ಸೋಮವಾರ, ಫೆಬ್ರವರಿ 24, 2020
19 °C

‘ಪುಳಿಯೊಗರೆ’ ಶಿಕ್ಷಕ ವಿವಾದ: ಬಿಇಒ ಮದ್ಯಸ್ಥಿಕೆಯಲ್ಲಿ ಇತ್ಯರ್ಥ 

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಸಕಲೇಶಪುರ: ಪುಳಿಯೊಗರೆ ಶಬ್ದ ಹೇಳಿಸಿ ಸಾಮಾಜಿಕ ಜಾಲತಾಣದಲ್ಲಿ ವೈರಲ್‌ ಆಗಿದ್ದ ತಾಲ್ಲೂಕಿನ ಕಬ್ಬಿನಗದ್ದೆ ಸರ್ಕಾರಿ ಶಾಲೆಯ ಸಮಸ್ಯೆಯನ್ನು ಕ್ಷೇತ್ರ ಶಿಕ್ಷಣಾಧಿಕಾರಿ ಎಚ್‌.ಬಿ. ಶಿವಾನಂದ್‌ ಸೌಹಾರ್ದಯುತವಾಗಿ ಬಗೆಹರಿಸಿದ್ದಾರೆ.

ಪ್ರಕರಣದ ಶಿಕ್ಷಕ ನಿರ್ವಾಣಪ್ಪ ಅಮಾನತ್ತಿಗೆ ಕೆಎಟಿ ತಡೆಯಾಜ್ಞೆ ನೀಡಿದ್ದರಿಂದ ಅದೇ ಶಾಲೆಗೆ ಪುನಃ ಕರ್ತವ್ಯಕ್ಕೆ ಬರುವುದನ್ನು ಗ್ರಾಮಸ್ಥರು ವಿರೋಧಿಸಿ ಬಿಇಒ ಕಚೇರಿ ಮುಂದೆ ಧರಣಿ ನಡೆಸಿದ್ದರು. ಶಿಕ್ಷಕ ಪುನಃ ಕರ್ತವ್ಯಕ್ಕೆ ಬರುವುದನ್ನು ವಿರೋಧಿಸಿ 23 ವಿದ್ಯಾರ್ಥಿಗಳನ್ನು ಪೋಷಕರು ಶಾಲೆಗೆ ಕಳುಹಿಸದೆ ಗ್ರಾಮದ ಮನೆಯೊಂದರಲ್ಲಿ ಪೋಷಕರೇ ಪಾಠ ಮಾಡಿ ಬಿಸಿಯೂಟ ನೀಡುತ್ತಿದ್ದರು. ಸಮಸ್ಯೆ ಉಲ್ಬಣಿಸುವ ಬೆಳವಣಿಗೆ ಗಮನಿಸಿ ಬಿಇಒ ಬುಧವಾರ ಗ್ರಾಮಕ್ಕೆ ಭೇಟಿ ನೀಡಿ ಪೋಷಕರು, ಕರ್ನಾಟಕ ರಕ್ಷಣಾ ವೇದಿಕೆ ಪ್ರವೀಣ್‌ ಶೆಟ್ಟಿ ಬಣದ ಕಾರ್ಯಕರ್ತರು ಹಾಗೂ ಶಿಕ್ಷಕರೊಂದಿಗೆ ಮಾತುಕತೆ ನಡೆಸಿ ಎಲ್ಲಾ ಮಕ್ಕಳು ಶಾಲೆಗೆ ಬರುವಂತೆ ಮನವೊಲಿಸಿದ್ದಾರೆ.

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಪ್ರತಿಕ್ರಿಯಿಸಿ (+)