ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಿಹಿಂಪ ಮೆರವಣಿಗೆ ವೇಳೆ ಕುರಾನ್‌ ಪರ ಜೈಕಾರ

Last Updated 28 ಮಾರ್ಚ್ 2023, 17:50 IST
ಅಕ್ಷರ ಗಾತ್ರ

ಬೇಲೂರು (ಹಾಸನ): ಇಲ್ಲಿನ ಚೆನ್ನಕೇಶವ ದೇವಸ್ಥಾನದ ಜಾತ್ರಾ ಮಹೋತ್ಸವದಲ್ಲಿ ಕುರಾನ್‌ ಪಠಣ ವಿರೋಧಿಸಿ ವಿಶ್ವ ಹಿಂದೂ ಪರಿಷತ್‌ ವತಿಯಿಂದ ಮಂಗಳವಾರ ಪ್ರತಿಭಟನಾ ಮೆರವಣಿಗೆಯ ವೇಳೆ ಯುವಕನೊಬ್ಬ ಕುರಾನ್ ಪರ ಘೋಷಣೆ ಕೂಗಿದ್ದು, ಕೆಲಕಾಲ ಉದ್ವಿಗ್ನ ಸ್ಥಿತಿ ನಿರ್ಮಾಣವಾಗಿತ್ತು.

ಪ್ರತಿಭಟನಕಾರರು ಮೆರವಣಿಗೆ ಮೂಲಕ ಚೆನ್ನಕೇಶವ ದೇವಸ್ಥಾನಕ್ಕೆ ತೆರಳುತ್ತಿದ್ದರು. ಈ ಮಧ್ಯೆ ಯುವಕನೊಬ್ಬ ಕುರಾನ್ ಪರ ಘೋಷಣೆ ಕೂಗಿದ್ದಾನೆ. ಇದರಿಂದ ಆಕ್ರೋಶಗೊಂಡ ಪ್ರತಿಭಟನಕಾರರು, ಸ್ಥಳದಲ್ಲಿಯೇ ಧರಣಿ ಆರಂಭಿಸಿದರು. ಪೊಲೀಸರು ಕೂಡಲೇ ಆ ಯುವಕನನ್ನು ವಶಕ್ಕೆ ಪಡೆದು ಕರೆದೊಯ್ದರು.

ಪಟ್ಟು ಬಿಡದ ಪ್ರತಿಭಟನಕಾರರು ರಸ್ತೆಯಲ್ಲಿಯೇ ಧರಣಿ ಮುಂದುವರಿಸಿದರು. ಸ್ಥಳಕ್ಕೆ ಬಂದ ತಹಶೀಲ್ದಾರ್‌ ಹಾಗೂ ಪೊಲೀಸ್‌ ಅಧಿಕಾರಿಗಳು ಪರಿಸ್ಥಿತಿಯನ್ನು ವಿವರಿಸಿ, ಯುವಕನನ್ನು ಬಂಧಿಸಲಾಗಿದೆ. ಯಾವುದೇ ಅಹಿತಕರ ಘಟನೆಗೆ ಅವಕಾಶ ನೀಡುವುದಿಲ್ಲ ಎಂದು ಹೇಳಿದರು.

ನಂತರ ಅಲ್ಲಿಂದ ಎದ್ದ ಪ್ರತಿಭಟನಕಾರರು, ಚೆನ್ನಕೇಶವ ದೇವಸ್ಥಾನದವರೆಗೆ ಮೆರವಣಿಗೆ ನಡೆಸಿ, ತಹಶೀಲ್ದಾರ್‌ ಮೂಲಕ ಮನವಿ ಸಲ್ಲಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT