ಭಾನುವಾರ, ಜೂಲೈ 12, 2020
29 °C

ರಾಜ್ಯದಲ್ಲಿ ಪ್ಲಾಸ್ಮಾ ಥೆರಪಿ ಮುಂದುವರಿಕೆ: ಶ್ರೀರಾಮುಲು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

ಹಾಸನ: ಕೋವಿಡ್ 19 ರೋಗದಿಂದ ಗುಣಮುಖರಾದವರ ದೇಹದಿಂದ ರೋಗನಿರೋಧಕ ಕಣಗಳನ್ನು ತೆಗೆದು, ಮತ್ತೊಬ್ಬ ರೋಗಿಯ ದೇಹಕ್ಕೆ ಸೇರಿಸುವ ‘ಪ್ಲಾಸ್ಮಾ ಥೆರಪಿ’ ಪ್ರಯೋಗ ರಾಜ್ಯದಲ್ಲಿ ಯಶಸ್ವಿಯಾಗಿರುವುದರಿಂದ  ಅದನ್ನು ಮುಂದುವರೆಸಲಾಗುವುದು ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ.ಶ್ರೀರಾಮುಲು ಹೇಳಿದರು.

ನಗರದಲ್ಲಿ ಶುಕ್ರವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, ಪ್ಲಾಸ್ಮಾ ಥೆರಪಿಯಿಂದ ಕೋವಿಡ್‌ ರೋಗಿಗಳು ಗುಣಮುಖರಾಗುತ್ತಿದ್ದಾರೆ. ಇದರ ಸಾಧಕ, ಬಾಧಕ ನೋಡಿಕೊಂಡು ಜಿಲ್ಲೆಗಳಿಗೂ ವಿಸ್ತರಿಸುವ ಬಗ್ಗೆ ಪರಿಶೀಲನೆ ನಡೆಸಲಾಗುವುದು. ತಜ್ಞರ ಸಲಹೆಯಂತೆ ಕೋವಿಡ್‌ ಪರೀಕ್ಷೆಯನ್ನು ಸರಳವಾಗಿ ನಡೆಸಲು ಇನ್ನು ಮುಂದೆ ಆಂಬುಲೆನ್ಸ್‌ನಲ್ಲಿ ವೈದ್ಯಕೀಯ ಸಿಬ್ಬಂದಿ ಶಂಕಿತರ ಮನೆಗೆ ತೆರಳಿ ಗಂಟಲು ದ್ರವ ಮಾದರಿ ಸಂಗ್ರಹಿಸಿಕೊಂಡು ಬರುವ ವ್ಯವಸ್ಥೆ ಮಾಡಲಾಗುವುದು ಎಂದು ತಿಳಿಸಿದರು.

ರಾಜ್ಯದ ರಕ್ತನಿಧಿ ಕೇಂದ್ರಗಳಲ್ಲಿ ರಕ್ತ ಖಾಲಿ ಆಗಿರುವ ಕಾರಣ ರಕ್ತ ಸಂಗ್ರಹಿಸುವಂತೆ ಎಲ್ಲ ಜಿಲ್ಲಾಧಿಕಾರಿಗೂ ಸೂಚನೆ ನೀಡಲಾಗಿದೆ. ದಾನಿಗಳಿಗೆ ತೊಂದರೆ ಆಗಬಾರದೆಂಬ ಉದ್ದೇಶದಿಂದ ಟೋಲ್‌ ಫ್ರೀ ನಂಬರ್‌ಗೆ ಅವರು ಕರೆ ಮಾಡಿದರೆ, ವಾಹನದಲ್ಲಿ ಕರೆತಂದು ವಾಪಸ್‌ ಬಿಡುವ ವ್ಯವಸ್ಥೆಯನ್ನು ಜಿಲ್ಲಾಡಳಿತವೇ ಮಾಡಲಿದೆ ಎಂದರು.

 

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನು ಲೈಕ್ ಮಾಡಿ, ಪ್ರಮುಖ ಸುದ್ದಿಗಳ ಅಪ್‌ಡೇಟ್ಸ್ ಪಡೆಯಿರಿ.

ಪ್ರಜಾವಾಣಿಯನ್ನು ಟ್ವಿಟರ್‌ನಲ್ಲಿ ಇಲ್ಲಿ ಫಾಲೋ ಮಾಡಿ.

ಟೆಲಿಗ್ರಾಂ ಮೂಲಕ ನಮ್ಮ ಸುದ್ದಿಗಳ ಅಪ್‌ಡೇಟ್ಸ್ ಪಡೆಯಲು ಇಲ್ಲಿ ಕ್ಲಿಕ್ ಮಾಡಿ.

ಈ ವಿಭಾಗದಿಂದ ಇನ್ನಷ್ಟು