ಶನಿವಾರ, 27 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಚಿಕಿತ್ಸೆ ಬಳಿಕ ರಾಜಕೀಯ ಸಭೆಯಲ್ಲಿ ಭಾಗಿಯಾಗುವೆ: ದೇವೇಗೌಡ

Last Updated 12 ಡಿಸೆಂಬರ್ 2020, 13:17 IST
ಅಕ್ಷರ ಗಾತ್ರ

ಹಾಸನ: ಸೊಂಟದ ನೋವಿಗೆ ಶಸ್ತ್ರಚಿಕಿತ್ಸೆಗೆ ಒಳಗಾಗದೇ ಆಯುರ್ವೇದ ಚಿಕಿತ್ಸೆ ಪಡೆಯುತ್ತಿದ್ದು, ಚಿಕಿತ್ಸೆ ನಂತರ ರಾಜಕೀಯ ಸಭೆಯಲ್ಲಿ ಭಾಗಿಯಾಗುತ್ತೇನೆ ಎಂದು ರಾಜ್ಯಸಭಾ ಸದಸ್ಯ ಎಚ್‌.ಡಿ.ದೇವೇಗೌಡ ಹೇಳಿದರು.

ನಗರದಲ್ಲಿ ಶನಿವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಆರೋಗ್ಯ ಸುಧಾರಣೆ ಆಗುವವರೆಗೂ ರಾಜಕೀಯವಾಗಿ ಓಡಾಡುವುದಿಲ್ಲ. ಪಕ್ಷದ ಯಾವುದೇ ಸಭೆ ಕರೆದಿಲ್ಲ. ಎಚ್‌.ಡಿ. ಕುಮಾರಸ್ವಾಮಿ, ಬಂಡೆಪ್ಪ ಕಾಶಂಪುರ್ ಎಲ್ಲಾ ನೋಡಿಕೊಳ್ಳುತ್ತಿದ್ದಾರೆ. ಕೋವಿಡ್‌ ಕಾರಣದಿಂದ ಶ್ರಾವಣ ಮಾಸ ಮಾಡಲು ಸಾಧ್ಯವಾಗಲಿಲ್ಲ. ಕಾರ್ತಿಕ ಮಾಸದಲ್ಲಿ ಮನೆ ದೇವರಿಗೆ ಪೂಜೆ ಸಲ್ಲಿಸುತ್ತೇನೆ ಎಂದರು.

ಮುಖ್ಯಮಂತ್ರಿ ಯಡಿಯೂರಪ್ಪ ಅವರು ಮುಂದಿನ ಮೂರುವರೆ ವರ್ಷ ಅಧಿಕಾರ ನಡೆಸಲಿ. ಅವರಿಗೆ ಯಾವುದೇ ತೊಂದರೆ ನೀಡುವುದಿಲ್ಲವೆಂದು ಮೊದಲೇ ಹೇಳಿದ್ದೇನೆ. ಸಾರಿಗೆ ನೌಕರರು ಮುಷ್ಕರ ನಡೆಸುತ್ತಿರುವುದರಿಂದ ಪ್ರಯಾಣಿಕರಿಗೆ ಸಾಕಷ್ಟು ತೊಂದರೆ ಆಗಿದೆ. ಸರ್ಕಾರ ಸೂಕ್ತ ತೀರ್ಮಾನ ಕೈಗೊಳ್ಳಬೇಕು ಎಂದು ಹೇಳಿದರು.

ದೇವೇಗೌಡರು ನೇಗಿಲು ಹಿಡಿದಿದ್ದರಾ? ಎಂಬ ಸಿದ್ದರಾಮಯ್ಯ ಪ್ರಶ್ನೆಗೆ ಪ್ರತಿಕ್ರಿಯಿಸಿದ ಗೌಡರು, ‘ಸಿದ್ದರಾಮಯ್ಯ ತುಂಬಾ ದೊಡ್ಡವರಿದ್ದಾರೆ. ಅವರ ಬಗ್ಗೆ ಮಾತನಾಡುವುದಿಲ್ಲ. ಅವರ ವ್ಯಕ್ತಿತ್ವ ಇನ್ನೂ ದೊಡ್ಡದಾಗಲಿ’ ಎಂದು ವ್ಯಂಗ್ಯವಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT