ಮಂಗಳವಾರ, 17 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಪಿಎಂ ಕಿಸಾನ್: ಇ- ಕೆವೈಸಿಗೆ ಸೂಚನೆ

Published : 23 ಮೇ 2023, 14:41 IST
Last Updated : 23 ಮೇ 2023, 14:41 IST
ಫಾಲೋ ಮಾಡಿ
Comments

ಹಾಸನ: ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆ ಅಡಿ ₹ 10 ಸಾವಿರ ಆರ್ಥಿಕ ಸೌಲಭ್ಯ ಪಡೆಯುವ ರೈತ ಫಲಾನುಭವಿಗಳು ಇ–ಕೆವೈಸಿ ಮಾಡಿಸುವುದು ಕಡ್ಡಾಯ ಎಂದು ಕೃಷಿ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.

ಇ–ಕೆವೈಸಿ ಮಾಡಿಸದ ರೈತ ಫಲಾನುಭವಿಗಳಿಗೆ ಆರ್ಥಿಕ ಸೌಲಭ್ಯ ದೊರೆಯುವುದಿಲ್ಲ.  ಇದುವರೆಗೂ ಇ–ಕೆವೈಸಿ ಮಾಡಿಸದ ರೈತರು, ತಮ್ಮ ಆಧಾರ್ ಸಂಖ್ಯೆಗೆ ಜೋಡಣೆಯಾಗಿರುವ ಮೊಬೈಲ್ ಸಂಖ್ಯೆಗಳ ಜೊತೆಗೆ ಸಮೀಪದ ರೈತ ಸಂಪರ್ಕ ಕೇಂದ್ರ, ಗ್ರಾಮ ವನ್ ಕೇಂದ್ರ, ಸಾಮಾನ್ಯ ಗ್ರಾಹಕ ಸೇವಾ ಕೇಂದ್ರಗಳಿಗೆ ಭೇಟಿ ನೀಡಿ ಬಯೋಮೆಟ್ರಿಕ್ ಅಥವಾ ಓಟಿಪಿ ಮೂಲಕ ಇ–ಕೆವೈಸಿ ಮಾಡಿಸಬಹುದು ಎಂದು ತಿಳಿಸಿದ್ದಾರೆ.

ಫಲಾನುಭವಿಗಳು ತಾವೇ ಪಿಎಂ ಕಿಸಾನ್ ಪೋರ್ಟಲ್ ಮೂಲಕ ಮೊಬೈಲ್‌ಗೆ ಓಟಿಪಿ ಪಡೆದು, ಕೆವೈಸಿ ಮಾಡಬಹುದು. ಹತ್ತಿರದ ಅಂಚೆ ಕಚೇರಿಗೆ ಭೇಟಿ ನೀಡಿ ಪೋರ್ಟಲ್ ಅಕೌಂಟ್ ತೆರೆಯುವ ಮೂಲಕ ಪಿಎಂ ಕಿಸಾನ್ ಸಮ್ಮಾನ್ ನಿಧಿ ಯೋಜನೆಯಡಿ ಕೆವೈಸಿಯನ್ನು ತ್ವರಿತವಾಗಿ ಮಾಡಿಕೊಳ್ಳಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. 

ಪ್ರವೇಶಾತಿಗೆ ಜೂ.20 ರವರೆಗೆ ಅವಕಾಶ

ಹಾಸನ: ನಗರದ ರಾಜೀವ್ ಇನ್‌ಸ್ಟಿಟ್ಯೂಟ್ ಆಫ್ ಪ್ಯಾರಾಮೆಡಿಕಲ್ ಸೈನ್ಸ್ ಕಾಲೇಜಿನಲ್ಲಿ ಡಿಪ್ಲೊಮಾ ಇನ್ ಮೆಡಿಕಲ್ ಲ್ಯಾಬೊರೇಟರಿ ಟೆಕ್ನಾಲಜಿ, ಡಿಪ್ಲೊಮಾ ಇನ್ ಮೆಡಿಕಲ್ ಇಮೇಜಿಂಗ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಡಯಾಲಿಸಿಸ್ ಟೆಕ್ನಾಲಜಿ, ಡಿಪ್ಲೊಮಾ ಇನ್ ಅಪರೇಷನ್ ಥಿಯೇಟರ್ ಆಂಡ್ ಅನಸ್ತೇಶಿಯಾ ಟೆಕ್ನಾಲಜಿ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಅರ್ಜಿ ಸಲ್ಲಿಕೆಗಾಗಿ ಜೂ.20 ರವರೆಗೆ ಅವಕಾಶ ನೀಡಲಾಗಿದೆ.

ಎಸ್ಸೆಸ್ಸೆಲ್ಸಿ,  ಪಿಯುಸಿ, ತತ್ಸಮಾನ ಪರೀಕ್ಷೆಯಲ್ಲಿ ಉತ್ತೀರ್ಣರಾದ ಅಭ್ಯರ್ಥಿಗಳು ಸಂಸ್ಥೆಯಲ್ಲಿ ಅರ್ಜಿ ಸಲ್ಲಿಸಿ ಪ್ರವೇಶ ಪಡೆದುಕೊಳ್ಳಬಹುದು. ಹೆಚ್ಚಿನ ಮಾಹಿತಿಗೆ ಸಂಸ್ಥೆಯ ದೂರವಾಣಿ ಸಂಖ್ಯೆ 08172-265505 ಮೊ.ಸಂ. 9019861858  ಸಂಪರ್ಕಿಸಬಹುದು ಎಂದು ಸಂಸ್ಥೆಯ ಪ್ರಕಟಣೆ ತಿಳಿಸಿದೆ.

undefined undefined

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT