ಗುರುವಾರ, 12 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸೇತುವೆ, ರಸ್ತೆಗಾಗಿ ನೀರಿಗಿಳಿದು ಪ್ರತಿಭಟನೆ

Published 4 ಆಗಸ್ಟ್ 2024, 13:42 IST
Last Updated 4 ಆಗಸ್ಟ್ 2024, 13:42 IST
ಅಕ್ಷರ ಗಾತ್ರ

ಬೇಲೂರು: ತಾಲ್ಲೂಕಿನ ಹಾರೋಹಳ್ಳಿಗೆ ಶಾಶ್ವತ ಸೇತುವೆ ಹಾಗೂ ರಸ್ತೆ ನಿರ್ಮಿಸಬೇಕೆಂದು ಒತ್ತಾಯಿಸಿ ರೈತರು ನೀರಿಗಿಳಿದು ಭಾನುವಾರ ಪ್ರತಿಭಟನೆ ನಡೆಸಿದರು.

ಗ್ರಾಮಸ್ಥ ರಮೇಶ್ ಮಾತನಾಡಿ, ಹಾರೋಹಳ್ಳಿಯ ಚೋಮನಕೆರೆ ಏರಿ ಒಡೆದು ಜಮೀನಿಗೆ ನೀರು ನುಗ್ಗಿ, ಬೆಳೆಗಳು ಕೊಳೆಯುವ ಸ್ಥಿತಿಯಲ್ಲಿವೆ. ರಸ್ತೆ ಇಲ್ಲದೆ ಸಂಪರ್ಕ ಕಡಿತವಾಗಿದೆ. ಶಾಶ್ವತ ಕಿರು ಸೇತುವೆಯನ್ನು ಮಾಡಿಕೊಡಬೇಕು. ಇಲ್ಲದಿದ್ದರೆ ತಾಲ್ಲೂಕು ಪಂಚಾಯಿತಿ ಕಚೇರಿ ಮುಂದೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದರು.

  ಸ್ಥಳಕ್ಕೆ ಭೇಟಿ ನೀಡಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರಕಲಾ ಮಾತನಾಡಿ, ‘ಶಾಸಕರಿಗೆ ಹಾಗೂ ಅಧಿಕಾರಿಗಳಿಗೆ ಸಮಸ್ಯೆ ಬಗ್ಗೆ ಮನವರಿಕೆ ಮಾಡಿಕೊಟ್ಟಿದ್ದೇವೆ’ ಎಂದರು.

 ಗ್ರಾಮಸ್ಥರಾದ ಪುಟ್ಟಯ್ಯ, ಸಂಪತ್, ಜಗದೀಶ್, ಕಿರಣ್, ರಘು, ಗೌರಯ್ಯ, ಕುಮಾರ್, ವಿನಯ್  ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT