ಹಾಸನ: ಗೋಕಾಕ ಶಾಸಕ ರಮೇಶ್ ಜಾರಕಿಹೊಳಿ ಅವರಿಗೆ ಸಚಿವ ಸ್ಥಾನ ನೀಡುವ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ ಎಂದು ಕಂದಾಯ ಸಚಿವ ಆರ್.ಅಶೋಕ್ ಹೇಳಿದರು.
ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲು ರಮೇಶ್ ಪ್ರಮುಖ ಪಾತ್ರ ವಹಿಸಿದ್ದಾರೆ.ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡುವುದಿಲ್ಲ, ಪಕ್ಷದಲ್ಲಿಯೇ ಇರುತ್ತಾರೆ ಎಂದುಬುಧವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಮುಂದಿ ಎರಡು ವರ್ಷ ಬಿ.ಎಸ್.ಯಡಿಯೂರಪ್ಪ ಅವರೇ ಮುಖ್ಯಮಂತ್ರಿ ಆಗಿರುತ್ತಾರೆ. ಈಗಾಗಲೇ ಪಕ್ಷದ ಉಸ್ತುವಾರಿ ಅರುಣ್ ಸಿಂಗ್ ಈ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ. ಪಕ್ಷ ವಿರೋಧಿಗಳ ಬಗ್ಗೆ ಹೈಕಮಾಂಡ್‌ಗೆ ದೂರು ನೀಡಲಾಗುವುದು. ಈ ಬಾರಿ ಶಿಸ್ತು ಕ್ರಮ ಕೈಗೊಳ್ಳುವುದು ಖಚಿತ. ಶಾಸಕ ಅರವಿಂದ ಬೆಲ್ಲದ್ ಅವರು ಸಾರ್ವಜನಿಕವಾಗಿ ಹೇಳಿಕೆನೀಡುವುದನ್ನು ನಿಲ್ಲಿಸಿದ್ದಾರೆ ಎಂದರು.
ಮೂರನೇ ಅಲೆ ತಡೆಗೆ ಸಿದ್ಧತೆ ಕೈಗೊಂಡಿದ್ದು, ವರ್ಷಾಂತ್ಯಕ್ಕೆ ರಾಜ್ಯದ ಪ್ರತಿಯೊಬ್ಬರಿಗೂಎರಡು ಡೋಸ್ ಲಸಿಕೆ ನೀಡುವ ಕಾರ್ಯ ಪೂರ್ಣಗೊಳಿಸಲಾಗುವುದು. ಜುಲೈ 5 ರ ಬಳಿಕಲಾಕ್‌ಡೌನ್ ಮತ್ತಷ್ಟು ಸಡಿಲಿಕೆ ಮಾಡಿ, ಕೃಷಿ ಹಾಗೂ ವ್ಯಾಪಾರಕ್ಕೆ ಅವಕಾಶ
ನೀಡಲಾಗುವುದು ಎಂದರು.
ಕಾಂಗ್ರೆಸ್ ಒಡೆದ ಮನೆಯಾಗಿದೆ. 20 ವರ್ಷ ಕಳೆದರೂ ಕೇಂದ್ರ ಮತ್ತು ರಾಜ್ಯದಲ್ಲಿ ಬಿಜೆಪಿಸರ್ಕಾರವೇ ಅಧಿಕಾರಕ್ಕೆ ಬರಲಿದೆ. ಕೇಂದ್ರದಲ್ಲಿ ವಿರೋಧ ಪಕ್ಷದ ನಾಯಕನಾಗಲುಯೋಗ್ಯತೆ ಇಲ್ಲದ ಸ್ಥಿತಿಯಲ್ಲಿದೆ. ಸಮ್ಮಿಶ್ರ ಸರ್ಕಾರ ಬೀಳಿಸಲು ಸಿದ್ಧರಾಮಯ್ಯ ಅವರೇ ಕಾರಣಎಂದು ಜೆಡಿಎಸ್ ನಾಯಕ ಎಚ್.ಡಿ.ಕುಮಾರಸ್ವಾಮಿ ಟೀಕಿಸುತ್ತಿದ್ದಾರೆ. ಈ ಎರಡೂ ಪಕ್ಷಗಳಜಗಳವನ್ನು ಬಿಜೆಪಿ ನೋಡುತ್ತಿದೆ ಎಂದು ಹೇಳಿದರು.
ಹಿರಿಯ ನಾಯಕ ಗುಲಾಂ ನಬಿ ಅಜಾದ್ ಸೇರಿದಂತೆ ಹಲವು ಬಂಡಾಯ ಎದ್ದಿದ್ದಾರೆ. ಕಾಂಗ್ರೆಸ್‌ಗೆ ಭವಿಷ್ಯವೇ ಇಲ್ಲ. ಖಾಲಿ ಇಲ್ಲದ ಕುರ್ಚಿಗೆ ಟವಲ್ ಹಾಕುತ್ತಿದ್ದಾರೆ. ಈಗಾಗಲೇ ದಲಿತ, ಲಿಂಗಾಯತ, ಕುರುಬ, ಒಕ್ಕಲಿಗ, ಲಿಂಗಾಯತ ಸಿ.ಎಂ ಎಂಬ ಚರ್ಚೆ ನಡೆಯುತ್ತಿದೆ.ಸಂವಿಧಾನಕ್ಕೆ ತಿದ್ದುಪಡಿ ತಂದು ಒಂದು ರಾಜ್ಯದಲ್ಲಿ ನಾಲ್ಕು ಸಿ.ಎಂ ಆಗಲು ಅವಕಾಶನೀಡಿದರೆ, ಕಾಂಗ್ರೆಸ್‌ನವರು ಸಿ.ಎಂ ಆಗಬಹುದೇನೋ ಎಂದು ವ್ಯಂಗ್ಯವಾಡಿದರು.
ಗೋಷ್ಠಿಯಲ್ಲಿ ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ, ಶಾಸಕ ಪ್ರೀತಂ ಜೆ.ಗೌಡ,ಮುಖಂಡರಾದ ನವಿಲೆ ಅಣ್ಣಪ್ಪ, ಭುವನಾಕ್ಷ ಇದ್ದರು.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.