ಭಾನುವಾರ, ಜನವರಿ 19, 2020
20 °C

ಹಾಸನದಲ್ಲಿ ‘ಪ್ರಜಾವಾಣಿ ಕ್ವಿಜ್‌’ ಸ್ಪರ್ಧೆ

ಪ‍್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

prajavani

ಹಾಸನ: ‘ಪ್ರಜಾವಾಣಿ’ ಹಾಗೂ ‘ಡೆಕ್ಕನ್‌ ಹೆರಾಲ್ಡ್‌’ ವತಿಯಿಂದ, ‘ದೀಕ್ಷಾ’ ಸಂಸ್ಥೆ ಸಹಯೋಗದಲ್ಲಿ ಜನವರಿ 14ರಂದು (ಮಂಗಳವಾರ) ನಗರದ ಬಿ.ಆರ್‌.ಅಂಬೇಡ್ಕರ್‌ ಭವನದಲ್ಲಿ ‘ಪ್ರಜಾವಾಣಿ ಕ್ವಿಜ್‌’ ಚಾಂಪಿಯನ್‌ಷಿಪ್‌ ನಡೆಯಲಿದೆ.

5ರಿಂದ 10ನೇ ತರಗತಿವರೆಗಿನ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಿರುವ ರಾಜ್ಯಮಟ್ಟದ ರಸಪ್ರಶ್ನೆ ಸ್ಪರ್ಧೆ ಇದಾಗಿದ್ದು, ಪ್ರತಿ ಹಂತದಲ್ಲಿ ಆಯ್ಕೆಯಾದ ತಂಡಗಳಿಗೆ ಅತ್ಯಾಕರ್ಷಕ ಬಹುಮಾನ ನೀಡಲಾಗುವುದು. ಬೆಳಿಗ್ಗೆ 8.30ಕ್ಕೆ ನೋಂದಣಿ ಆರಂಭವಾಗಲಿದ್ದು, 9.30ಕ್ಕೆ ಸ್ಪರ್ಧೆಗೆ ಚಾಲನೆ ಸಿಗಲಿದೆ.

ಒಂದು ಶಾಲೆಯಿಂದ ತಲಾ ಇಬ್ಬರಂತೆ ಮೂರು ತಂಡಗಳು ಮಾತ್ರ ಭಾಗವಹಿಸಲು ಅವಕಾಶವಿದ್ದು, ಉಚಿತ ಪ್ರವೇಶವಿದೆ. ಸ್ಪರ್ಧಿಗಳು ಶಾಲೆಗಳ ಮೂಲಕವೇ ಪಾಲ್ಗೊಳ್ಳಬೇಕು. ಹಾಸನ, ಚಿಕ್ಕಮಗಳೂರು ಜಿಲ್ಲೆಯ ಶಾಲಾ ವಿದ್ಯಾರ್ಥಿಗಳು ಭಾಗವಹಿಸಬಹುದು.

ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ಅವರು ಮಧ್ಯಾಹ್ನ ಮಕ್ಕಳಿಗೆ ಉಪಾಹಾರ ವ್ಯವಸ್ಥೆ ಮಾಡಿದ್ದಾರೆ. ಹಾಸನ ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟದ ವತಿಯಿಂದ ಮಕ್ಕಳಿಗೆ ಉಚಿತವಾಗಿ ಸಿಹಿ, ಐಸ್‌ಕ್ರೀಂ ಹಾಗೂ ವಿಜೇತರಿಗೆ ನಂದಿನಿ ಸ್ವೀಟ್ಸ್‌ ನೀಡಲಾಗುತ್ತದೆ.

ಇಲ್ಲಿ ಗೆದ್ದವರು ಜ.30ರಂದು ಬೆಂಗಳೂರಿನಲ್ಲಿ ನಡೆಯಲಿರುವ ಫೈನಲ್‌ ಸ್ಪರ್ಧೆಗೆ ಆಯ್ಕೆಯಾಗಲಿದ್ದಾರೆ. ರಾಜ್ಯದ 12 ನಗರಗಳಲ್ಲಿ ಸ್ಪರ್ಧೆ ನಡೆಯಲಿದ್ದು, ಸಾವಿರಕ್ಕೂ ಹೆಚ್ಚು ಶಾಲೆಗಳ ಸಾವಿರಾರು ವಿದ್ಯಾರ್ಥಿಗಳು ಭಾಗವಹಿಸಲಿದ್ದಾರೆ.

ಅಂತಿಮ ಸುತ್ತಿನಲ್ಲಿ, ಮೊದಲ ಮೂರು ಸ್ಥಾನ ಪಡೆದ ತಂಡಗಳಿಗೆ ಕ್ರಮವಾಗಿ ₹ 50 ಸಾವಿರ, ₹ 30 ಸಾವಿರ, ₹ 10 ಸಾವಿರ ನಗದು ಬಹುಮಾನ ನೀಡಲಾಗುವುದು. ನಾಲ್ಕು ಮತ್ತು ಐದನೇ ಸ್ಥಾನ ಪಡೆದ ತಂಡಗಳಿಗೂ ಕ್ರಮವಾಗಿ ₹ 6 ಸಾವಿರ ಹಾಗೂ ₹ 4 ಸಾವಿರ ನಗದು ಬಹುಮಾನವಿದೆ.

ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಜಿಲ್ಲಾಧಿಕಾರಿ ಆರ್‌.ಗಿರೀಶ್‌, ಸಾರ್ವಜನಿಕ ಶಿಕ್ಷಣ ಇಲಾಖೆ ಉಪ ನಿರ್ದೇಶಕ ಪ್ರಕಾಶ್‌, ಹಾಮೂಲ್‌ ವ್ಯವಸ್ಥಾಪಕ ನಿರ್ದೇಶಕ ಗೋಪಾಲಯ್ಯ, ಶ್ರವಣಬೆಳಗೊಳ ಕ್ಷೇತ್ರದ ಶಾಸಕ ಸಿ.ಎನ್‌.ಬಾಲಕೃಷ್ಣ ಭಾಗವಹಿಸುವರು.

ಮಾಹಿತಿಗಾಗಿ ಮಲ್ಲೇಶ್‌ –9606931809, ಬಸವರಾಜು –9606912160 ಅವರನ್ನು ಸಂಪರ್ಕಿಸಬಹುದು.

ಪ್ರತಿಕ್ರಿಯಿಸಿ (+)

ಈ ವಿಭಾಗದಿಂದ ಇನ್ನಷ್ಟು