ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್ ಬೇಡವೇ ಬೇಡ : ಮಂಜು

ಮೈತ್ರಿಕೂಟದಿಂದ ದೇವೇಗೌಡರ ಸ್ಪರ್ಧೆಗೆ ಸಮ್ಮತಿ
Last Updated 30 ಜನವರಿ 2019, 15:52 IST
ಅಕ್ಷರ ಗಾತ್ರ

ಹಾಸನ: ‘ಮುಂಬರುವ ಲೋಕಸಭಾ ಚುನಾವಣೆಗೆ ಹಾಸನ ಕ್ಷೇತ್ರದಿಂದ ಜೆಡಿಎಸ್ - ಕಾಂಗ್ರೆಸ್ ಮೈತ್ರಿಕೂಟದ ಅಭ್ಯರ್ಥಿಯಾಗಿ ಎಚ್.ಡಿ.ದೇವೇಗೌಡ ಅವರು ಸ್ಪರ್ಧಿಸಿದರೆ ಬೆಂಬಲಿಸುತ್ತೇವೆ. ಆದರೆ ಅವರ ಮೊಮ್ಮಗ ಪ್ರಜ್ವಲ್ ರೇವಣ್ಣ ಸ್ಪರ್ಧೆಗೆ ಕಾಂಗ್ರೆಸ್‌ ಕಾರ್ಯಕರ್ತರ ತೀವ್ರ ವಿರೋಧವಿದೆ’ ಎಂದು ಕಾಂಗ್ರೆಸ್ ಮುಖಂಡ ಎ.ಮಂಜು ಹೇಳಿದ್ದಾರೆ.

‘ಹಾಸನ ಲೋಕಸಭಾ ಕ್ಷೇತ್ರದಲ್ಲಿ ಸ್ಪರ್ಧಿಸಲು ಪ್ರಜ್ವಲ್ ಸಿದ್ಧತೆ ನಡೆಸಿದ್ದಾರೆ. ಆ ನಿಟ್ಟಿನಲ್ಲಿ ಹಾಸನದ ವಿವಿಧ ಬಡಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರ ಸಭೆ ನಡೆಸಿದ್ದಾರೆಂದು ವರದಿಯಾಗಿದೆ. ಆದರೆ, ಪ್ರಜ್ವಲ್ ಅವರು ಮೈತ್ರಿಕೂಟದ ಅಭ್ಯರ್ಥಿಯಾಗುವುದನ್ನು ಕಾಂಗ್ರೆಸ್ ಕಾರ್ಯಕರ್ತರು ಒಪ್ಪುವುದಿಲ್ಲ’ ಎಂದು ಮಾಧ್ಯಮಗಳಿಗೆ ಬಿಡುಗಡೆ ಮಡಿರುವ ವಿಡಿಯೊದಲ್ಲಿ ಅವರು ಸ್ಪಷ್ಟಪಡಿಸಿದ್ದಾರೆ.

‘ಹಾಸನ ಅಥವಾ ಮಂಡ್ಯ ಲೋಕಸಭಾ ಕ್ಷೇತ್ರಗಳಲ್ಲಿ ಒಂದನ್ನು ಕಾಂಗ್ರೆಸ್ ಗೆ ಬಿಟ್ಟುಕೊಡಬೇಕೆಂದು ಮನವಿ ಮಾಡುತ್ತಲೇ ಬಂದಿದ್ದೇವೆ. ಹೈಕಮಾಂಡ್‌ ಗಮನಕ್ಕೂ ಈ ವಿಷಯ ತರಲಾಗಿದೆ. ಹಾಸನದಲ್ಲಿ ಮೈತ್ರಿಕೂಟದ ಅಭ್ಯರ್ಥಿಯಾಗಿ ದೇವೇಗೌಡರು ಸ್ಪರ್ಧಿಸಿದರೆ ಕಾರ್ಯಕರ್ತರು ಒಪ್ಪಿಕೊಂಡು ಬೆಂಬಲಿಸುತ್ತೇವೆ. ಪ್ರಜ್ವಲ್ ಸ್ಪರ್ಧೆಯನ್ನು ಯಾವುದೇ ಕಾರಣಕ್ಕೂ ಒಪ್ಪುವುದಿಲ್ಲ. ದೇವೇಗೌಡರು ಯಾವ ಸಂದರ್ಭದಲ್ಲಿ, ಯಾವ ಕಾರಣಕ್ಕೆ ಪ್ರಜ್ವಲ್ ಅವರನ್ನು ಹಾಸನ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಎಂದು ಹೇಳಿದ್ದಾರೋ ಗೊತ್ತಿಲ್ಲ’ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT