ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹಾಸನ: ಪ್ರಜ್ವಲ್‌ ರೇವಣ್ಣ ಸರ್ಕಾರಿ ನಿವಾಸಕ್ಕೆ FSL ತಂಡ ಭೇಟಿ

ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ.
Published 13 ಮೇ 2024, 7:02 IST
Last Updated 13 ಮೇ 2024, 7:02 IST
ಅಕ್ಷರ ಗಾತ್ರ

ಹಾಸನ: ಸಂಸದ ಪ್ರಜ್ವಲ್‌ ರೇವಣ್ಣ ವಿರುದ್ಧ ಅತ್ಯಾಚಾರ ಪ್ರಕರಣ ದಾಖಲಾಗಿರುವ ಹಿನ್ನೆಲೆಯಲ್ಲಿ ನಗರದ ಸಂಸದರ ನಿವಾಸಕ್ಕೆ ಎಫ್‌ಎಸ್ಎಲ್ ತಂಡ ಭೇಟಿ ನೀಡಿದ್ದು, ಸಾಕ್ಷ್ಯ ಸಂಗ್ರಹ ಮಾಡುತ್ತಿದೆ.

ನಗರದ ಆರ್.ಸಿ.ರಸ್ತೆಯಲ್ಲಿರುವ ಸಂಸದರ ನಿವಾಸಕ್ಕೆ ಹಾಕಿದ್ದ ಬೀಗವನ್ನು ಸ್ಥಳೀಯ ಪೊಲೀಸರ ಸಮ್ಮುಖದಲ್ಲಿ ತೆರೆದು ಎಫ್‌ಎಸ್‌ಎಲ್ ತಂಡ‌ ಒಳಪ್ರವೇಶಿಸಿ ಸಾಕ್ಷ್ಯಕ್ಕಾಗಿ ಹುಡುಕಾಟ ಆರಂಭಿಸಿದೆ.

ಎಂಪಿ ಕ್ವಾರ್ಟರ್ಸ್ ಎದುರು ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ. ಈಗಾಗಲೇ ಎಸ್ಐಟಿ ತಂಡ ಸಂತ್ರಸ್ತೆಯ ಸ್ಥಳ ಮಹಜರು ಮಾಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT