ಕಲ್ಕೆರೆ ವಿದ್ಯುತ್ ವಿತರಣಾ ಕೇಂದ್ರಕ್ಕೆ ಅನುಮೋದನೆ
‘ಕಲ್ಕೆರೆ ಬಳಿ 220 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರ ನಿರ್ಮಾಣಕ್ಕೆ ಅನುಮೋದನೆ ದೊರೆತ್ತಿದ್ದು ಟೆಂಡರ್ ಹಂತದಲ್ಲಿದೆ. ತಾಲ್ಲೂಕಿನಲ್ಲಿ ಮುಂದಿನ 25 ವರ್ಷ ವಿದ್ಯುತ್ ಸಮಸ್ಯೆ ಎದುರಾಗದಂತೆ ಕ್ರಮವಹಿಸಲಾಗುತ್ತಿದೆ. ಮುಂಬರುವ ದಿನಗಳಲ್ಲಿ ದಂಡಿಗನಹಳ್ಳಿ ಮತ್ತು ಶ್ರವಣಬೆಳಗೊಳ ಹೋಬಳಿಗಳಲ್ಲಿ ನಿರಂತರ ವಿದ್ಯುತ್ ಪೂರೈಕೆಗಾಗಿ ಇಲಾಖೆಗೆ ಪ್ರಸ್ತಾವ ಸಲ್ಲಿಸಿದ್ದು ಅದು ಶೀಘ್ರ ಕಾರ್ಯರೂಪಕ್ಕೆ ಬರಲಿದೆ’ ಎಂದು ಶಾಸಕರು ತಿಳಿಸಿದರು.