ಶುಕ್ರವಾರ, 13 ಸೆಪ್ಟೆಂಬರ್ 2024
×
ADVERTISEMENT
ಈ ಕ್ಷಣ :
ADVERTISEMENT

ಸಿದ್ದರಾಮಯ್ಯ ದುರ್ಬಲಗೊಳಿಸಲು ಕುತಂತ್ರ: ಆರೋಪ

Published : 3 ಆಗಸ್ಟ್ 2024, 14:01 IST
Last Updated : 3 ಆಗಸ್ಟ್ 2024, 14:01 IST
ಫಾಲೋ ಮಾಡಿ
Comments

ಹಾಸನ: ಹಿಂದುಳಿದ ವರ್ಗದ ನಾಯಕರಾದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ದುರ್ಬಲಗೊಳಿಸಲು, ಪ್ರತಿಪಕ್ಷಗಳು ಕುತಂತ್ರದಿಂದ ರಾಜ್ಯಪಾಲರ ಕಚೇರಿಯನ್ನು ದುರುಪಯೋಗ ಮಾಡಿಕೊಳ್ಳುತ್ತಿವೆ ಎಂದು ಹಾಲುಮತ ಮಹಾಸಭಾ ಜಿಲ್ಲಾ ಘಟಕದ ಅಧ್ಯಕ್ಷ ಬೀರೇಗೌಡ ಆರೋಪಿಸಿದರು.

ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಾಲ್ಕು ದಶಕಗಳಿಂದ ರಾಜಕೀಯ ಜೀವನದಲ್ಲಿ ಸಿದ್ದರಾಮಯ್ಯ ಒಂದೇ ಒಂದು ಕಪ್ಪು ಚುಕ್ಕೆ ಇಲ್ಲದೆ   ಜನರು ಮೆಚ್ಚುವಂತೆ ಕೆಲಸ ಮಾಡಿದ್ದಾರೆ. ಇದೀಗ ಸಂಚುಮಾಡಿ, ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸುವ ಪ್ರಯತ್ನವನ್ನು ಬಲವಾಗಿ ಖಂಡಿಸುವುದಾಗಿ ಹೇಳಿದರು.

ತಮ್ಮ ಮೇಲೆ ಬಂದ ಆರೋಪಕ್ಕೆ ಸ್ವತಃ ಸಿದ್ದರಾಮಯ್ಯ ಅವರೇ ತನಿಖಾ ಆಯೋಗ ರಚಿಸಿ, ತನಿಖೆಗೆ ಒಳಪಟ್ಟ ಏಕೈಕ ಮುಖ್ಯಮಂತ್ರಿ ಆಗಿದ್ದಾರೆ. ಬಿಜೆಪಿ, ಜೆಡಿಎಸ್ ನಾಯಕರು ಅಸಹನೆಯಿಂದ ಪಿತೂರಿ ಮಾಡುತ್ತಿದ್ದು, ಸಿದ್ದರಾಮಯ್ಯ ಹಾಗೂ ಕಾಂಗ್ರೆಸ್‌ ಸರ್ಕಾರವನ್ನು ದುರ್ಬಲಗೊಳಿಸಲು ಹೋದರೆ ಹಾಲುಮತ ಮಹಾಸಭಾ, ಕುರುಬ ಸಮುದಾಯ ಹಾಗೂ ದಲಿತ, ಅಲ್ಪಸಂಖ್ಯಾತರ ಸಂಘಟನೆಗಳು ಸೇರಿ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಎಚ್ಚರಿಸಿದರು. ಬಿ.ಕೆ.ಪುಟ್ಟರಾಜು, ಸತೀಶ್ ಬಾಬು, ಕೃಷ್ಣೇಗೌಡ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT