ಶನಿವಾರ, 15 ಜೂನ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪೆನ್‌ಡ್ರೈವ್‌ ಹಂಚಿಕೆ ಪ್ರಕರಣ: ಆರೋಪಿಗಳಾದ ಚೇತನ್‌, ಲಿಖಿತ್‌ಗೆ ಜಾಮೀನು

Published 30 ಮೇ 2024, 10:28 IST
Last Updated 30 ಮೇ 2024, 10:28 IST
ಅಕ್ಷರ ಗಾತ್ರ

ಹಾಸನ: ಅಶ್ಲೀಲ ವಿಡಿಯೊಗಳಿದ್ದ ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರೋಪಿಗಳಾದ ಚೇತನ್ ಹಾಗೂ ಲಿಖಿತ್‌ಗೌಡಗೆ ಗುರುವಾರ ಮೂರನೇ ಅಧಿಕ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜಾಮೀನು ಮಂಜೂರು ಮಾಡಿದೆ.

ಪೆನ್‌ಡ್ರೈವ್ ಹಂಚಿಕೆ ಪ್ರಕರಣದ ಆರನೇ ಮತ್ತು ಏಳನೇ ಆರೋಪಿಯಾಗಿರುವ ಯಲಗುಂದ ಚೇತನ್ ಹಾಗೂ ಲಿಖಿತ್‌ಗೌಡ ಅವರನ್ನು ಎಸ್ಐಟಿ ಅಧಿಕಾರಿಗಳು ಮೇ 12 ರಂದು ಬಂಧಿಸಿದ್ದರು. ಬಂಧನದ ಹದಿನೆಂಟು ದಿನಗಳ ಬಳಿಕ ಆರೋಪಿಗಳಿಗೆ ಜಾಮೀನು ಮಂಜೂರಾಗಿದೆ.

ಸದ್ಯ ಹಾಸನದ ಸಂತೇಪೇಟೆಯ ಜಿಲ್ಲಾ ಕಾರಾಗೃಹದಲ್ಲಿರುವ ಚೇತನ್ ಹಾಗೂ ಲಿಖಿತ್‌ಗೌಡ ಗುರುವಾರ ಸಂಜೆ ಅಥವಾ ಶುಕ್ರವಾರ ಜೈಲಿನಿಂದ ಬಿಡುಗಡೆಯಾಗುವ ಸಾಧ್ಯತೆ ಇದೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT