ಬುಧವಾರ, ಮಾರ್ಚ್ 22, 2023
26 °C

ಜೈಲಿನ ಮೇಲೆ ಪೊಲೀಸ್‌ ದಾಳಿ: ಮೊಬೈಲ್‌ ವಶ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ನಗರದ ಜಿಲ್ಲಾ ಕಾರಾಗೃಹದ ಮೇಲೆ ಗುರುವಾರ ನಸುಕಿನ ಜಾವ ಪೊಲೀಸರು ದಾಳಿ ಮಾಡಿದ್ದಾರೆ. 

ಹೆಚ್ಚುವರಿ ಪೊಲೀಸ್‌ ವರಿಷ್ಠಾಧಿಕಾರಿ ತಮ್ಮಯ್ಯ, ಡಿವೈ‌ಎಸ್‌ಪಿ ಉದಯ್‌ಭಾಸ್ಕರ್ ನೇತೃತ್ವದಲ್ಲಿ ದಾಳಿ ನಡೆದ ದಾಳಿಯಲ್ಲಿ ಮೊಬೈಲ್‌ ಫೋನ್‌ ಹಾಗೂ ಗಾಂಜಾ ವಶಕ್ಕೆ ಪಡೆಯಲಾಗಿದೆ. 

ಬೆಳಗಾವಿ ಜೈಲಿನಿಂದ ಕೇಂದ್ರ ಸಚಿವ ನಿತಿನ್‌ ಗಡ್ಕರಿ ಅವರಿಗೆ ಬೆದರಿಕೆ ಕರೆ ಹೋಗಿರುವ ಘಟನೆ ನಡೆದಿದ್ದು, ಈ ಹಿನ್ನೆಲೆಯಲ್ಲಿ ಹಾಸನದ ಜೈಲಿನ ಮೇಲೆಯೂ ಪೊಲೀಸರು ದಾಳಿ ನಡೆಸಿದ್ದಾರೆ. ಮೊಬೈಲ್‌ ಬಳಕೆ, ಮಾದಕ ವಸ್ತುಗಳನ್ನು ಪತ್ತೆ ಮಾಡಲಾಗಿದೆ. 

80 ಕ್ಕೂ ಹೆಚ್ಚು ಪೊಲೀಸರು ತಪಾಸಣೆ ನಡೆಸಿದ್ದಾರೆ. ವಿಚಾರಣಾಧೀನ ಕೈದಿಗಳು ಜೈಲಿನೊಳಗೆ ಫೋನ್ ಬಳಕೆ, ಮಾದಕ ವಸ್ತುಗಳನ್ನು ‌ಸೇವಿಸುತ್ತಿರುವ ಮಾಹಿತಿ ಹಿನ್ನೆಲೆಯಲ್ಲಿ ಈ ದಾಳಿ ನಡೆಸಲಾಗಿದೆ ಎಂದು ಪೊಲೀಸ್‌ ಮೂಲಗಳು ಮಾಹಿತಿ ನೀಡಿವೆ.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು