ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಅಂಚೆ ಕಚೇರಿ ಎದುರು ಪ್ರತಿಭಟನೆ

ರೈತ ವಿರೋಧಿ ಕಾಯ್ದೆಗಳ ತಿದ್ದುಪಡಿ ಹಿಂಪಡೆಯಲು ಆಗ್ರಹ
Last Updated 2 ಡಿಸೆಂಬರ್ 2020, 12:59 IST
ಅಕ್ಷರ ಗಾತ್ರ

ಹಾಸನ: ‘ದೆಹಲಿ ಚಲೊ’ ಧರಣಿ ಬೆಂಬಲಿಸಿ ಅಖಿಲ ಭಾರತ ಕಿಸಾನ್ ಸಂಘರ್ಷ ಸಮನ್ವಯ ಸಮಿತಿ ನೇತೃತ್ವದಲ್ಲಿ ಬುಧವಾರ ನಗರದ ಅಂಚೆ ಅಧೀಕ್ಷಕರ ಕಚೇರಿ ಎದುರು ಪ್ರತಿಭಟನೆ ನಡೆಸಲಾಯಿತು.

ನಗರದ ಹೇಮಾವತಿ ಪ್ರತಿಮೆ ಬಳಿಯಿಂದ ಮೆರವಣಿಗೆಯಲ್ಲಿ ಬಂದುರಾಜ್ಯ ಹಾಗೂ ಕೇಂದ್ರ ಸರ್ಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು. ನವದೆಹಲಿಯಲ್ಲಿ ರೈತರ ಮೇಲೆ ನಡೆಸುತ್ತಿರುವ ದೌರ್ಜನ್ಯವನ್ನು ಖಂಡಿಸಿದರು. ‌

ಕೃಷಿ ಕ್ಷೇತ್ರದ ಸುಧಾರಣೆಗಾಗಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಮೂರು ಕಾಯ್ದೆಗಳನ್ನು ಹಿಂಪಡೆಯಬೇಕು. ಪಂಜಾಬ್‌, ಹರಿಯಾಣ ಸೇರಿದಂತೆ ದೇಶದ ವಿವಿಧ ಭಾಗಗಳಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ರೈತರಿಗೆ ಮಾರಕವಾಗುವ ಕಾಯ್ದೆಗಳನ್ನು ವಾಪಸ್‌ ಪಡೆಯಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.

ಶಾಂತಿಯುತವಾಗಿ ಪ್ರತಿಭಟನೆ ನಡೆಸುತ್ತಿದ್ದ ರೈತರ ಮೇಲೆ ಹರಿಯಾಣ ಸರ್ಕಾರ ಹಾಗೂ ಕೇಂದ್ರ ಸರ್ಕಾರ ದೌರ್ಜನ್ಯನಡೆಸಿರುವುದು ಸರಿಯಲ್ಲ. ಲಾಠಿ ಪ್ರಹಾರ, ಅಶ್ರುವಾಯು ಸಿಡಿಸಿ ದೌರ್ಜನ್ಯ ಎಸಗಲಾಗಿದೆ. ಕೂಡಲೇ ರೈತ ಮುಖಂಡರ ಜತೆ ಸರ್ಕಾರ ಮಾತುಕತೆ ನಡೆಸಿ, ಬೇಡಿಕೆ ಈಡೇರಿಸಬೇಕು. ಇಲ್ಲವಾದಲ್ಲಿ ತೀವ್ರವಾದ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಮುಖಂಡ ಬಾಬು ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾಧ್ಯಕ್ಷ ಎಚ್‌.ಆರ್‌. ನವೀನ್ ಕುಮಾರ್‌, ದಲಿತ ಹಕ್ಕುಗಳ ಸಮಿತಿ ಜಿಲ್ಲಾ ಸಂಚಾಲಕ ಎಂ.ಜಿ. ಪೃಥ್ವಿ ಹಾಗೂ ರಾಜ್ಯ ರೈತ ಸಂಘದ ಮುಖಂಡರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT