ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಮೂರನೇ ಅಲೆ ಎದುರಿಸಲು ಸನ್ನದ್ಧ; ಮೃತ ಕುಟುಂಬಗಳಿಗೆ ಪರಿಹಾರ ಶೀಘ್ರ: ಡಿ.ಸಿ

ಕೊರೊನಾ ತಡೆಗೆ ₹15 ಕೋಟಿ ಖರ್ಚು,
Last Updated 18 ಸೆಪ್ಟೆಂಬರ್ 2021, 14:11 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಕೋವಿಡ್‌ ಅಲೆ ನಿಯಂತ್ರಿಸಲು ಅಂದಾಜು ₹15 ಕೋಟಿ ಖರ್ಚು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಆರ್.ಗಿರೀಶ್ ತಿಳಿಸಿದರು.

ಇತ್ತೀಚೆಗೆ ಮತ್ತೆ ₹7 ಕೋಟಿ ಬಿಡುಗಡೆಯಾಗಿದ್ದು, ಹಣಕಾಸಿನ ಕೊರತೆ ಇಲ್ಲ. ಕೊರೊನಾ ಮೊದಲ ಹಾಗೂ ಎರಡನೇ ಅಲೆಯನ್ನು ಎಲ್ಲರ ಸಹಕಾರದೊಂದಿಗೆ ಸಮರ್ಥವಾಗಿ ನಿರ್ವಹಣೆ ಮಾಡಿದ್ದೇವೆ.ಹಿಮ್ಸ್ ಹಾಗೂ ತಾಲ್ಲೂಕು ಆಸ್ಪತ್ರೆಗಳಲ್ಲಿ ಹಾಸಿಗೆ ಸಮಸ್ಯೆ ತಲೆದೋರದಂತೆ ಸರ್ಕಾರಕ್ಕೆ ಪತ್ರ ಬರೆದುಮುನ್ನೆಚ್ಚರಿಕೆ ವಹಿಸಲಾಯಿತು. ಆದರೆ, ಅಂದುಕೊಂಡಂತೆ ಮೂರನೇ ಅಲೆ ಗಂಭೀರವಾಗಲಿಲ್ಲ ಎಂದುಶನಿವಾರ ಏರ್ಪಡಿಸಿದ್ದ ಮಾಧ್ಯಮ ಸಂವಾದದಲ್ಲಿ ಹೇಳಿದರು. ‌

ಹಿಮ್ಸ್ ಸೇರಿದಂತೆ ಐದು ತಾಲೂಕುಗಳಲ್ಲಿ ಆಮ್ಲಜನಕ ವ್ಯವಸ್ಥೆ ಹಾಗೂ ಜಂಬೋ ಸಿಲಿಂಡರ್‌ಗಳನ್ನು ಹೊಂದಿಸಿಕೊಳ್ಳಲಾಗಿದೆ. ತಾಲೂಕು ಆಸ್ಪತ್ರೆ, ಸಮುದಾಯ ಆರೋಗ್ಯ ಕೇಂದ್ರಗಳಲ್ಲೂ ಚಿಕಿತ್ಸೆ ವ್ಯವಸ್ಥೆ
ಮಾಡಿಕೊಳ್ಳಲಾಗಿದೆ. ಮೂರನೇ ಅಲೆಎದುರಿಸಲು ಸನ್ನದ್ಧವಾಗಿದ್ದೇವೆ ಎಂದು ಮಾಹಿತಿ ನೀಡಿದರು.

ಖಾಸಗಿ ಆಸ್ಪತ್ರೆಗಳಲ್ಲಿ ಕೋವಿಡ್ ಚಿಕಿತ್ಸೆ ವೇಳೆ ಹೆಚ್ಚುವರಿ ಶುಲ್ಕ ಪಡೆದಿರುವ ಬಗ್ಗೆ ಆಡಿಟ್ ವರದಿ ಬಂದಿದ್ದು, ಈ ಕುರಿತು ಸಂಬಂಧಪಟ್ಟ ಆಸ್ಪತ್ರೆಗಳಿಗೆ ನೋಟಿಸ್ ಜಾರಿ ಮಾಡಲಾಗಿದೆ. ಹೆಚ್ಚುವರಿಹಣವನ್ನು ರೋಗಿಗಳ ಕಡೆಯವರಿಗೆ ವಾಪಸ್ ಕೊಡಿಸಲಾಗುವುದು ಎಂದು ತಿಳಿಸಿದರು.

ಎತ್ತಿನಹೊಳೆ ಯೋಜನೆ0 ಯಿಂದ 33 ಕಿಮೀ ವರೆಗಿನ ಕಾಮಗಾರಿಗೆ ಭೂಮಿ ಕೊಡದವರಿಗೆ ನಿರಂತರವಾಗಿ ನೋಟಿಸ್ ನೀಡಲಾಗುತ್ತಿದೆ. ನಂತರವೂ ಸ್ಪಂದಿಸದೇ ಇದ್ದರೆ ಕೋರ್ಟ್‌ಗೆ ಅಫಿಡವಿಟ್ ಸಲ್ಲಿಸಲು ಸರ್ಕಾರದಿಂದ
ಸೂಚನೆ ಬಂದಿದೆ.ನಗರದ ಮೇಲ್ಸೇತುವೆ ಕಾಮಗಾರಿ ವಿಳಂಬವಾಗಿರುವ ಬಗ್ಗೆ ಅಧಿವೇಶನ ಮುಗಿದ ಬಳಿಕ ಶೀಘ್ರವೇ
ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಅಧಿಕಾರಿಗಳ ಸಭೆ ನಡೆಸಲಾಗುವುದು ಎಂದರು.

ನಗರದ ರಿಂಗ್ ರಸ್ತೆ ಮೊದಲಾದ ಕಡೆಗಳಲ್ಲಿ ಸಿಎಲ್-7 ಮದ್ಯದಂಗಡಿಗಳಿಂದ ಅನೇಕ ರೀತಿಯ ಸಮಸ್ಯೆಗಳಾಗುತ್ತಿವೆ ಎಂಬ ಪ್ರಶ್ನೆಗೆ ಉತ್ತರಿಸಿ ಜಿಲ್ಲಾಧಿಕಾರಿ, ಸರ್ಕಾರದ ನಿಯಮಾವಳಿ ದುರ್ಬಳಕೆಯಾಗಿದ್ದರೆ ಪರಿಶೀಲಿಸುವಂತೆ ಸಂಬಂಧಪಟ್ಟ ಅಧಿಕಾರಿಗಳಿಗೆ ಸೂಚಿಸಲಾಗುವುದು, ನಿಯಮ ಉಲ್ಲಂಘನೆ ಆಗಿದ್ದರೆ ಕ್ರಮ ಕೈಗೊಳ್ಳುವಂತೆ ನಿರ್ದೇಶನ ನೀಡುವುದಾಗಿ ತಿಳಿಸಿದರು.

ಬೆಂಗಳೂರು–ಮಂಗಳೂರು ರಾಷ್ಟ್ರೀಯ ಹೆದ್ದಾರಿ 75 ರ ಕಾಮಗಾರಿಗೆ ಬೇಕಾದ ಮರಳು, ಜಲ್ಲಿ ಸೇರಿದಂತೆ ಎಲ್ಲಾ ವ್ಯವಸ್ಥೆಗಳನ್ನು ಜಿಲ್ಲಾಡಳಿತ ಒದಗಿಸಿದೆ. ಆದರೂ ಕಾಮಗಾರಿ ವೇಗ ಪಡೆದಿಲ್ಲಎಂದರು.

ಮೊದಲ ಅಲೆ ಸಂದರ್ಭದಲ್ಲಿ ಕೊರೊನಾದಿಂದ ಮೃತಪಟ್ಟ ಬಿಪಿಎಲ್ ಕುಟುಂಬಗಳ ಸುಮಾರು 525 ಸದಸ್ಯರಿಗೆ ತಲಾ ಒಂದು ಲಕ್ಷ ರೂಪಾಯಿ ಪರಿಹಾರ ನೀಡುವ ಸಂಬಂಧ ಸರ್ಕಾರದ ಸೂಚನೆಹಿನ್ನೆಲೆಯಲ್ಲಿ ಕೊರೊನಾದಿಂದ ಸತ್ತವರ ಬಗ್ಗೆ ಕಂದಾಯ ಮತ್ತು ಆರೋಗ್ಯ ಇಲಾಖೆಗಳು ಸೇರಿ ಪುನರ್ವಿಮರ್ಶೆ ನಡೆಸುತ್ತಿವೆ. ನಿಜ ಪ್ರಕರಣಗಳ ಬಗ್ಗೆ ತಾಂತ್ರಿಕ ವರದಿ ಪಡೆದು ಅರ್ಹರ ಪಟ್ಟಿಯನ್ನುಪೋರ್ಟಲ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಅಂಥವರಿಗೆ ನೇರವಾಗಿ ಪರಿಹಾರ ಹಣವರ್ಗಾವಣೆಯಾಗಲಿದೆ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT