ಮಂಗಳವಾರ, ಸೆಪ್ಟೆಂಬರ್ 21, 2021
21 °C

ಮುಂದುವರೆದ ಮಳೆ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಹೆತ್ತೂರು: ಹೋಬಳಿ ವ್ಯಾಪ್ತಿಯಲ್ಲಿ ಮಳೆ ಬಿರುಸುಗೊಂಡಿದ್ದು, ಸಾಧಾರಣವಾದರೂ ನಿರಂತರವಾಗಿದೆ.

ನಿರಂತರ ಮಳೆಯಿಂದ ಚಳಿ ವಾತಾವರಣ ಸೃಷ್ಟಿಯಾಗಿದ್ದು ಜನರು ಸ್ವೆಟರ್, ಟೋಪಿ ಹಾಕಿ ಓಡಾಡುತ್ತಿದ್ದಾರೆ. ನದಿ, ಹೊಳೆಗಳಲ್ಲಿ ನೀರಿನ ಹರಿವು ಹೆಚ್ಚಾಗಿದೆ. ಕಳೆದ ಒಂದು ತಿಂಗಳಿನಿಂದ ರೈತರು ಭತ್ತದ ಕೃಷಿ ಕೆಲಸದಲ್ಲಿ ತೊಡಗಿಸಿಕೊಂಡಿದ್ದಾರೆ. ಭತ್ತದ ನಾಟಿಗಾಗಿ ಗದ್ದೆಗಳನ್ನು ಸಿದ್ಧವಾಗುತ್ತಿವೆ. ಸಮೀಪದ ಐಗೂರು, ಯಡಕೇರಿ,ಪಾಲಹಳ್ಳಿ ಹೊಳೆಯಲ್ಲಿ ನೀರಿನ ಪ್ರಮಾಣ ಏರಿಕೆಯಾಗುತ್ತಿದೆ. ಪಶ್ಚಿಮ ಘಟ್ಟ ವ್ಯಾಪ್ತಿಯಲ್ಲಿ ಮಳೆ ನಿರಂತರವಾಗಿ ಸುರಿಯುತ್ತಿದೆ.

ಯಳಸೂರು, ಹೆತ್ತೂರು ವ್ಯಾಪ್ತಿಯಲ್ಲಿ ಭತ್ತ ನಾಟಿ ಕಾರ್ಯ ಆರಂಭಗೊಂಡಿದೆ.

ಕಳೆದ 24 ಗಂಟೆಯಲ್ಲಿ ಹೋಬಳಿಯ ವನಗೂರು ಪಂಚಾಯಿತಿ ವ್ಯಾಪ್ತಿಯ ಪಟ್ಲಾ, ಮಾಲ್ಮನೆ ಗ್ರಾಮದಲ್ಲಿ 9.75 ಸೆಂ.ಮೀ ಮಳೆಯಾಗಿದೆ ಎಂದು ಹೇಳಲಾಗಿದೆ..

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.