ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರಣಘಟ್ಟ ಯೋಜನೆಗೆ 30ಕ್ಕೆ ಚಾಲನೆ: ಸಚಿವ ಕೆ.ಗೋಪಾಲಯ್ಯ

Last Updated 28 ಅಕ್ಟೋಬರ್ 2021, 3:15 IST
ಅಕ್ಷರ ಗಾತ್ರ

ಹಳೇಬೀಡು: ‘ರಣಘಟ್ಟ ಯೋಜನೆಯ ಕಾಮಗಾರಿಗೆ ಸರ್ಕಾರಿ ಪದವಿಪೂರ್ವ ಕಾಲೇಜು ಮೈದಾನದಲ್ಲಿ ಅ. 30ರಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಶಂಕುಸ್ಥಾಪನೆ ನೆರವೇರಿಸಲಿದ್ದಾರೆ’ ಎಂದು ಉಸ್ತುವಾರಿ ಸಚಿವ ಕೆ.ಗೋಪಾಲಯ್ಯ ತಿಳಿಸಿದರು.

ಅಧಿಕಾರಿಗಳೊಂದಿಗೆ ಸ್ಥಳ ಪರಿಶೀಲನೆ ನಡೆಸಿ ಬಂದೋಬಸ್ತ್ ವ್ಯವಸ್ಥೆ ಪರಿಶೀಲಿಸಿದ ಬಳಿಕ ಮಾತನಾಡಿದ ಅವರು, ‘ಯಗಚಿ ನದಿಯ ರಣಘಟ್ಟ ಪಿಕಪ್‌ನಿಂದ ಹೊಯ್ಸಳರ ಕಾಲದ ನಾಲೆ ಮುಖಾಂತರ ದ್ವಾರಸಮುದ್ರ ಕೆರೆ ಹಾಗೂ ಇತರ 6 ಕೆರೆಗಳಿಗೆ ನೀರು ತುಂಬಿಸುವ ಯೋಜನೆ ಮಹತ್ವದ್ದಾಗಿದೆ. ಪುಷ್ಪಗಿರಿಯ ಸೋಮಶೇಖರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯ ವಹಿಸಲಿದ್ದು,ರಾಜ್ಯಸಭಾ ಸದಸ್ಯ ಎಚ್.ಡಿ.ದೇವೇಗೌಡ, ಮಾಜಿ ಮುಖ್ಯಮಂತ್ರಿ ಗಳಾದ ಬಿ.ಎಸ್. ಯಡಿಯೂರಪ್ಪ, ಎಚ್.ಡಿ. ಕುಮಾರಸ್ವಾಮಿ, ಸಚಿವರಾದ ಗೋವಿಂದ ಕಾರಜೋಳ, ಜೆ.ಸಿ. ಮಾಧುಸ್ವಾಮಿ, ಶಾಸಕ ಕೆ.ಎಸ್.ಲಿಂಗೇಶ್ಭಾಗವಹಿಸುವರು’ ಎಂದರು.

‘ಎರಡು ದಶಕದ ಹಳೇಬೀಡು ಭಾಗದ ಜನತೆಯ ಶಾಶ್ವತ ನೀರಾವರಿ ಯೋಜನೆಯ ಕನಸು ನನಸಾಗು ತ್ತಿರುವುದರಿಂದ ಸಾಕಷ್ಟು ಮಂದಿ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಸಾರ್ವಜನಿಕರಿಗೆ ಆಸನವ್ಯವಸ್ಥೆ, ಕುಡಿಯುವ ನೀರು ಹಾಗೂ ಉಪಾಹಾರದ ವ್ಯವಸ್ಥೆ ಮಾಡಲು ಅಧಿಕಾರಿಗಳಿಗೆ ಸೂಚಿಸಲಾಗಿದೆ’ ಎಂದು ಗೋಪಾಲಯ್ಯ ತಿಳಿಸಿದರು.

‘ಕಾಮಗಾರಿಯಲ್ಲಿ ಗುಣಮಟ್ಟ ಕಾಯ್ದುಕೊಳ್ಳುವಂತೆಎಂಜಿನಿಯರ್‌ಗಳು ಹಾಗೂ ಬಿಎಸ್ಆರ್ ಕಂಪನಿಗೆ ಸೂಚಿಸ ಲಾಗಿದೆ. ಮಳೆಗಾಲದ ಪರಿಸ್ಥಿತಿಯನ್ನು ನೋಡಿಕೊಂಡು ಕಾಮಗಾರಿ ನಡೆಸಲಾಗುತ್ತದೆ. ಆದಷ್ಟು ಬೇಗ ಹೊಯ್ಸಳರ ಕಾಲದ ನಾಲೆಯಲ್ಲಿ ನೀರು ಹರಿಸಲಾಗುವುದು’ ಎಂದು ತಿಳಿಸಿದರು.

ಶಾಸಕ ಕೆ.ಎಸ್.ಲಿಂಗೇಶ್ ಮಾತ ನಾಡಿ, ಪಕ್ಷಾತೀತವಾಗಿ ಕಾರ್ಯಕ್ರಮ ನಡೆಸಲಾಗುವುದು’ ಎಂದರು.

ಜಿಲ್ಲಾಧಿಕಾರಿ ಆರ್.ಗಿರೀಶ್, ಹೆಚ್ಚುವರಿ ಎಸ್ಪಿ ಬಿ.ಎನ್‌.ನಂದಿನಿ, ಜಿ.ಪಂ ಸಿಇಒ ಬಿ.ಎ. ಪರಮೇಶ್, ಉಪವಿಭಾಗಾಧಿಕಾರಿ ಪ್ರತೀಕ್ ಬಯಾಲ್, ತಹಶೀಲ್ದಾರ್ ಮೋಹನ್ ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ಹುಲ್ಲಳ್ಳಿ ಸುರೇಶ್, ತಾಲ್ಲೂಕು ಅಧ್ಯಕ್ಷ ಎ.ಎಸ್.ಆನಂದ್, ಹಳೇಬೀಡು- ಬೇಲೂರು ಪ್ರಾಧಿಕಾರ ಅಧ್ಯಕ್ಷ ಎ.ಎಸ್.ಬಸವರಾಜು, ಜಿ.ಪಂ. ಮಾಜಿ ಸದಸ್ಯೆ ಜಯಶೀಲಾ ಜಯಶಂಕರ್ ಇದ್ದರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT