ಗುರುವಾರ , ಫೆಬ್ರವರಿ 25, 2021
28 °C

ಶಾಸಕರ ಬೇಡಿಕೆ ಈಡೇರಿಕೆ ಭರವಸೆ ನಂತರ ಸಿಎಂ ಕಚೇರಿ ಎದುರು ಧರಣಿ ಸರಿಯಲ್ಲ: ದೇವೇಗೌಡ

ಪ್ರಜಾವಾಣಿ ವಾರ್ತೆ‌ Updated:

ಅಕ್ಷರ ಗಾತ್ರ : | |

ಹಾಸನ: ಬೇಡಿಕೆ ಈಡೇರಿಸುವ ಭರವಸೆ ನೀಡಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್‌.ಯಡಿಯೂರಪ್ಪ ಕಚೇರಿ ಎದುರು ಜೆಡಿಎಸ್‌ ಶಾಸಕರು ಧರಣಿ ನಡೆಸುವುದು ಸರಿಯಲ್ಲ ಎಂದು ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ ಅಭಿಪ್ರಾಯಪಟ್ಟರು.

ಮುಖ್ಯಮಂತ್ರಿ ಭೇಟಿಗೆ ಸೋಮವಾರ ಅವಕಾಶ ಕೇಳಿದ್ದೇನೆ. ಅನುಮತಿ ನೀಡಿದರೆ ಶಾಸಕರನ್ನು ಜತೆಯಲ್ಲಿ ಕರೆದೊಯ್ಯುವೆ. ಮೂರು ದಿನದಲ್ಲಿ ಅಧಿವೇಶನ ಆರಂಭವಾಗಲಿದೆ. ಅಲ್ಲಿಯೇ ಯಾವ ಯಾವ ಕ್ಷೇತ್ರಕ್ಕೆ ಎಷ್ಟು ಅನುದಾನ ಬಿಡುಗಡೆಯಾಗಿದೆ ಎಂಬುದನ್ನು ಪಕ್ಷದ ಶಾಸಕರು ಅಂಕಿ ಅಂಶ ಸಮೇತ ಚರ್ಚಿಸಬಹುದು. ಸಮ್ಮಿಶ್ರ ಸರ್ಕಾರದ ಅವಧಿಯಲ್ಲಿ ಮಂಜೂರಾಗಿದ್ದ ಹಲವು ಕಾಮಗಾರಿಗಳಿಗೆ ಬಿಜೆಪಿ ಸರ್ಕಾರ ಅನುದಾನ ನೀಡಿಲ್ಲ. ನನಗೆ ಈಗ 88 ವರ್ಷ. 90 ದಾಟಿದರೆ ಹೋರಾಟ ಮಾಡುವುದು ಕಷ್ಟ. ವಿಮಾನ ನಿಲ್ದಾಣ, ಐಐಟಿ ಸ್ಥಾಪನೆ ಸೇರಿದಂತೆ ಹಲವು ಯೋಜನೆಗಳಿಗೆ ಅನುದಾನ ನೀಡುವಂತೆ ಕೋರಲಾಗುವುದು ಭಾನುವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.

ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು