ಭಾನುವಾರ, ಸೆಪ್ಟೆಂಬರ್ 19, 2021
24 °C

ನದಿಯಲ್ಲಿ ಕೊಚ್ಚಿ ಹೋಗುತ್ತಿದ್ದ ವೃದ್ಧ, ಯುವಕನ ರಕ್ಷಣೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಕೊಣನೂರು: ಕಾವೇರಿ ನದಿಗೆ ಬಿದ್ದ ವೃದ್ಧ ಹಾಗೂ ಅವರನ್ನು ಪಾರು ಮಾಡಲು ಹೋಗಿ ನೀರಿನಲ್ಲಿ ಕೊಚ್ಚಿಕೊಂಡು ಹೋಗುತ್ತಿದ್ದ ಯುವಕನನ್ನು ರಕ್ಷಿಸಲಾಗಿದೆ.

ಭಾನುವಾರ ಸಂಜೆ ಚಿಕ್ಕ ಅರಕಲಗೂಡು ಗ್ರಾಮದ ದಾಸೇಗೌಡ (94) ಎಂಬುವರು ಪಟ್ಟಣದ ಬಳಿ ಕಾವೇರಿ ನದಿಯಲ್ಲಿ ಮುಳುಗಿ ರಕ್ಷಣೆಗೆ ಕೂಗಿಕೊಂಡಿದ್ದಾರೆ. ಅಲ್ಲಿದ್ದ ಹಾಸನದ 23 ವರ್ಷದ ನವೀನ್‌ ರಕ್ಷಿಸಲು ನೀರಿಗೆ ಹಾರಿದ್ದಾರೆ. ಅವರೂ ನೀರಿನ ಸೆಳೆತಕ್ಕೆ ಕೊಚ್ಚಿಕೊಂಡು ಹೋಗುತ್ತಿದ್ದಾಗ ಜನರು ಚೀರಾಟ ನಡೆಸಿದ್ದಾರೆ.

ತೂಗು ಸೇತುವೆ ಬಳಿ ಛಾಯಾಗ್ರಹಣ ಮಾಡುತ್ತಿದ್ದ ಮೈಸೂರಿನ ನ್ಯಾಷನಲ್ ಅಕಾಡೆಮಿ ಆಫ್ ರುಡ್‌ಸೆಟ್‌ನ ಗಿರಿ ಮಂಜು, ನದಿಯಲ್ಲಿ ಈಜಿ ದಾಸೇಗೌಡ ಮತ್ತು ನವೀನ್‌ ಅವರನ್ನು ರಕ್ಷಿಸಿದ್ದಾರೆ. 

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು