ಹಾಸನ: ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್ಗಳ ಸಂಚಾರ ಇಲ್ಲದೇ ಸಾರ್ವಜನಿಕರಿಗೆ ತೊಂದರೆ ಉಂಟಾಗುತ್ತಿದ್ದು, ನೌಕರರು ಮುಷ್ಕರ ಹಿಂಪಡೆದು ಬಸ್ ಸಂಚಾರ ಆರಂಭಿಸಬೇಕು ಎಂದು ಆಗ್ರಹಿಸಿ ಸಾಮಾಜಿಕ ಕಾರ್ಯಕರ್ತ ಕೆ.ಎಸ್. ತೀರ್ಥಪ್ಪ ಶುಕ್ರವಾರ ಜಿಲ್ಲಾಧಿಕಾರಿ ಕಚೇರಿ ಎದುರು ಧರಣಿ ನಡೆಸಿದರು.

ಮೂರು ದಿನಗಳಿಂದ ಸಾರಿಗೆ ನೌಕರರು ನಡೆಸುತ್ತಿರುವ ಮುಷ್ಕರದಿಂದ ಶಾಲೆ, ಕಾಲೇಜು ವಿದ್ಯಾರ್ಥಿಗಳು, ತುರ್ತು ಕಾರ್ಯಗಳಿಗೆ ಬೇರೆ ಜಿಲ್ಲೆಗೆ ತೆರಳಬೇಕಾದ ಸಾರ್ವಜನಿಕರಿಗೆ ತುಂಬಾ ತೊಂದರೆ ಉಂಟಾಗಿದೆ ಎಂದು ಆರೋಪಿಸಿದರು.

ಗ್ರಾಮೀಣ ಭಾಗದ ಜನರು ನಗರ ಪ್ರದೇಶಗಳಿಗೆ ಬರಲು ಸಾಧ್ಯವಾಗುತ್ತಿಲ್ಲ. ಅಲ್ಲದೇ ನಗರದಲ್ಲಿ ಖಾಸಗಿ ಬಸ್ಗಳ ಚಾಲಕರು ಹೆಚ್ಚಿನ ದರ ವಸೂಲು ಮಾಡುತ್ತಿದ್ದಾರೆ. ಬಸ್ ಸಮಸ್ಯೆ ನಿವಾರಿಸುವಂತೆ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್ಬುಕ್ ಮತ್ತು ಇನ್ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.