ಮಾವನಿಂದ ಅತ್ಯಾಚಾರ: ವಿಷ ಸೇವಿಸಿದ್ದ ಸೊಸೆ ಸಾವು

ಹಾಸನ: ಮಾವನಿಂದ ಅತ್ಯಾಚಾರಕ್ಕೀಡಾಗಿ, ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದ ಮಹಿಳೆ ಭಾನುವಾರ ರಾತ್ರಿ ಮೃತಪಟ್ಟ ಘಟನೆ ಬೇಲೂರು ತಾಲ್ಲೂಕಿನಲ್ಲಿ ವರದಿಯಾಗಿದೆ. ಆರೋಪಿ ಬಂಧಿಸಲಾಗಿದ್ದು, ನ್ಯಾಯಾಂಗ ವಶಕ್ಕೆ ಒಪ್ಪಿಸಲಾಗಿದೆ.
ಡಿ. 29ರಂದು ಕೃತ್ಯ ನಡೆದಿತ್ತು. ಯಾರಿಗಾದರೂ ಹೇಳಿದರೆ, ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದರಿಂದ, ಸಂತ್ರಸ್ತೆ ಮನನೊಂದು ವಿಷ ಸೇವಿಸಿದ್ದರು. ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.
ಪೋಷಕರು, ಸಂಬಂಧಿಕರು ಮಹಿಳೆಯ ಗಂಡನ ಮನೆ ಮುಂದೆ ಸೋಮವಾರ ಪ್ರತಿಭಟಿಸಿದರು.ಎರಡೂ ಕುಟುಂಬಗಳ ನಡುವೆ ವಾಗ್ವಾದ ನಡೆದಿದೆ. ಪೊಲೀಸರು ಮಧ್ಯ ಪ್ರವೇಶಿಸಿ, ಪರಿಸ್ಥಿತಿ ಶಾಂತಗೊಳಿಸಿದರು. ಮೃತಳ ಸಂಬಂಧಿಕರುದೂರು ನೀಡಿದ್ದಾರೆ.
ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.