ಸೋಮವಾರ, 4 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪಕ್ಷದಲ್ಲಿ ಯತೀಂದ್ರರಿಗೆ ನಂಬಿಕೆ ಇಲ್ಲ: ಪ್ರಜ್ವಲ್‌ ರೇವಣ್ಣ

Published 17 ಜನವರಿ 2024, 20:57 IST
Last Updated 17 ಜನವರಿ 2024, 20:57 IST
ಅಕ್ಷರ ಗಾತ್ರ

ಹಾಸನ: ‘ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್‌ ಹೆಚ್ಚು ಸ್ಥಾನ ಗಳಿಸಿದರೆ ಸಿದ್ದರಾಮಯ್ಯ ಅವರೇ ಐದು ವರ್ಷ ಮುಖ್ಯಮಂತ್ರಿಯಾಗಿರಲಿದ್ದಾರೆ ಎಂದು ಅವರ ಪುತ್ರ ಡಾ.ಯತೀಂದ್ರ ಹೇಳಿಕೆ ಗಮನಿಸಿದರೆ, ಪಕ್ಷದಲ್ಲಿ ಅವರಿಗೆ ನಂಬಿಕೆ ಇಲ್ಲವೆಂಬುದು ಮನವರಿಕೆಯಾಗುತ್ತದೆ’ ಎಂದು ಸಂಸದ ಪ್ರಜ್ವಲ್ ರೇವಣ್ಣ ಟೀಕಿಸಿದರು.

ನಗರದಲ್ಲಿ ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿ, ‘ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿರಲು ಕಾಂಗ್ರೆಸ್ ಪಕ್ಷ ಟಾರ್ಗೆಟ್ ಕೊಟ್ಟಿದೆಯೇ ಅಥವಾ ಅವರ ಜನಪ್ರಿಯತೆಗೆ ಆ ಸ್ಥಾನವನ್ನು ನೀಡಿದ್ದಾರೆಯೇ ಎಂಬ ಬಗ್ಗೆ ಸ್ಪಷ್ಟೀಕರಣ ನೀಡಬೇಕಿದೆ’ ಎಂದರು.

‘ರಾಜ್ಯ ಸರ್ಕಾರ ಜಾರಿಗೆ ತಂದಿರುವ ಐದು ಗ್ಯಾರಂಟಿಗಳಿಂದ ಆರ್ಥಿಕ ಹೊರೆಯಾಗುತ್ತಿದೆ ಎಂದು ಅವರ ಪಕ್ಷದ ಸಚಿವರೇ ಬಹಿರಂಗಪಡಿಸಿದ್ದಾರೆ. ಲೋಕಸಭೆ ಚುನಾವಣೆಯ ನಂತರ ಗ್ಯಾರಂಟಿ ಯೋಜನೆಗಳು ಮುಂದುವರಿಯುವುದಿಲ್ಲ. ಇದೆಲ್ಲ ರಾಜಕೀಯ ಗಿಮಿಕ್ ಎಂದು ಟೀಕಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT