ಹಾಸನ: ಪ್ರತಿಯೊಂದು ಕುಟುಂಬದ ಆರೋಗ್ಯವನ್ನು ಉತ್ತಮವಾಗಿ ಇಡುವ ಮೂಲಕ ಸ್ವಸ್ಥ ಸಮಾಜ ನಿರ್ಮಾಣಕ್ಕೆ ಮುಂದಾಗುವಂತೆ ಜಿಲ್ಲಾಧಿಕಾರಿ ಕೆ.ಎಸ್. ಲತಾಕುಮಾರಿ, ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಕಚೇರಿಯ ಬಿ.ಸಿ. ರಾಯ್ ಸಭಾಂಗಣದಲ್ಲಿ ಸೋಮವಾರ ಗೃಹ ಆರೋಗ್ಯ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ನಿಸ್ವಾರ್ಥದಿಂದ ನಿರಂತರ ಮತ್ತು ಗುರುತರವಾಗಿ ಸೇವೆ ಮಾಡುತ್ತಿರುವುದಕ್ಕೆ ಅಭಿನಂದನೆಗಳು. ಇದೇ ರೀತಿ ಸಾರ್ವಜನಿಕರಿಗೆ ಸರ್ಕಾರದ ವಿವಿಧ ಯೋಜನೆಯಡಿ ಉಚಿತವಾಗಿ ಆರೋಗ್ಯ ಸೇವೆಗಳನ್ನು ಕಲ್ಪಿಸುವ ಮೂಲಕ ಸಮಾಜವನ್ನು ಆರೋಗ್ಯವಾಗಿ ಇರಿಸಲು ಬದ್ಧರಾಗಿ ಇರುವಂತೆ ತಿಳಿಸಿದರು.

ದೈಹಿಕ ಆರೋಗ್ಯದ ಜೊತೆಗೆ ಮಾನಸಿಕ ಆರೋಗ್ಯಕ್ಕೂ ಒತ್ತು ನೀಡಬೇಕು. ಈ ನಿಟ್ಟಿನಲ್ಲಿ ಜನರು ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಹೆಚ್ಚಿನ ಅರಿವು ಮೂಡಿಸಬೇಕು. ಕಾಲಕಾಲಕ್ಕೆ ಆರೋಗ್ಯ ತಪಾಸಣೆ ಮಾಡಿಸಿಕೊಳ್ಳುವಂತೆ ಜನರಿಗೆ ತಿಳಿವಳಿಕೆ ನೀಡಿ ಎಂದರು.

ಗೃಹ ಆರೋಗ್ಯ ಯೋಜನೆಯಡಿ ಮನೆ ಮನೆಗೆ ಭೇಟಿ ನೀಡಿ, ಪ್ರತಿ ಗ್ರಾಮೀಣ ಪ್ರದೇಶದಲ್ಲಿ 30 ವರ್ಷ ಮೇಲಿನವರು ಕಡ್ಡಾಯವಾಗಿ ಆರೋಗ್ಯ ತಪಾಸಣೆ ನಡೆಸಿ. ಈಗಾಗಲೇ ಗುರುತಿಸಿರುವ 14 ಅಸಾಂಕ್ರಾಮಿಕ ರೋಗಗಳನ್ನು ಪ್ರಾರಂಭಿಕ ಹಂತದಲ್ಲಿಯೇ ಪತ್ತೆ ಹಚ್ಚಿ ನಿರಂತರ ಚಿಕಿತ್ಸೆ ನೀಡುವ ಮೂಲಕ, ಮುಂದೆ ಉಂಟಾಗಬಹುದಾದ ಸಾವು ನೋವುಗಳ ಪ್ರಮಾಣ ತಡೆಯಲು ಅಗತ್ಯ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಮನೆಯಲ್ಲಿ ಒಬ್ಬರಿಗೆ ಆರೋಗ್ಯ ಸರಿ ಇಲ್ಲದಂತಾದರೆ ಸಂತೋಷ, ನೆಮ್ಮದಿ, ಶಾಂತಿಯುತ ಜೇವನ ನಡೆಸಲು ಸಾಧ್ಯವಿಲ್ಲ. ಈ ನಿಟ್ಟಿನಲ್ಲಿ ಸಾರ್ವಜನಿಕರು ಕುಟುಂಬದ ಆರೋಗ್ಯವನ್ನು ಉತ್ತಮವಾಗಿ ಕಾಪಾಡಿಕೊಳ್ಳಲು ಹೆಚ್ಚಿನ ಕಾಳಜಿ ವಹಿಸಬೇಕು. ಯಾವುದೇ ಊಹಾಪೋಹಗಳಿಗೆ ಕಿವಿಗೊಡದಂತೆ ಜಾಗೃತಿ ಮೂಡಿಸಬೇಕು ಎಂದು ನಿರ್ದೇಶನ ನೀಡಿದರು.

ಗೃಹ ಆರೋಗ್ಯ ಕಾರ್ಯಕ್ರಮದಡಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು, ಜಿಲ್ಲಾ ಶಸ್ತ್ರಚಿಕಿತ್ಸಕರು, ಜಿಲ್ಲಾ ಸರ್ವೇಕ್ಷಣಾಧಿಕಾರಿಗಳು ಎಲ್ಲ ರೀತಿಯ ಅಗತ್ಯ ಕ್ರಮಗಳನ್ನು ಕೈಗೊಂಡು ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ಅನಿಲ್, ಜಿಲ್ಲಾ ಸರ್ವೇಕ್ಷಣಾಧಿಕಾರಿ ಡಾ.ಚೇತನ್, ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ.ನಾಗಪ್ಪ, ವೈದ್ಯರು, ಅಧಿಕಾರಿಗಳು, ಸಿಬ್ಬಂದಿ ಉಪಸ್ಥಿತರಿದ್ದರು.

ಜಿಲ್ಲೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ 486 ಉಪಕೇಂದ್ರಗಳಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಲು ಅಗತ್ಯ ಕ್ರಮ ಕೈಗೊಳ್ಳಬೇಕು
ಕೆ.ಎಸ್. ಲತಾಕುಮಾರಿ ಜಿಲ್ಲಾಧಿಕಾರಿ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.