ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಜಿಲ್ಲೆಯಲ್ಲಿ ಪ್ರತಿಭಟನೆಗಳ ಸರಮಾಲೆ

ಅತ್ಯಾಚಾರಿಗಳಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹ
Last Updated 5 ಡಿಸೆಂಬರ್ 2019, 15:03 IST
ಅಕ್ಷರ ಗಾತ್ರ

ಹಾಸನ: ಜಿಲ್ಲೆಯಲ್ಲಿ ಗುರುವಾರ ಪ್ರತಿಭಟನೆಗಳ ಸರಣಿ ನಡೆಯಿತು. ತೆಲಂಗಾಣ ಯುವತಿ ಮೇಲೆ ಅತ್ಯಾಚಾರವೆಸಗಿ ಕೊಲೆಗೈದಿರುವವರಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಆಗ್ರಹಿಸಿ ಎನ್ಎಸ್ ಯುಐ, ಪಶು ವೈದ್ಯಕೀಯ ಮಹಾವಿದ್ಯಾಲಯ ಹಾಗೂ ಪಶು ವೈದ್ಯರು ಪ್ರತ್ಯೇಕವಾಗಿ ಪ್ರತಿಭಟನೆ ನಡೆಸಿದರು.

ಎನ್‌ಎಸ್‌ಯುಐ: ನಗರದ ಹೇಮಾವತಿ ವೃತ್ತದಿಂದ ಎನ್‌ಎಸ್‌ಯುಐ ನೇತೃತ್ವದಲ್ಲಿ ನೂರಾರು ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಗೆ ಮೆರವಣಿಗೆಯಲ್ಲಿ ಬಂದು ಪ್ರತಿಭಟನೆ ನಡೆಸಿದರು.

ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು. ಇಂತಹ ಘಟನೆಗಳು ಮುಂದೆ ಮರುಕಳಿಸದಂತೆ ಸರ್ಕಾರ ಸೂಕ್ತ ಕ್ರಮಕೈಗೊಳ್ಳಬೇಕು ಎಂದು ವಿದ್ಯಾರ್ಥಿಗಳು ಆಗ್ರಹಿಸಿದರು.

ಪಶು ವೈದ್ಯಕೀಯ ಮಹಾವಿದ್ಯಾಲಯ: ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ವಿದ್ಯಾರ್ಥಿಗಳು ಜಿಲ್ಲಾಧಿಕಾರಿ ಕಚೇರಿವರೆಗೆ ಮೆರವಣಿಗೆಯಲ್ಲಿ ಬಂದು ಸಲ್ಲಿಸಿದರು.

‘ಮಹಿಳೆಯರ ಮೇಲಿನ ದೌರ್ಜನ್ಯ ತಡೆಯಲು ಸರ್ಕಾರ ಕಟ್ಟು ನಿಟ್ಟಿನ ಕಾನೂನು ರೂಪಿಸಬೇಕು. ಮುಂದಿನ ದಿನಗಳಲ್ಲಿ ಈ ರೀತಿಯ ಘಟನೆ ಮರುಕಳಿಸದಂತೆ ಎಚ್ಚರ ವಹಿಸಬೇಕು’ ಎಂದು ಮನವಿಯಲ್ಲಿ ಮಾಡಿದರು.

ಮಾಹಾವಿದ್ಯಾಲಯ ಡೀನ್ ಶಿವಕುಮಾರ್, ಸತೀಶ್, ಗಂಗಾ ನಾಯಕ್, ಪುಟ್ಟಲಕ್ಷ್ಮಮ್ಮ ಇದ್ದರು.

ಪಶುವೈದ್ಯಕೀಯ ಸಂಘ: ಪಶುವೈದ್ಯಕೀಯ ಸಂಘದ ಸದಸ್ಯರು ಕೈಗೆ ಕಪ್ಪು ಪಟ್ಟಿ ಧರಿಸಿ ಮೌನ ಪ್ರತಿಭಟನೆ ನಡೆಸಿದರು. ರಾಷ್ಟ್ರದಲ್ಲಿ ನಿರಂತರ ಜರುಗುತ್ತಿರುವ ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯಗಳನ್ನು ತಡೆಯಲು ಕಠಿಣ ಕಾನೂನು, ಸುರಕ್ಷತಾ ಕ್ರಮಗಳನ್ನು ಕೈಗೊಳ್ಳಬೇಕು. ಅತ್ಯಾಚಾರ ಪ್ರಕರಣವನ್ನು ತ್ವರಿತವಾಗಿ ವಿಚಾರಣೆ ನಡೆಸಿ ಅಪರಾಧಿಗಳಿಗೆ ಅತ್ಯಂತ ಕಠಿಣ ಶಿಕ್ಷೆ ನೀಡಬೇಕು ಎಂದು ಒತ್ತಾಯಿಸಿದರು.

ಪಶುಪಾಲನಾ ಇಲಾಖೆ ಉಪ ನಿರ್ದೇಶಕಿ ಎಚ್.ಪಿ. ಜಾನಕಿ, ಶ್ರೀನಿವಾಸ್, ಎಂ.ಆರ್. ಪ್ರವೀಣ್ ಕುಮಾರ್, ಮಧು, ಎಚ್.ಎಸ್. ರವಿಶಂಕರ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT