ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಅಂಗಡಿಗಳಲ್ಲಿದ್ದ ಪ್ಲಾಸ್ಟಿಕ್ ಕವರ್ ವಶ

ಗ್ರಾಮ ಪಂಚಾಯತಿಯಿಂದ ಪ್ಲಾಸ್ಟಿಕ್ ಜಾಗೃತಿ ಜಾಥ
Last Updated 4 ಏಪ್ರಿಲ್ 2020, 11:18 IST
ಅಕ್ಷರ ಗಾತ್ರ

ಹಳೇಬೀಡು: ಹಳೇಬೀಡಿನಲ್ಲಿ ಗ್ರಾಮ ಪಂಚಾಯತಿ ಸಿಬ್ಬಂದಿ ಸಾಮಾಜಿಕ ಅಂತರದ ಜಾಥಾ ನಡೆಸಿ ಅಂಗಡಿಗಳಲ್ಲಿ ಪ್ಲಾಸ್ಟಿಕ್ ಕವರ್‌ಗಳನ್ನು ವಶಪಡಿಸಿ ಶನಿವಾರ ಕೊರೊನಾ ನಿರ್ಮೂಲನೆಯ ಜಾಗೃತಿ ಮೂಡಿಸಿದರು.

ಅಂಗಡಿಗಳಿಗೆ ಭೇಟಿ ನೀಡಿದ ಗ್ರಾಮ ಪಂಚಾಯತಿ ಸಿಬ್ಬಂದಿ ಪ್ಲಾಸ್ಟಿಕ್ ಕೈಚೀಲ ಹಾಗೂ ಕವರ್‌ಗಳನ್ನು ವಶಪಡಿಸಿಕೊಂಡರು.

ಪರಿಸರದ ವಿನಾಶದೊಂದಿಗೆ ರೋಗರುಜಿನಗಳಿಗೆ ಕಾರಣವಾಗಿರುವ ಪ್ಲಾಸ್ಟಿಕ್‌ ಅನ್ನು ಸಂಪೂರ್ಣವಾಗಿ ನಿಷೇಧಿಸಲು ಸಾರ್ವಜನಿಕರು ಸಹಕಾರ ನೀಡಬೇಕು. ಪ್ಲಾಸ್ಟಿಕ್ ಕವರ್‌ಗಳನ್ನು ಸಂಗ್ರಹಿಸಿಟ್ಟುಕೊಂಡು ಜನರಿಗೆ ಸಾಮಗ್ರಿ ಹಾಕಿಕೊಡುವ ವರ್ತಕರಿಗೆ ಇನ್ನೂ ಮುಂದೆ ದಂಡ ವಿಧಿಸಲಾಗುತ್ತದೆ. ಗ್ರಾಹಕರು ಬಟ್ಟೆಯ ಕೈಚೀಲ ಹಿಡಿದುಕೊಂಡು ಅಂಗಡಿಗೆ ಬರಬೇಕು. ಅಂಗಡಿಯವರು ಕಾಗದ ಇಲ್ಲವೆ ಬಟ್ಟೆಯ ಕವರಿನಲ್ಲಿ ಸಾಮಗ್ರಿ ಕೊಡಬೇಕು ಎಂದು ಗ್ರಾಮ ಪಂಚಾಯತಿ ಸಿಬ್ಬಂದಿ ಎಚ್ಚರಿಸಿದರು.

ಗ್ರಾಮ ಪಂಚಾಯತಿ ಸದಸ್ಯರಾದ ನಿಂಗಪ್ಪ, ಎಚ್.ಕೆ.ಶಿವಕುಮಾರ್ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT