ಹಾಸನ: ಜಿಲ್ಲೆಯಲ್ಲಿ ಪೋಕ್ಸೊ ಹಾಗೂ ಬಾಲ ಗರ್ಭಿಣಿಯರ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಳ್ಳಲು ಕ್ರಿಯಾ ಯೋಜನೆ ತಯಾರಿಸುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಅಧಿಕಾರಿಗಳಿಗೆ ಸೂಚಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಪೋಕ್ಸೊ ಹಾಗೂ ಬಾಲಗರ್ಭಿಣಿಯರು ಹಾಗೂ ಮಕ್ಕಳ ಸುರಕ್ಷತೆ ಕುರಿತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಸಮಾಜದಲ್ಲಿ ಹೆಣ್ಣು ಮಕ್ಕಳನ್ನು ಎರಡನೇ ದರ್ಜೆಯ ಪ್ರಜೆಯಾಗಿ ನೋಡುತ್ತಾರೆ. ಹೆಣ್ಣು ಮಕ್ಕಳ ಸುರಕ್ಷತೆ ಪ್ರತಿಯೊಬ್ಬರ ಜವಾಬ್ದಾರಿ. ಪ್ರತಿ ಮಂಗಳವಾರ ಬೆಳಿಗ್ಗೆ 11ಕ್ಕೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ಸಭೆ ನಡೆಸಲಾಗುವುದು. ಸಂಜೆ 7 ಗಂಟೆಗೆ ‘ಡಿಸ್ಕಸ್ ವಿತ್ ಡಿಸಿ’ ಕಾರ್ಯಕ್ರಮದೊಂದಿಗೆ ವಿಡಿಯೊ ಸಂವಾದದ ಮೂಲಕ ಎಲ್ಲ ವಸತಿ ಶಾಲೆ ಮತ್ತು ವಸತಿ ನಿಲಯಗಳ ಮಕ್ಕಳಲ್ಲಿ ಅರಿವು ಮೂಡಿಸಲು ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡಿದರು.

ಹೆಣ್ಣು ಮಕ್ಕಳ ಸುರಕ್ಷತೆಯನ್ನು ಗಂಭೀರವಾಗಿ ಪರಿಗಣಿಸಿ. ಉದಾಸೀನ ಮಾಡದೇ, ತೀವ್ರತೆಯನ್ನು ಅರಿತು ಸುರಕ್ಷತೆಗಾಗಿ ಶಿಶು ಅಭಿವೃದ್ಧಿ ಯೋಜನಾಧಿಕಾರಿಗಳು ಸೇರಿದಂತೆ ಎಲ್ಲ ಇಲಾಖೆಯ ಅಧಿಕಾರಿಗಳು ತಂಡವಾಗಿ ಕೆಲಸ ನಿರ್ವಹಿಸಬೇಕು ಎಂದು ತಿಳಿಸಿದರು.

ಹೆಣ್ಣು ಮಕ್ಕಳ ಮೇಲೆ ನಡೆಯುವ ದೌರ್ಜನ್ಯಗಳು ಬೆಳಕಿಗೆ ಬರುವುದಿಲ್ಲ. ಎಂತಹ ಸಂದರ್ಭದಲ್ಲೂ ಧೃತಿಗೆಡದೇ ಧೈರ್ಯವಾಗಿ, ನಡೆದ ಘಟನೆಯ ಬಗ್ಗೆ ಮುಕ್ತವಾಗಿ ಹೇಳುವಂತೆ ಮಕ್ಕಳನ್ನು ಪ್ರಜ್ಞಾವಂತರನ್ನಾಗಿ ಮಾಡಬೇಕು. ಜೊತೆಗೆ ಸ್ವಯಂರಕ್ಷಣೆ ಮಾಡಿಕೊಳ್ಳಲು ತರಬೇತಿ ನೀಡಬೇಕು ಎಂದರು.

ಪ್ರೀತಿ-ಪ್ರೇಮಕ್ಕೆ ಸಿಲುಕಿ ಹೆಣ್ಣು ಮಕ್ಕಳು ಜೀವನವನ್ನೇ ಹಾಳು ಮಾಡಿಕೊಳ್ಳುತ್ತಾರೆ. ಮೊದಲು ಓದು ಮುಖ್ಯ. ಸರಿದಾರಿಯಲ್ಲಿ ನಡೆದು, ಉತ್ತಮ ಭವಿಷ್ಯ ರೂಪಿಸಿಕೊಳ್ಳುವಂತೆ ಮಕ್ಕಳಿಗೆ ಅರಿವು ಮೂಡಿಸಬೇಕು. ಬಾಲ ಗರ್ಭಿಣಿ ಆಗುವುದರಿಂದ ದೈಹಿಕ ಹಾಗೂ ಮಾನಸಿಕವಾಗಿ ಉಂಟಾಗುವ ದುಷ್ಪರಿಣಾಮದ ಬಗ್ಗೆ ತಾಲ್ಲೂಕು ಆರೋಗ್ಯ ವೈದ್ಯಾಧಿಕಾರಿಗಳು ಮಕ್ಕಳಿಗೆ ತಿಳಿವಳಿಕೆ ಮೂಡಿಸಬೇಕು ಎಂದು ತಿಳಿಸಿದರು.

ಮೂರು ವರ್ಷಗಳಿಂದ ದಾಖಲಾಗಿರುವ ಹಾಗೂ ಜನವರಿಯಿಂದ ಇದುವರೆಗೆ ದಾಖಲಾಗಿರುವ ಪೋಕ್ಸೊ ಪ್ರಕರಣಗಳ ಬಗ್ಗೆ ತಾಲ್ಲೂಕುವಾರು ಮಾಹಿತಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ ಜಿಲ್ಲಾಧಿಕಾರಿ, ಪ್ರಕರಣಗಳಲ್ಲಿ ಕೃತ್ಯ ಯಾರಿಂದ, ಎಲ್ಲಿ, ಯಾರ ಮೇಲೆ ನಡೆದಿದೆ ಎಂಬುದರ ಬಗ್ಗೆ ಹಾಗೂ ಆ ಮಕ್ಕಳ ಹಿನ್ನೆಲೆಯ ಬಗ್ಗೆ ಕೂಡಾ ಮಾಹಿತಿ ನೀಡುವಂತೆ ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕ ಧರಣಿ ಕುಮಾರ್, ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ದಿಲೀಪ್ ಹಾಗೂ ಮತ್ತಿತರ ಇಲಾಖೆಯ ಅಧಿಕಾರಿಗಳು ಹಾಜರಿದ್ದರು.

ಮಕ್ಕಳಲ್ಲಿ ಅರಿವು ಮೂಡಿಸಿ’

ಪೋಕ್ಸೊ ಪ್ರಕರಣಗಳಲ್ಲಿ ಶಿಕ್ಷೆ ಆಗುವುದರ ಬಗ್ಗೆ ಮಕ್ಕಳಿಗೆ ಕಿರುಚಿತ್ರದ ಮೂಲಕ ತಿಳಿವಳಿಕೆ ನೀಡಬೇಕು. ಆಕಾಶವಾಣಿ ಹಾಗೂ ಸ್ಥಳೀಯ ಕೇಬಲ್ ವಾಹಿನಿಗಳ ಮೂಲಕವೂ ಅರಿವು ಕಾರ್ಯಕ್ರಮ ಆಯೋಜಿಸುವಂತೆ ಜಿಲ್ಲಾಧಿಕಾರಿ ಲತಾಕುಮಾರಿ ನಿರ್ದೇಶನ ನೀಡಿದರು. ಬಾಲ್ಯ ವಿವಾಹ ಲೈಂಗಿಕ ದೌರ್ಜನ್ಯದಂತಹ ವಿಷಯಗಳ ಕುರಿತು ಅರಿವು ಮೂಡಿಸಲು ಕಡ್ಡಾಯವಾಗಿ ಎಲ್ಲ ಶಾಲೆಗಳಲ್ಲಿ ಪ್ರತಿಯೊಂದು ಮಗುವಿನಿಂದ ಸಮಸ್ಯೆ ಮತ್ತು ಪರಿಹಾರದ ಬಗ್ಗೆ ಪ್ರಬಂಧ ಬರೆಸಲು ಕ್ರಮ ಕೈಗೊಳ್ಳುವಂತೆ ಶಿಕ್ಷಣ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು. ಪರಿಣಾಮಕಾರಿಯಾಗಿ ತಡೆಗಟ್ಟುವ ನಿಟ್ಟಿನಲ್ಲಿ ಮಕ್ಕಳ ಗ್ರಾಮ ಸಭೆಗಳಲ್ಲೂ ಬಾಲ್ಯ ವಿವಾಹ ಬಾಲ ಕಾರ್ಮಿಕತೆ ಬಾಲ ಗರ್ಭಿಣಿ ಪೋಕ್ಸೊ ಹೆಣ್ಣು ಮಕ್ಕಳ ಸುರಕ್ಷತೆ ಕುರಿತು ಅರಿವು ಮೂಡಿಸಬೇಕು. ತಾಂಡಾ ಗೊಲ್ಲರಹಟ್ಟಿ ಕಾಫಿ ಎಸ್ಟೇಟ್ ವಲಸೆ ಕಾರ್ಮಿಕರಲ್ಲಿ ಅರಿವು ಮೂಡಿಸಲು ಕಾರ್ಯಕ್ರಮ ಆಯೋಜಿಸುವಂತೆ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.