ಭಾನುವಾರ, ಜನವರಿ 17, 2021
28 °C
ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೂಚನೆ

ರೈತರನ್ನು ಬೆಳೆ ವಿಮೆ ವ್ಯಾಪ್ತಿಗೆ ಒಳಪಡಿಸಿ

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ರೋಹಿಣಿ ಸಿಂಧೂರಿ

ಹಾಸನ : ರೈತರ ಅನುಕೂಲಕ್ಕಾಗಿ ಸರ್ಕಾರ ರೂಪಿಸಿರುವ ಯೋಜನೆಗಳು ಎಲ್ಲರಿಗೂ ಸಮರ್ಪಕವಾಗಿ ತಲುಪಬೇಕು ಎಂದು ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಹೇಳಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣಧಲ್ಲಿ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ಭೀಮಾ ಯೋಜನೆಯ ಅನುಷ್ಠಾನ ಕುರಿತು ಅಧಿಕಾರಿಗಳ ಸಭೆ ನಡೆಸಿ ಮಾತನಾಡಿದರು.

ಪ್ರಕೃತಿ ವಿಕೋಪದಿಂದ, ಅತಿವೃಷ್ಟಿ, ಅನಾವೃಷ್ಟಿಯಿಂದ ಉಂಟಾಗುವ ಬೆಳೆ ಹಾನಿಗೆ ಎಲ್ಲಾ ರೈತರಿಗೂ ಪರಿಹಾರ ದೊರಕಿಸುವ ನಿಟ್ಟಿನಲ್ಲಿ ಎಲ್ಲಾ ರೈತರನ್ನು ಫಸಲ್ ಭೀಮಾ ಯೋಜನೆ ವ್ಯಾಪ್ತಿಗೆ ತರುವಂತೆ ಕೃಷಿ ಮತ್ತು ತೋಟಗಾರಿಕೆ ಇಲಾಖೆ ಅಧಿಕಾರಿಗಳಿಗೆ ಸೂಚನೆ ನೀಡಿದರು.

ಭತ್ತ (ಮಳೆಯಾಶ್ರಿತ), ಮುಸುಕಿನ ಜೋಳ (ನೀರಾವರಿ), ಮುಸುಕಿನ ಜೋಳ (ಮಳೆ ಆಶ್ರಿತ), ಸೂರ್ಯಕಾಂತಿ (ಮಳೆಯಾಶ್ರಿತ) ಹಾಗೂ ಟೊಮೆಟೊ ಬೆಳೆಗಳಿಗೆ ವಿಮೆ ಪಾವತಿಸಲು ಜುಲೈ 31 ಕೊನೆ ದಿನವಾಗಿದೆ. ಹಾಗಾಗಿ ಎಲ್ಲ ರೈತರಿಗೆ ಈ ಬಗ್ಗೆ ಅರಿವು ಮೂಡಿಸಿ ವಿಮೆ ಕಂತು ಪಾವತಿಸುವಂತೆ ನೋಡಿಕೊಳ್ಳಿ ಎಂದು ಹೇಳಿದರು.

ಭತ್ತ (ನೀರಾವರಿ), ರಾಗಿ (ಮಳೆ ಆಶ್ರಿತ ), ರಾಗಿ ನೀರಾವರಿ ಹುರುಳಿ (ಮಳೆ ಆಶ್ರಿತ) ಇವುಗಳಿಗೆ ವಿಮಾ ಕಂತು ಪಾವತಿಸಲು ಆ.14 ಕಡೆ ದಿನವಾಗಿದ್ದು, ರೈತರು ಈ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಬಗ್ಗೆ ಮಾಧ್ಯಮಗಳ ಮೂಲಕ ಪ್ರಚಾರ ನೀಡುವಂತೆ ಜಂಟಿ ಕೃಷಿ ನಿರ್ದೇಶಕ ಮಧುಸೂದನ್ ಮತ್ತು ತೋಟಗಾರಿಕೆ ಇಲಾಖೆ ಉಪ ನಿರ್ದೇಶಕ ಸಂಜಯ್ ಗೆ ನಿರ್ದೇಶನ ನೀಡಿದರು.

ವಿಮಾ ಕಂಪನಿಗಳು ಕೂಡ ರೈತರಿಗೆ ಬೆಳೆ ವಿಮೆ ಬಗ್ಗೆ ಅರಿವು ಮೂಡಿಸಬೇಕು ಜತೆಗೆ ಪರಿಹಾರ ಹಣವನ್ನು ಸಕಾಲಕ್ಕೆ ದೊರಕಿಸಿ ಕೊಡಬೇಕು ಎಂದರು.
ಪ್ರೋಬೆಷನರಿ ಐ.ಎ.ಎಸ್ ಅಧಿಕಾರಿ ಪ್ರಿಯಾಂಕ, ಉಪವಿಭಾಗಾಧಿಕಾರಿ ಎಚ್.ಎಲ್. ನಾಗರಾಜ್, ಡಿ.ಡಿ.ಎಲ್.ಆರ್. ಕೃಷ್ಣಕುಮಾರ್ ಮತ್ತು ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು