ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಪುರಾತನ ಕಲೆಗಳ ಉಳಿವಿಗೆ ಪ್ರಯತ್ನಿಸಿ: ಪಶುವೈದ್ಯಕೀಯ ಕುಲಪತಿ

ಅಂತರ ಕಾಲೇಜು ಯುವಜನೋತ್ಸವ ‘ಗೋಕುಲೋತ್ಸವ’ಕ್ಕೆ ಚಾಲನೆ
Last Updated 2 ನವೆಂಬರ್ 2019, 13:42 IST
ಅಕ್ಷರ ಗಾತ್ರ

ಹಾಸನ: ಜಾನಪದ ಕಲೆಗಳನ್ನು ಉಳಿಸಿ, ಬೆಳೆಸುವುದು ಯುವ ಜನರ ಕರ್ತವ್ಯವಾಗಿದೆ ಎಂದು ಪಶುವೈದ್ಯಕೀಯ ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದ ಕುಲಪತಿ ಎಚ್.ಡಿ. ನಾರಾಯಣಸ್ವಾಮಿ ಅಭಿಪ್ರಾಯಪಟ್ಟರು.

ಪಶು ವೈದ್ಯಕೀಯ ಮಹಾವಿದ್ಯಾಲಯ ವತಿಯಿಂದ ಆಯೋಜಿಸಿದ್ದ ಮೂರು ದಿನಗಳ ಅಂತರ ಕಾಲೇಜು ಯುವಜನೋತ್ಸವ “ಗೋಕುಲೋತ್ಸವ”ವನ್ನು ಶನಿವಾರ ನಗಾರಿ ಬಾರಿಸುವ ಮೂಲಕ ಚಾಲನೆ ನೀಡಿ ಮಾತನಾಡಿದರು.

ಕಲಿಕೆಯಲ್ಲಿ ಮುಳುಗಿರುವ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಪ್ರತಿಭೆ ಪ್ರದರ್ಶಿಸಲು ಹಾಗೂ ಮನರಂಜನೆ ಉದ್ದೇಶದಿಂದ ಈ ಕಾರ್ಯಕ್ರಮ ಅಯೋಜಿಸಲಾಗಿದೆ. ಗ್ರಾಮೀಣ ಭಾಗದ ಸಾಂಸ್ಕೃತಿಕ ಚಟುವಟಿಕೆ ಬಿಂಬಿಸಲು ಉತ್ತಮ ವೇದಿಕೆ ಕಲ್ಪಿಸಿಕೊಟ್ಟಿದೆ ಎಂದು ತಿಳಿಸಿದರು.

ಹಿರಿಯ ಸಾಹಿತಿ ಗೊ. ರು. ಚನ್ನಬಸಪ್ಪ ಮಾತನಾಡಿ, ಸಭ್ಯ ನಾಗರಿಕರನ್ನು ಸಂವಿಧಾನ ಬಯಸುತ್ತದೆ. ಈ ನಿಟ್ಟಿನಲ್ಲಿ ಯುವಜನರು ಉತ್ತಮ ಮಾನವೀಯ ಮೌಲ್ಯ ಅಳವಡಿಸಿಕೊಳ್ಳುವ ಮೂಲಕ ಸಮಾಜದ ಒಳಿತಿಗಾಗಿ ಶ್ರಮಿಸಬೇಕು ಎಂದರು.

ಯುವಜನರು ದೇಶದ ಹಾಗೂ ಜನ ಜೀವನದ ನಾಡಿಗಳಾಗಬೇಕು. ಗ್ರಾಮೀಣ ಪ್ರದೇಶದ ಜನರು ಪ್ರಾಣಿಗಳೊಡನೆ ಅವಿನಾಭಾವ ಸಂಬಂಧ ಹೊಂದಿದ್ದು, ಅವುಗಳನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ಇಲಾಖೆ ಕ್ರಮವಹಿಸಬೇಕು ಎಂದು ನುಡಿದರು.

ಯುವ ಪೀಳಿಗೆ ದೇಶದ ಭವಿಷ್ಯದ ಬೆಳಕಾಗಿದ್ದು, ಆತ್ಮ ವಿಶ್ವಾಸ ಕಳೆದುಕೊಳ್ಳಬಾರದು. ಗ್ರಾಮೀಣ ಪ್ರದೇಶದ ಸಂಸ್ಕೃತಿಗಳನ್ನು ಪ್ರೋತ್ಸಾಹಿಸುವ ಜೊತೆಗೆ ರೈತ ಕುಟುಂಬದ ಏಳಿಗೆಗಾಗಿ ಶ್ರಮಿಸಬೇಕು. ಆ ಮೂಲಕ ಸಮಾಜಕ್ಕೆ ಉತ್ತಮ ಕೊಡುಗೆ ನೀಡಬೇಕು ಎಂದರು.

ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಎಂ.ಸಿ. ಶಿವಕುಮಾರ್ ಮಾತನಾಡಿ, ರಾಜ್ಯದ 8 ಪಶುವೈದ್ಯಕೀಯ ಕಾಲೇಜಿನ ಸುಮಾರು 250 ವಿದ್ಯಾರ್ಥಿಗಳು ಭಾಗವಹಿಸಿದ್ದು, ಸೋಲು–ಗೆಲುವು ಸಮಾನವಾಗಿ ಸ್ವೀಕರಿಸಬೇಕು. ಹಾಡುಗಾರಿಕೆ, ಭಾಷಣ, ರಸಪ್ರಶ್ನೆ, ಜಾನಪದ ನೃತ್ಯ, ಕಿರುನಾಟಕ ಸೇರಿ ಸುಮಾರು 18 ವಿಭಾಗಗಳಲ್ಲಿ ಪ್ರತಿಭೆ ಪ್ರದರ್ಶಿಸಲಿದ್ದಾರೆ ಎಂದು ವಿವರಿಸಿದರು.

ವಿಶ್ವವಿದ್ಯಾಲಯದ ಕುಲಸಚಿವ ಕೆ.ಸಿ. ವೀರಣ್ಣ, ಬೆಂಗಳೂರಿನ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ಎಂ.ಎಸ್. ನಾರಾಯಣ್, ಬೀದರ್ ನ ಪಶುವೈದ್ಯಕೀಯ ಮಹಾವಿದ್ಯಾಲಯದ ಡೀನ್ ದಿಲೀಪ್ ಕುಮಾರ್, ಸಂಘಟನಾ ಕಾರ್ಯದರ್ಶಿ ಯಶವಂತ್ ಕುಮಾರ್, ಪಶುವೈದ್ಯಕೀಯ ಮಹಾವಿದ್ಯಾಲಯದ ಸಂಘಟನಾ ಸಹ ಕಾರ್ಯದರ್ಶಿ ಎಂ.ಸಿ ಶಿವಕುಮಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT