್ಕೆ‌ ಕರೆತರುವ ಸಾಧ್ಯತೆ ಇದೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT