ಅರಸೀಕೆರೆ : ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಇಲಾಖಾ ಅಧಿಕಾರಿಗಳು ರೈತ ಸಮುದಾಯ ಹಾಗೂ ಸಾರ್ವಜನಿಕರ ಕುಂದು–ಕೊರತ ಬಗೆಹರಿಸಲು ಪ್ರಾಮಾಣಿಕವಾಗಿ ಕಾರ್ಯ ನಿರ್ವಹಿಸಬೇಕು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಖಡಕ್ ಸೂಚನೆ ನೀಡಿದರು.

ತಾಲ್ಲೂಕಿನ ಕಣಕಟ್ಟೆ ಗ್ರಾಮದಲ್ಲಿ ವೀರಭದ್ರ ಸ್ವಾಮಿ ಗ್ರಾಮಾಂತರ ಪ್ರೌಢಶಾಲಾ ಆವರಣದಲ್ಲಿ ಶನಿವಾರ ನಡೆದ ಕಣಕಟ್ಟೆ ಹೋಬಳಿ ಮಟ್ಟದ ಜನಸಂಪರ್ಕ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ರೈತ ಸಮುದಾಯ ಹಾಗೂ ಸಾರ್ವಜನಿಕರ ಸಮಸ್ಯೆಗಳನ್ನು ಬಗೆಹರಿಸಲು ಇಲಾಖಾ ಅಧಿಕಾರಿಗಳನ್ನು ಮನೆ ಬಾಗಿಲಿಗೆ ಬಂದು ಪರಿಹರಿಸುವ ನಿಟ್ಟಿನಲ್ಲಿ ಸರ್ಕಾರ ಜನಸಂಪರ್ಕ ಸಭೆಯನ್ನು ನಡೆಸಲಾಗುತ್ತಿದೆ. ಜಿಲ್ಲೆ, ತಾಲ್ಲೂಕು, ಹೋಬಳಿ ಮಟ್ಟಗಳಲ್ಲಿ ಈಗಾಗಲೇ ಸಭೆ ನಡೆಸಿ ಸಮಸ್ಯೆಗಳ ಅರ್ಜಿಗಳನ್ನು ಸ್ವೀಕರಿಸಿ, ಸೂಕ್ತ ಪರಿಹಾರ ಒದಗಿಸಲಾಗಿದೆ. ನಂತರ ಪಂಚಾಯಿತಿ ವ್ಯಾಪ್ತಿಯಲ್ಲಿ ಜನ ಸಂಪರ್ಕ ಸಭೆ ಹಮ್ಮಿಕೊಂಡು ಸಮಸ್ಯೆಗಳ ಬಗೆಹರಿಸಲಾಗುವುದು’ ಎಂದು ಹೇಳಿದರು.

‘ಚಿಕ್ಕೋಂಡಿಹಳ್ಳಿ, ಸಾತನಗೆರೆ, ದಿಬ್ಬೂರು, ಕಸುವನಹಳ್ಳಿ, ಸೋಮಶೆಟ್ಟಿಹಳ್ಳಿ ಹಾಗೂ ಮಾಗೇನಹಳ್ಳಿ ಗ್ರಾಮಗಳಲ್ಲಿ ಸುಮಾರು ₹6 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಲಾಗಿದೆ’ ಎಂದು ಹೇಳಿದರು.

ತಹಶೀಲ್ದಾರ್ ಎಂ.ಜಿ. ಸಂತೋಷ್ ಕುಮಾರ್, ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಧರ್ಮಶೇಖರ್, ತಾಲ್ಲೂಕು ಪಂಚಾಯಿತಿ ಇಒ ಗಂಗಣ್ಣ , ಬಿ.ಇ.ಒ ಮೋಹನ್ ಕುಮಾರ್, ಕಣಕಟ್ಟೆ ಗ್ರಾಮ ಪಂಚಾಯಿತಿ ಅಧ್ಯಕ್ಷೆ ಮೀನಾಕ್ಷಮ್ಮ, ಮಾಡಾಳು ಗ್ರಾ.ಪಂ. ಅಧ್ಯಕ್ಷ ಯೋಗೀಶ್, ಮುಖಂಡರಾದ ರಾಂಪುರ ಸುರೇಶ್ , ಹನುಮಪ್ಪ, ಕಣಕಟ್ಟೆ ಗ್ರಾ.ಪಂ ಮಾಜಿ ಅಧ್ಯಕ್ಷರಾದ ಸತೀಶ, ಮಲ್ಲೇಶಪ್ಪ, ರಂಗನಾಥ್, ಸದಸ್ಯರಾದ ಪ್ರಜ್ವಲ್, ಅತಿಖ್ , ಇಲಾಖೆಯ ಎಲ್ಲಾ ಅಧಿಕಾರಿಗಳು, ಗ್ರಾಮ ಪಂಚಾಯಿತಿ ಅಧ್ಯಕ್ಷರು, ಸದಸ್ಯರು ಹಾಗೂ ಸಾರ್ವಜನಿಕರು ರೈತರು ಹಾಜರಿದ್ದರು.

ಪೊಟೊ : ಅರಸೀಕೆರೆಯ ಕಣಕಟ್ಟೆ ಹೋಬಳಿ ಮಟ್ಟದ ಜನ ಸಂಪರ್ಕ ಸಭೆಯೂ ಕಣಕಟ್ಟೆ ಗ್ರಾಮದಲ್ಲಿ ಶಾಸಕ ಕೆ.ಎಂ.ಶಿವಲಿಂಗೇಗೌಡ ಉದ್ಘಾಟಿಸಿದರು. ತಹಶೀಲ್ದಾರ್ ಸಂತೋಷ್ಕುಮಾರ್ , ಕಣಕಟ್ಟೆ ಗ್ರಾಮ ಪಂಚಾಯತಿ ಅಧ್ಯಕ್ಷೆ ಮೀನಾಕ್ಷಮ್ಮ ಇದ್ದರು.

ಜನಸಂಪರ್ಕ ಸಭೆಯಲ್ಲಿ 200 ಅರ್ಜಿಗಳು ಸಲ್ಲಿಕೆ ಹೆದ್ದಾರಿಗಾಗಿ ಮನೆಕಳೆದುಕೊಂಡ 11 ಸಂತ್ರಸ್ತರಿಂದ ಮನವಿ ₹6 ಕೋಟಿ ವೆಚ್ಚದ ಅಭಿವೃದ್ಧಿ ಕಾಮಗಾರಿಗೆ ಭೂಮಿಪೂಜೆ

ಕ್ಷೇತ್ರದ 539 ಹಳ್ಳಿಗಳಲ್ಲಿ ವಿವಿಧ ಯೋಜನೆಗಳು ಹಾಗೂ ಅನುದಾನದ ಅಡಿಯಲ್ಲಿ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುವುದು. ತಾಲ್ಲೂಕಿನಲ್ಲಿ ಮಂಜೂರಾದ ಮನೆಗಳನ್ನು ಅರ್ಹ ಫಲಾನುಭವಿಗಳಿಗೆ ಹಂಚುವಲ್ಲಿ ಗಮನಹರಿಸಲಾಗುವುದು

- ಕೆ.ಎಂ.ಶಿವಲಿಂಗೇಗೌಡ ಶಾಸಕ

ಪರಿಹಾರಕ್ಕಾಗಿ ಶಾಸಕರಿಗೆ ಮನವಿ ಸಾಗುವಳಿ ಚೀಟಿ ನಿವೇಶನ ನೀರು ಸರಬರಾಜು ವಾಸದ ಮನೆ ವಿದ್ಯುತ್ ಸಂಪರ್ಕ ಅಂಗವಿಕಲತೆಯ ಸೌಲಭ್ಯ ಸೇರಿದಂತೆ ಹತ್ತು ಹಲವು ಸಮಸ್ಯೆಗಳು ಸಭೆಯಲ್ಲಿ ಚರ್ಚೆಯಾಯಿತು. ಇದಕ್ಕೆ ಶಾಸಕರು ಸಮಸ್ಯೆಗಳ ಬಗ್ಗೆ ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡು ಸಮಸ್ಯೆಗಳನ್ನು ಎಳೆ ಎಳೆಯಾಗಿ ಬಿಡಿಸಿ ಸಭೆಯಲ್ಲಿ ಸೂಕ್ತ ಪರಿಹಾರ ನೀಡಿದರು. ಒಟ್ಟಾರೆಯಾಗಿ ಸಭೆಯಲ್ಲಿ 200 ಅರ್ಜಿಗಳು ಸಲ್ಲಿಕೆಯಾದವು. ಕಣಕಟ್ಟೆ ಪಂಚಾಯಿತಿ ವ್ಯಾಪ್ತಿಯ ರಾಷ್ಟ್ರೀಯ ಹೆದ್ದಾರಿ ಅಭಿವೃದ್ಧಿಯಲ್ಲಿ 11 ಮನೆಗಳು ಕಳೆದುಕೊಂಡಿದ್ದು ಅವುಗಳ ಸೂಕ್ತ ಪರಿಹಾರಕ್ಕೆ ಸಭೆಯಲ್ಲಿ ಶಾಸಕರಿಗೆ ಮನವಿ ಸಲ್ಲಿಸಿದರು.

28 ಇಲಾಖೆಗಳಿಗೆ ಸಂಬಂಧಿಸಿದಂತೆ ಎಲ್ಲ ಅಧಿಕಾರಿಗಳು ಇಲ್ಲಿ ಖುದ್ದು ಹಾಜರಿರುತ್ತಾರೆ. ಅರ್ಜಿಗಳನ್ನು ಓದಿ ಸ್ಥಳದಲ್ಲಿಯೇ ಪರಿಹಾರ ಕಂಡುಕೊಳ್ಳಲಾಗುವುದು. ಸಾಧ್ಯವಾಗದಿದ್ದರೆ ಮುಂದಿನ ಸಭೆಯೊಳಗೆ ಅಧಿಕಾರಿಗಳಿಗೆ ಪರಿಹರಿಸಲು ಸೂಚಿಸಲಾಗುವುದು. ಕೇವಲ ವಯಕ್ತಿಕ ಸಮಸ್ಯೆಗಳಲ್ಲದೆ ಸಾರ್ವಜನಿಕ ಅಭಿವೃದ್ಧಿಗೆ ಸಂಬಂಧಿಸಿದಂತೆ ಯಾವುದೆ ಮನವಿಗಳಿದ್ದಲ್ಲಿ ಬಗೆಹರಿಸಲು ಈ ಸಭೆಯಲ್ಲಿ ಪ್ರಯತ್ನ ಪಡಲಾಗುವುದು ಎಂದು ಶಾಸಕ ಕೆ.ಎಂ.ಶಿವಲಿಂಗೇಗೌಡ ಹೇಳಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.