ಸೋಮವಾರ, 15 ಜುಲೈ 2024
×
ADVERTISEMENT
ಈ ಕ್ಷಣ :
ADVERTISEMENT

ಹಾಸನ | ವೈದ್ಯಕೀಯ ಕಾಲೇಜುಗಳಿಗೆ ದಂಡ: ಖಂಡನೆ

Published 10 ಜುಲೈ 2024, 14:30 IST
Last Updated 10 ಜುಲೈ 2024, 14:30 IST
ಅಕ್ಷರ ಗಾತ್ರ

ಹಾಸನ: ರಾಜ್ಯದ ಹಲವು ವೈದ್ಯಕೀಯ ಕಾಲೇಜುಗಳಿಗೆ ನೋಟಿಸ್ ಜಾರಿ ಮಾಡಿರುವ ಎನ್ಎಂಸಿಯು, ಕಾಲೇಜು ನಡೆಸಲು ಅಪೇಕ್ಷಿತ ಗುಣಮಟ್ಟವನ್ನು ಹೊಂದದಿರುವುದಕ್ಕೆ ದಂಡ ವಿಧಿಸಿದೆ. ಇದು ಖಂಡನೀಯ ಎಂದು ಎಐಡಿಎಸ್‌ಒ ಜಿಲ್ಲಾ ಸಮಿತಿ ಸಹ ಸಂಚಾಲಕಿ ಚೈತ್ರಾ ತಿಳಿಸಿದ್ದಾರೆ.

ರಾಜ್ಯದ 13 ಸರ್ಕಾರಿ ವೈದ್ಯಕೀಯ ಕಾಲೇಜು ಹಾಗೂ 11 ಖಾಸಗಿ ವೈದ್ಯಕೀಯ ಕಾಲೇಜುಗಳಿಗೆ ದಂಡ ವಿಧಿಸಲಾಗಿದೆ. ದಂಡದ ಮೊತ್ತವು ₹ 2 ಲಕ್ಷದಿಂದ ₹15 ಲಕ್ಷದವರೆಗೂ ಇದೆ. ವೈದ್ಯಕೀಯ ಕಾಲೇಜುಗಳು ಅಪೇಕ್ಷಿತ ಗುಣವಟ್ಟವನ್ನು ಕಾಪಾಡಲೇಬೇಕು. ಆದರೆ ಈ ರೀತಿ ದಂಡ ವಿಧಿಸುವುದು ಅತ್ಯಂತ ಅಪ್ರಜಾತಾಂತ್ರಿಕವಾಗಿದೆ ಎಂದು ತಿಳಿಸಿದ್ದಾರೆ.

ಎನ್‌ಎಂಸಿಯ ಈ ನಡೆ ಗುಣಮಟ್ಟದ ಶಿಕ್ಷಣದ ಮೂಲ ಉದ್ದೇಶಕ್ಕೆ ವಿರುದ್ಧವಾಗಿದೆ. ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಸಿಬ್ಬಂದಿ ಕಡಿಮೆ ಇದ್ದು, ಮೂಲ ಸೌಕರ್ಯಗಳು ಅವಶ್ಯಕ ಮಟ್ಟದಲ್ಲಿ ಇರದಿದ್ದರೆ, ಇದರ ಜವಾಬ್ದಾರಿಯನ್ನು ಆಡಳಿತವೇವಹಿಸಬೇಕು. ಸಿಬ್ಬಂದಿ ನೇಮಕಾತಿ ಮತ್ತು ಸಮರ್ಪಕ ಸೌಕರ್ಯಗಳನ್ನು ಒದಗಿಸುವ ಜವಾಬ್ದಾರಿಯನ್ನು ಆಡಳಿತ ವರ್ಗವೇ ವಹಿಸಿಕೊಳ್ಳಬೇಕು. ಈ ನಿಟ್ಟಿನಲ್ಲಿ ಸಮರ್ಪಕ ಅನುದಾನ ಒದಗಿಸಬೇಕು ಎಂದು ಆಗ್ರಹಿಸಿದ್ದಾರೆ.

ಸರ್ಕಾರಿ ವೈದ್ಯಕೀಯ ಕಾಲೇಜುಗಳ ಅವ್ಯವಸ್ಥೆಯ ಕುರಿತು ಹಲವಾರು ವರದಿಗಳು ವಿವರಿಸಿವೆ. ರಾಜ್ಯ ಸರ್ಕಾರ ಅಥವಾ ಎನ್‌ಎಂಸಿ ಈ ಕುರಿತು ಯಾವುದೇ ಕ್ರಮ ಕೈಗೊಂಡಿಲ್ಲ. ಗುಣಮಟ್ಟವನ್ನು ಹೆಚ್ಚಿಸುವ ನಿಟ್ಟಿನಲ್ಲಿ ಹಣಕಾಸು ಸಹಾಯ ಒದಗಿಸುವುದರ ಬದಲಿಗೆ, ಸರ್ಕಾರಿ ವೈದ್ಯಕೀಯ ಕಾಲೇಜುಗಳಲ್ಲಿ ಎನ್‌ಆರ್‌ಐ ಕೋಟಾ ತೆರೆದು ದುಡ್ಡು ಮಾಡಲು ಯತ್ನಿಸುತ್ತಿದೆ ಎಂದು ದೂರಿದ್ದಾರೆ.

ಆಳ್ವಿಕರ ಪ್ರಮಾದಕ್ಕೆ ಶಿಕ್ಷಣ ಸಂಸ್ಥೆಯ ಮೇಲೆ ದಂಡವನ್ನು ಹೇರುವುದು ಶಿಕ್ಷಣದ ಸತ್ವಕ್ಕೆ ಧಕ್ಕೆ ಉಂಟು ಮಾಡುವುದರಿಂದ ಎಂದಿಗೂ ಅದು ರೂಢಿಯಾಗಬಾರದು ಎಂದು ಎಚ್ಚರಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT