ಶನಿವಾರ, 18 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪ್ರಜ್ವಲ್‌ನಿಂದ ಲೈಂಗಿಕ ದೌರ್ಜನ್ಯ: ಸಂತ್ರಸ್ತೆಯರ ನೆರವಿಗೆ ಸಹಾಯವಾಣಿ ಆರಂಭ

Published 5 ಮೇ 2024, 13:14 IST
Last Updated 5 ಮೇ 2024, 13:14 IST
ಅಕ್ಷರ ಗಾತ್ರ

ಬೆಂಗಳೂರು: ‘ಹಾಸನ ಸಂಸದ ಪ್ರಜ್ವಲ್ ರೇವಣ್ಣ ಅವರಿಂದ ನಡೆದಿದೆ’ ಎನ್ನಲಾದ ಲೈಂಗಿಕ ದೌರ್ಜನ್ಯದ ಸಂತ್ರಸ್ತೆಯರ ನೆರವಿಗಾಗಿ ಎಸ್‌ಐಟಿ ಅಧಿಕಾರಿಗಳು ಸಹಾಯವಾಣಿ ಆರಂಭಿಸಿದ್ದಾರೆ.

ಈ ಬಗ್ಗೆ ಪತ್ರಿಕಾ ಪ್ರಕಟಣೆ ನೀಡಿರುವ ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್, ‘ಹಾಸನ ಜಿಲ್ಲೆಯಲ್ಲಿ ಮಹಿಳೆಯರ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಕುರಿತು ತನಿಖೆಗಾಗಿ ಎಸ್‌ಐಟಿ ತಂಡವನ್ನು ರಚಿಸಲಾಗಿದೆ. ಸಂತ್ರಸ್ತೆಯರ ನೆರವಿಗಾಗಿ 6360938947 ಸಹಾಯವಾಣಿ ಆರಂಭಿಸಲಾಗಿದೆ’ ಎಂದು ತಿಳಿಸಿದ್ದಾರೆ.

‘ಸಂತ್ರಸ್ತೆಯರು ಹಾಗೂ ಅವರಿಗೆ ಸಂಬಂಧಪಟ್ಟ ವ್ಯಕ್ತಿಗಳು ಸಹಾಯವಾಣಿಗೆ ಕರೆ ಮಾಡಿ ದೂರು ನೀಡಬಹುದು. ಸಂತ್ರಸ್ತೆಯರಿಗೆ ಅಗತ್ಯವಿರುವ ಕಾನೂನು ನೆರವು, ರಕ್ಷಣೆ ಹಾಗೂ ಇತರೆ ಸಹಾಯ ಮಾಡಲು ನಾವು ಸಿದ್ಧರಿದ್ದೇವೆ. ಕೃತ್ಯದ ಬಗ್ಗೆ ದೂರು ನೀಡುವವರ ಹೆಸರು ಗೌಪ್ಯವಾಗಿಡಲಾಗುವುದು’ ಎಂದು ಎಸ್‌ಐಟಿ ಮುಖ್ಯಸ್ಥ ಬಿ.ಕೆ.ಸಿಂಗ್ ತಿಳಿಸಿದ್ದಾರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT